ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ: ಜೆಡಿಎಸ್ ಕಿಡಿ

ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ ಎಂದು ಜೆಡಿಎಸ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದೆ.

Written by - Zee Kannada News Desk | Last Updated : Oct 17, 2023, 03:47 PM IST
  • ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ. ಲೂಟಿ,
  • ದಂಧೆ, ಅಕ್ರಮವೇ ಅದರ ಗ್ಯಾರಂಟಿ. ಅನ್ಯರಾಜ್ಯಗಳ ಚುನಾವಣೆ ಇವರಿಗೆ ಚಿನ್ನದ ಗಣಿ. ಹೈಕಮಾಂಡ್ ಆಸರೆಯೇ ಅಕ್ಷಯ ಪಾತ್ರೆ..
  • ಇಂಥವರಿಗೆ ಕುಮಾರಸ್ವಾಮಿಯವರ ಕೂಗು ಕೇಳುವುದೇ? ಇಲಾಖೆಗೊಂದು ಹಿಟಾಚಿ ಇಟ್ಟುಕೊಂಡು 24X7 ಬಾಚುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ: ಜೆಡಿಎಸ್ ಕಿಡಿ title=
file photo

ಬೆಂಗಳೂರು: ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ ಎಂದು ಜೆಡಿಎಸ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದೆ.

ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ ಕಿಡಿ ಕಾರಿರುವ ಜೆಡಿಎಸ್ "ಅವರು ರಾಜ್ಯಕ್ಕೆ ಉಪ ಮುಖ್ಯಮಂತ್ರಿ. ಅವರನ್ನು 'ಮೂರ್ಖ ಶಿಖಾಮಣಿ ' ಎನ್ನುವುದು ತರವಲ್ಲ. ಅಸಲಿಗೆ, ಹಾಗೆಂದು ಹೇಳಲು ನಮಗೂ ಇಷ್ಟವಿಲ್ಲ ಬಿಡಿ. ಲೂಟಿಯನ್ನೇ ನಿತ್ಯಕಾಯಕ, ದಂಧೆಯನ್ನೇ ದಿನವಹಿ ಧನಾರ್ಜನೆಗೆ ರಹದಾರಿ ಮಾಡಿಕೊಂಡಿರುವ, ಕಂಡ ಕಂಡವರ ಜಮೀನುಗಳಿಗೆ ಬೇಲಿ ಬಿಗಿದು ಅವರ ರಕ್ತ ಹಿರುತ್ತಿರುವ ವ್ಯಕ್ತಿ ರಾಜ್ಯಕ್ಕೆ ಉಪ ಮುಖ್ಯಮಂತ್ರಿ!! ಇದಲ್ಲವೇ ಕನ್ನಡಿಗರ ದೌರ್ಭಾಗ್ಯ ಎಂದು ಹೇಳಿದೆ.

ಅವರ 'ಅಂತ್ಯವಿಲ್ಲದ ಹೈ ಕಮಾಂಡ್ ಕೃಪಾಪೋಷಿತ ಅಕ್ರಮ'ಗಳಿಗೆ ಕೊನೆ ಎಂಬುದಿಲ್ಲವೇ? ಎಂದು ಜನ ಕೇಳುತ್ತಿದ್ದಾರೆ. ಕೊನೆ ಇದೆ, ಇದ್ದೇ ಇರುತ್ತದೆ.. ಕಾಯಬೇಕಷ್ಟೇ. ವಾಕ್ಯ ಎಂದ ಮೇಲೆ ಪುಲ್ ಸ್ಟಾಪ್ ಇರಲೇಬೇಕು.

ಇದನ್ನೂ ಓದಿ: ಕುಮಾರಸ್ವಾಮಿ ಮಾತಿಗೆ ಅವರದ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್ ಟೀಕೆ

ಸೂರ್ಯ ಪಶ್ಚಿಮಕ್ಕೆ ವಾಲಿದೊಡನೆ ಕಂಡವರ ಪಕ್ಷಗಳವರ ಮನೆ ಬಾಗಿಲ ಮುಂದೆ ಪರ್ಸಂಟೇಜ್ ಪಟಾಲಂ ಪ್ರತ್ಯಕ್ಷ! ಇಂಥಾ ಕಲುಷಿತ ರಾಜಕಾರಣ ಶೋಭೆಯೇ? ನುಡಿದಂತೆ ನಡೆಯುತ್ತೇವೆ ಎಂದರೆ ಇದೇನಾ? ಜನರ ದುಡ್ಡು, ಇವರದ್ದು ಜಾತ್ರೆ. ಇದೇ ಇವತ್ತಿನ ಕರ್ನಾಟಕದ ಚಿತ್ರಣ. ರಾಜ್ಯದ ಜನರಿಗೆ ಇವರ ಭಂಡಾರವೆಲ್ಲ ಗೊತ್ತಾಗಿದೆ. ಆ ಭಂಡಾರ ಬಿಚ್ಚಿಕೊಂಡ ಕೂಡಲೇ ಬಾಲಸುಟ್ಟ ಬೆಕ್ಕಿನಂತೆ ವಿಲವಿಲನೆ ಒದ್ದಾಡಿದರೆ ಹೇಗೆ? ಅವರ ಫಸಲು, ಅವರವರ ಫಲ ಎಂದು ಹೇಳಿದೆ.

ಕರ್ನಾಟಕವನ್ನು ಹೈ ಕಮಾಂಡ್ ಗೆ ಒತ್ತೆ ಇಟ್ಟ ಭೂಪತಿ, ಆಧುನಿಕ ಈಸ್ಟ್ ಇಂಡಿಯಾ ಕಂಪನಿಗಳ ಪೊಲಿಟಿಕಲ್ ಏಜೆಂಟ್, ಕರುನಾಡಿನ ಕರೋಡ್ ಪತಿ, ಬದುಕೆಲ್ಲ ಬ್ರೋಕರೇಜ್ ಮಾಡಿಕೊಂಡೇ ಕೊಳ್ಳೆ ಹೊಡೆದ ವ್ಯಕ್ತಿ, ಈಗ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದೇ? ಅರೆರೆ.. ಇವರ SST, YST ಅಬ್ಬರ ಕಂಡು GSTಯೇ ಬೆಚ್ಚಿದೆ. ಇದೇ ನೋಡಿ ಕರ್ನಾಟಕದ ಮಾದರಿ! ಎಂದು ಟೀಕಿಸಿದೆ.

ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ. ಲೂಟಿ, ದಂಧೆ, ಅಕ್ರಮವೇ ಅದರ ಗ್ಯಾರಂಟಿ. ಅನ್ಯರಾಜ್ಯಗಳ ಚುನಾವಣೆ ಇವರಿಗೆ ಚಿನ್ನದ ಗಣಿ. ಹೈಕಮಾಂಡ್ ಆಸರೆಯೇ ಅಕ್ಷಯ ಪಾತ್ರೆ.. ಇಂಥವರಿಗೆ ಕುಮಾರಸ್ವಾಮಿಯವರ ಕೂಗು ಕೇಳುವುದೇ? ಇಲಾಖೆಗೊಂದು ಹಿಟಾಚಿ ಇಟ್ಟುಕೊಂಡು 24X7 ಬಾಚುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ: ಸಿಎಂ ಸಿದ್ದರಾಮಯ್ಯ

ಸ್ವತಃ ತಾನೇ ಕೊಳೆತು ನಾರುತ್ತಿದೆ. ಆದರೆ, ಪಕ್ಕದ ಮನೆ ಕಂಪೌಡಿನ ಮೇಲೆ ಮರದೆಲೆ ಬಿದ್ದಿದೆ ಎಂದು ಕಾಂಗ್ರೆಸ್ ಅಂಗೈ ಪರಚಿಕೊಳ್ಳುತ್ತಿದೆ. ಪರಚಿಕೊಳ್ಳುವುದರ ಜತೆಗೆ, ಕರ್ನಾಟಕವನ್ನೇ ಪಾಪರ್ ಮಾಡುವ ದೊಡ್ಡ ಗುರಿ ಪರ್ಸಂಟೇಜ್ ಪಟಾಲಂ ಹಾಕಿಕೊಂಡಿರುವ ಗುರಿ. ಅದರ ಪಾಲಿಗೆ ಹೈ ಕಮಾಂಡ್ ಸೇವೆಯೇ ಆನಂದದಾಯಕ ಸೇವೆ!ಎಂದು ವಾಗ್ದಾಳಿ ನಡೆಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News