ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!’ ಎಂದು ಕುಟುಕಿದೆ.
‘#PuppetCM ಬಸವರಾಜ್ ಬೊಮ್ಮಾಯಿಯವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ. ಸಿಎಂ ಬೊಮ್ಮಾಯಿಯವರೇ ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ #PuppetCM ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ?’ ಎಂದು ಪ್ರಶ್ನಿಸಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!
40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.
— Karnataka Congress (@INCKarnataka) August 9, 2022
ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ & ಪರಮ ಬಾಲಿಶ: ಎಚ್ಡಿಕೆ
‘ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬಸವರಾಜ್ ಬೊಮ್ಮಾಯಿಯವರನ್ನು ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ?’ ಎಂದು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ @BSBommai ಅವರನ್ನ ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ!
ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್!
ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ @BJP4Karnataka?
— Karnataka Congress (@INCKarnataka) August 9, 2022
‘ಬೊಮ್ಮಾಯಿಯವರೇ ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬೊಮ್ಮಾಯಿಯವರೇ ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ #BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ’ ಎಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ ಕೊಡಲು ಚಿಂತನೆ
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ.
ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು @BJP4Karnataka ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ.
ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ.#PuppetCM
— Karnataka Congress (@INCKarnataka) August 9, 2022
‘ಬಿಜೆಪಿ ಸರ್ಕಾರದ್ದು 40% ಕಮಿಷನ್ ದಂಧೆಯಾದರೆ, ಬಿಜೆಪಿ ಕಾರ್ಯಕರ್ತರದ್ದು ಡ್ರಗ್ ಪೆಡ್ಲಿಂಗ್, ನಕಲಿ ನೋಟಿನ ದಂಧೆ! ಬಿಜೆಪಿ ಐಟಿ ಸೆಲ್ಲಿನ #2rupeesbaktaನ ನಕಲಿ ನೋಟ್ ಪ್ರಿಂಟ್ ದಂಧೆಯಲ್ಲಿ ಬಿಜೆಪಿಗೂ 40% ಪಾಲು ಇದೆಯೇ? ಇಂತಹ ‘ದೋ ನಂಬರ್ ದಂಧಾ’ದಿಂದಲೇ #BJPBrashtotsava ನಡೆಸಲು ಹಣ ಕ್ರೋಡೀಕರಣವೇ?. ದೇಶಭಕ್ತಿ ಹೆಸರಲ್ಲಿ ವ್ಯಾಪಾರ, ಧರ್ಮದ ಹೆಸರಲ್ಲಿ ಅಕ್ರಮ. ಇವೇ ಬಿಜೆಪಿಯ ಅಸಲಿ ಗುಣ. ಅಯೋಧ್ಯೆಯಲ್ಲಿ ಶಾಸಕ ಸೇರಿದಂತೆ ಬಿಜೆಪಿಯ 40 ಮಂದಿ ಅಕ್ರಮ ಭೂವ್ಯವಹಾರ ನಡೆಸಿದ್ದು ಹಿಂದೂ ಧರ್ಮಕ್ಕೆ ಎಸಗಿದ ಮಹಾದ್ರೋಹ. ಮರ್ಯಾದೆ ಬಿಟ್ಟಿರುವ ಬಿಜೆಪಿ ಮರ್ಯಾದಾ ಪುರುಷೋತ್ತಮನ ಮರ್ಯಾದೆ ಕಳೆಯುತ್ತಿರುವುದಕ್ಕೆ ರಾಮ ಎಂದಿಗೂ ಕ್ಷಮಿಸುವುದಿಲ್ಲ’ವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.