ಬೆಂಗಳೂರು: PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ’ ಎಂದು ಕಾಂಗ್ರೆಸ್ ಕುಟುಕಿದೆ.
ಇದನ್ನೂ ಓದಿ: ಆಸಿಡ್ ದಾಳಿಗೊಳಗಾದ ಮಹಿಳೆಗೆ ಸರ್ಕಾರಿ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
‘PSI ಹಗರಣದದಿಂದ ಸಂತ್ರಸ್ತರಾಗಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಆರಗ ಜ್ಞಾನೇಂದ್ರ ಅವರೇ? ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು.@JnanendraAraga ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ?
ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ.
— Karnataka Congress (@INCKarnataka) November 1, 2022
‘ಇವತ್ತು ಖಾಲಿ ಪೇಪರ್ ಇದ್ದರೂ ಸಹ ಡಿವೈಎಸ್ಪಿ ಆಗಬಹುದು ಎಂದು ಸ್ವತಃ ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ್ ಅವರೇ ಹೇಳಿದ್ದಾರೆ. ಹಣದೊಂದಿಗೆ ಖಾಲಿ ಪೇಪರ್ ಇದ್ದರೆ ವ್ಯಾಪಾರಕ್ಕಿಟ್ಟಿರುವ ಸರ್ಕಾರಿ ಹುದ್ದೆಗಳು ಸಿಗುತ್ತವೆ ಎಂಬುದನ್ನು ಸೊಗಸಾಗಿ ಹೇಳಿದ್ದಾರೆ ಅಲ್ಲವೇ ಸಿಎಂ ಬಸವರಾಜ ಬೊಮ್ಮಾಯಿಯವರೇ? #40PercentSarkaraದ ಅಕ್ರಮ ನೇಮಕಾತಿಗಳು ಖಾಲಿ ಪೇಪರ್ನಲ್ಲಿಯೇ ನಡೆಯುತ್ತವೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು.@JnanendraAraga ಅವರೇ, ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ?
ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ. pic.twitter.com/Xls7y2sVYD
— Karnataka Congress (@INCKarnataka) November 1, 2022
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: 25ಕ್ಕೂ ಹೆಚ್ಚು ಜನರ ಬಂಧನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.