Karnataka CM: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧ - ಸೋನಿಯಾ ಗಾಂಧಿ

Siddaramaiah Swearing Ceremony: ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭ ಹಾರೈಕೆಯ ಭರ ಪೂರವೇ ಹರಿದು ಬಂದಿದೆ. ಈ ಹಿನ್ನಲೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸಹ ವಿಡಿಯೋ ಮೂಲಕ ಶುಭ ಕೋರಿದ್ದಾರೆ.

Written by - Zee Kannada News Desk | Last Updated : May 20, 2023, 08:26 PM IST
  • ಸಿದ್ದರಾಮಯ್ಯ ಹಾಗೂ ಡಿಕೆ ಶಿಗೆ ಶುಭ ಕೋರಿದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ
  • ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ.
  • ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ ಎಂದ ಸೋನಿಯಾ ಗಾಂಧಿ
Karnataka CM: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧ - ಸೋನಿಯಾ ಗಾಂಧಿ  title=

ದೆಹಲಿ: ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆ​ಸ್​ ಪಕ್ಷವು ಸರ್ಕಾರ ರಚಿಸಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಅವರಿಗೆ ಶುಭಾಶಯ ಕೋರಲು ಸಿದ್ದು, ಅಭಿಮಾನಿ ಸೇರಿದಂತೆ ಪಕ್ಷದ ಕಾರ್ಯಕರ್ತರು , ರಾಜಕೀಯ ಗಣ್ಯರು, ಸಿನಿ ತಾರೆಯರು ಸಮುಖದಲ್ಲಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Karnataka CM: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸ್ಯಾಂಡಲ್​ವುಡ್ ತಾರೆಯರ ಸಮಾಗಮ!

ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭ ಹಾರೈಕೆಯ ಭರ ಪೂರವೇ ಹರಿದು ಬಂದಿದೆ. ಈ ಹಿನ್ನಲೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸಹ ವಿಡಿಯೋ ಮೂಲಕ ಶುಭ ಕೋರಿದ್ದಾರೆ.

ನಮಸ್ಕಾರ, ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿರುವ ಕರ್ನಾಟಕ ರಾಜ್ಯದ ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಈ ಬಹುಮತ ಜನಪರ ಸರ್ಕಾರಕ್ಕಾಗಿ, ಈ ಬಹುಮತ ಬಡವರ ಪರವಾದ ಸರ್ಕಾರಕ್ಕಾಗಿ.

ಇದನ್ನೂ ಓದಿ: Former CM Basavaraja Bommai: ಕರ್ನಾಟಕದ ಜನತೆಯ ನಿರೀಕ್ಷೆ ಹುಸಿ: ಸರ್ಕಾರದ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಇದು ವಿಭಜನೆ ರಾಜಕೀಯ ಹಾಗೂ ಭ್ರಷ್ಟಾಚಾರವನ್ನು ತಿರಸ್ಕರಿಸುವ ಜನಾದೇಶವಾಗಿದೆ.ಇಂದು ರಚನೆಯಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದು, ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ ಎನ್ನುವ  ಮೂಲಕ ರಾಜ್ಯದ ನೂತನ ಮುಖ್ಯ ಮಂತ್ರಿಗೆ ಸಾಥ್‌ ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News