ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಖಂಡನೀಯ: ಸಿದ್ದರಾಮಯ್ಯ

‘ಗೋಡ್ಸೆಯನ್ನು ದೇವರಾಗಿ ಕಾಣುವ ಪ್ರಧಾನಿ ಮೋದಿ ಗುಜರಾತ್‍ನಲ್ಲಿ ಕೋಮುಗಳ ಸಂಘರ್ಷದ ವಿರುದ್ಧ ಮಾತನಾಡಬೇಕು. ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಬೇಕು’ ಎಂದು ಜಿಗ್ನೇಶ್ ಮೆವಾನಿ ಟ್ವೀಟ್ ಮಾಡಿದ್ದರು.

Written by - Zee Kannada News Desk | Last Updated : Apr 25, 2022, 08:57 PM IST
  • ಸುಳ್ಳು ಆರೋಪದ ಮೇಲೆ ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ ಜಿಗ್ನೇಶ್ ಮೆವಾನಿ ಬಂಧನ
  • ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ
  • ರಾಜಕೀಯ ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಈ ರೀತಿ ಬಾಯಿಮುಚ್ಚಿಸುವುದು ಸರ್ವಾಧಿಕಾರಿ ಧೋರಣೆ
ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಖಂಡನೀಯ: ಸಿದ್ದರಾಮಯ್ಯ title=
ಜಿಗ್ನೇಶ್ ಮೆವಾನಿ ಬಂಧನ ಖಂಡಿಸಿದ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದ ವಡಗಾಮ್ ಕ್ಷೇತ್ರದ ಶಾಸಕ ಮತ್ತು ದಲಿತ ನಾಯಕ ಜಿಗ್ನೇಶ್‌ ಮೆವಾನಿ ಅವರನ್ನು ಬಂಧಿಸಿರುವುದಕ್ಕೆ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಸುಳ್ಳು ಆರೋಪದ ಮೇಲೆ ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ ಜಿಗ್ನೇಶ್ ಮೆವಾನಿ ಅವರ ಬಂಧನದ ಮೂಲಕ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ. ರಾಜಕೀಯ ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಈ ರೀತಿ ಬಾಯಿಮುಚ್ಚಿಸುವುದು ಸರ್ವಾಧಿಕಾರಿ ಧೋರಣೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಯಾವುದೇ ಹೇಳಿಕೆಗಳಿಂದ ಯಾರಿಗಾದರೂ ಮಾನ ನಷ್ಟವಾಗಿದ್ದರೆ ಸಂಬಂಧಿತರಿಗೆ ನ್ಯಾಯಾಲಯದಲ್ಲಿ ನ್ಯಾಯ ಕೇಳಲು ಅವಕಾಶ ಇದೆ. ಇದರ ಬದಲಿಗೆ ಪೊಲೀಸರನ್ನು ದುರುಪಯೋಗಪಡಿಸಿಕೊಂಡು ತಮ್ಮ ರಾಜಕೀಯ ವಿರೋಧಿಗಳನ್ನು ಹಣಿಯಲು ಹೊರಟಿರುವುದು ಫ್ಯಾಸಿಸ್ಟ್ ಬುದ್ದಿ. ಭಾರತದಲ್ಲಿ ಇದು ನಡೆಯದು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಲಬಾರ್ ಗೋಲ್ಡ್ ಕಂಪನಿ ವಿರುದ್ಧ ಹಿಂದೂ ಸಂಘಟನೆ ಆಕ್ರೋಶ: ಚಿನ್ನ ಖರೀದಿಸದಂತೆ ಎಚ್ಚರಿಕೆ

‘ದೇಶವನ್ನು ಪ್ರೀತಿಸುವ, ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರೂ ಜಿಗ್ನೇಶ್ ಮೆವಾನಿ ಜೊತೆಗಿದ್ದಾರೆ. ಒಬ್ಬ ಜಿಗ್ನೇಶ್‍ರನ್ನು ಜೈಲಿಗೆ ಕಳಿಸಿದ್ದೇವೆ ಎಂದು ಬೀಗುವುದು ಬೇಡ. ಈ ಬೆಳವಣಿಗೆಯಿಂದಾಗಿ ದೇಶದ ತುಂಬ ನೂರಾರು ಜಿಗ್ನೇಶರು ಹುಟ್ಟಿಕೊಂಡು ಹೋರಾಟವನ್ನು ಮುಂದುವರಿಸಲಿದ್ದಾರೆ ಎನ್ನುವುದು ನೆನಪಲ್ಲಿರಲಿ’ ಅಂತಾ ಸಿದ್ದರಾಮಯ್ಯ ಬಿಜೆಪಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಜಿಗ್ನೇಶ್ ಟ್ವೀಟ್ ವಾರ್!

‘ಗೋಡ್ಸೆಯನ್ನು ದೇವರಾಗಿ ಕಾಣುವ ಪ್ರಧಾನಿ ಮೋದಿಯವರು ಗುಜರಾತ್‍ನಲ್ಲಿ ಕೋಮುಗಳ ಸಂಘರ್ಷದ ವಿರುದ್ಧ ಮಾತನಾಡಬೇಕು. ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಬೇಕು’ ಎಂದು ಜಿಗ್ನೇಶ್ ಮೆವಾನಿ ಟ್ವೀಟ್ ಮಾಡಿದ್ದರು. ಪ್ರಧಾನಿ ವಿರುದ್ಧ ಆಕ್ಷೇಪಾರ್ಯ ಟ್ವೀಟ್ ಮಾಡಿದ ಆರೋಪದಡಿ ಜಿಗ್ನೇಶ್‍ರನ್ನು ಅಸ್ಸಾಂನ ಪೊಲೀಸರು ಏ.19ರಂದು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗೊಂಡಿದ್ದ ಅವರನ್ನು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ ಬಂಧಿಸಲಾಗಿದೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರೇ ಪಿಎಸ್ಐ ನೇಮಕಾತಿ ಹಗರಣದ ಆರೋಪಿ: ಬಿಜೆಪಿ ಆರೋಪ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News