ಬೆಂಗಳೂರು: ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರಸಾಹಸ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಕಿಡಿ ಕಾರಿದ್ದಾರೆ.
ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರಿಕ ಸರಬರಾಜು ಸಚಿವರಿಗಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಕನಿಷ್ಠ ಸೌಜನ್ಯವನ್ನೂ ತೋರಿಸಲಿಲ್ಲ.
ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ FCI ವಿಭಾಗೀಯ ವ್ಯವಸ್ಥಾಪಕರಿಗೆೆ 9/6/23 ಪತ್ರ ಮುಖೇನ ವಿನಂತಿ ಮಾಡುತ್ತಾರೆ. 12/6/23ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ.
ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ.
13/6/23 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ FCI ಕೇಂದ್ರ ಕಚೇರಿಗೆ OMSS ಕೋಟಾದಡಿ ಅಕ್ಕಿ ಮಾರಾಟವನ್ನು ನಿರ್ಬಂಧಿಸಿರುವ ಬಗ್ಗೆ ಆದೇಶ ಬರುತ್ತದೆ. ಈ ತೀರ್ಮಾನವನ್ನು 08/06/23 ರಂದು ನಡೆದ ಸಭೆಯಲ್ಲಿ ತೀರ್ಮಾನವಾಗಿತ್ತು.
ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ ಬದಲಿಗೆ FCI ಮುಖ್ಯಸ್ಥರಿಗೆ ಬರೆದಿರುವ ಪತ್ರವಿದು. ನೆನಪಿಡಿ, ಈ ನಿರ್ಧಾರ ರಾಜ್ಯ ಸರ್ಕಾರ FCI ಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿ ತೆಗೆದುಕೊಂಡ ತೀರ್ಮಾನ.
ಕೇಂದ್ರ ಸರಕಾರ ಮುಂಗಾರು ಮಳೆ , ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ.
ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ಕೆಟ್ಟ ರಾಜಕಾರಣ ಮಾಡುವುದು ಬೇಡ.
ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರಸಾಹಸ ಮಾಡುತ್ತಿದೆ.
ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ…
— C T Ravi 🇮🇳 ಸಿ ಟಿ ರವಿ (@CTRavi_BJP) June 20, 2023
ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿ ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ. (ಕೋವಿಡ್ ಸಂಕಷ್ಟದ 84 ಕೋಟಿ ಜನರಿಗೆ ಕಾಲದಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿಯನ್ನು ನೀಡಿದೆ)
ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರಕಾರವೇ ಪೂರೈಸುತ್ತಿದೆ. ಆದ ಕಾರಣ, ರಾಜ್ಯ ಸರಕಾರ ಬಡ ಕುಟುಂಬಗಳಿಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೇಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ ಹತ್ತು ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ.
ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ.
ಅನಗತ್ಯವಾಗಿ ಕಾಂಗ್ರೆಸ್ ಪಾರ್ಟಿ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ.
ದೇಶದ ಯಾವುದೇ ಕುಟುಂಬವು ಅಕ್ಕಿ ಅಥವಾ ಗೋಧಿ ಇಲ್ಲ ಎಂದು ಹಸಿವಿನಿಂದ ಒಂದು ದಿನವು ಕಳೆದಿಲ್ಲ. ಹಾಗೆ ಅವರು ಕಳೆಯಬಾರದು ಎಂದೇ ಕೇಂದ್ರವು ಅವರಿಗೆ ಉಚಿತ ರೇಷನ್ ನೀಡುತ್ತಿರುವುದು.
ಇವರ ರಾಜಕಾರಣಕ್ಕೆ ಮೋದಿಯವರ ವಿರುದ್ದ ಉತ್ಪ್ರೇಕ್ಷಿತ ಸುಳ್ಳಿನ ಕಂತೆಯ ಮೂಲಕ ನಡೆಯುತ್ತಿರುವ ದುರುದ್ದೇಶದ ಆರೋಪವನ್ನು ತೀವ್ರವಾಗಿ ಖಂಡಿಸುತ್ತೇನೆ.
ಅತಿ ಮುಖ್ಯ ವಿಚಾರವೆಂದರೆ ಸನ್ಮಾನ್ಯ ಸಿದ್ದರಾಮಯ್ಯನವರೆ ನೀವು ಕೊಡಲು ನೀಡಿರುವ ಹತ್ಕು ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ.
ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆೆ ಬಡವರ ಆಹಾರದ ಅಗತ್ಯವನ್ನು ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ