ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!: ಕಾಂಗ್ರೆಸ್

BJP VS Congress: "ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ಮೋದಿಯವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.  

Written by - Puttaraj K Alur | Last Updated : Mar 3, 2023, 01:28 PM IST
  • ಅಮಿತ್ ಶಾ ಇಂದು ರಾಜ್ಯಕ್ಕೆ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?
  • ಈ ಹಣ #PayCMಗೆ ತಲುಪಿಸುವುದಕ್ಕಾ ಅಥವಾ #PayPMಗೆ ತಲುಪಿಸುವುದಕ್ಕಾ?
  • ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು ಬಿಜೆಪಿ? ಎಂದು ಪ್ರಶ್ನಿಸಿದ ಕಾಂಗ್ರೆಸ್
ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!: ಕಾಂಗ್ರೆಸ್ title=
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

 ಬೆಂಗಳೂರು: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ! ಎಂದು ಕಾಂಗ್ರೆಸ್ ಆರೋಪಿಸಿದೆ. 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ ರೆಡ್‍ಹ್ಯಾಂಡ್‍ ಆಗಿ ಸಿಕ್ಕಿಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

‘#ElectionCollection ಹ್ಯಾಶ್‍ಟ್ಯಾಗ್‍ ಬಳಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ ಬಿಜೆಪಿ?’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: Karnataka Lokayukta : ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕನ ಮಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!

‘ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು ಬಿಜೆಪಿ? ಈ ಹಣ #PayCMಗೆ ತಲುಪಿಸುವುದಕ್ಕಾ ಅಥವಾ #PayPMಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ಮೋದಿ- ಅಮಿತ್ ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮಾತಾಡುತ್ತಿಲ್ಲವೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘"ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ಮೋದಿಯವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ 3 ಬಾರಿ ಬರುತ್ತಿರುವಿರಾ? "ಶಬಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ?’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲಿನಿಂದಲೂ 500 ರೂ. ಕೊಟ್ಟು ಜನರನ್ನು ಸೇರಿಸುತ್ತಿದೆ..!

‘ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್‌ಗಳನ್ನೇ ಕಟ್ಟಿಸಿರುವಂತಿದೆ! ಒಬ್ಬೊಬ್ಬರಲ್ಲೂ ಲಾರಿಯಲ್ಲಿ ಲೋಡ್ ಮಾಡುವಷ್ಟು ಭ್ರಷ್ಟ ಹಣ ತುಂಬಿ ತುಳುಕುತ್ತಿದೆ. ಹೀಗಿದ್ದರೂ ಬಿಜೆಪಿಗರತ್ತ ಸುಳಿಯದ ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ ಅಮಿತ್ ಶಾ ಅವರೇ?’ ಎಂದು ಕಾಂಗ್ರೆಸ್ ಕುಟುಕಿದೆ.

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...

  

Trending News