ಚಿಕ್ಕಬಳ್ಳಾಪುರ: 2019ರ ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಎದುರಿಸಲಿವೆ ಎಂದು ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೋಲಿಸಲು ವಿಪಕ್ಷಗಳು ಸನ್ನದ್ಧವಾಗಿವೆ. ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದರಿಂದ ಕಾಂಗ್ರೆಸ್ ಪಕ್ಷಕ್ಕೆ 18 ಸೀಟುಗಳು ದೊರೆಯಲಿವೆ ಎಂದು ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಗೆ ಸಾಕಷ್ಟು ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನು ಗಳಿಸುವ ದೃಷ್ಟಿಯಿಂದ ಚುನಾವಣಾ ಪೂರ್ವ ಮೈತ್ರಿಗೆ ಮುಂದಾಗಿದೆ. ಇದುವರೆಗೂ ಎರಡೂ ಪಕ್ಷಗಳ ಸೀಟು ಹಂಚಿಕೆ ಬಗ್ಗೆ ಇದ್ದ ಗೊಂದಲ ಬಗೆಹರಿದೆ ಎಂದು ಅವರು ಹೇಳಿದರು.