ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ಕಾಯ್ದೆ ರದ್ದು: ಸಿದ್ದರಾಮಯ್ಯ

ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021’ ಮಂಡಿಸಿದ್ದರು.

Written by - Zee Kannada News Desk | Last Updated : Dec 27, 2021, 04:57 PM IST
  • ಈ ಕಾಯ್ದೆ RSSನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು?
  • ನಾವು ಅಧಿಕಾರಕ್ಕೆ ಬಂದ 1 ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಕಾಯ್ದೆ ರದ್ದುಗೊಳಿಸುತ್ತೇವೆ
  • ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ಕಾಯ್ದೆ ರದ್ದು: ಸಿದ್ದರಾಮಯ್ಯ title=
ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುತ್ತೇವೆಂದ ಸಿದ್ದರಾಮಯ್ಯ

ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನ(Belagavi Winter Session)ದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡಿ ವಿಧಾನಸಭೆಯಲ್ಲಿ ಒಪ್ಪಿಗೆ ಪಡೆದಿದೆ.

‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021’(Right to Freedom of Religion Bill 2021) ವಿಚಾರವಾಗಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ’ ಅಂತಾ ಹೇಳಿದ್ದಾರೆ.   

ಇದನ್ನೂ ಓದಿ: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’: ಹಿಂದಿ ಹೇರಿಕೆ ವಿರುದ್ಧ ಮತ್ತೆ ಗುಡುಗಿದ ಎಚ್​ಡಿಕೆ

‘ಮೂಲ ಮತಾಂತರ ನಿಷೇಧ ಕಾಯ್ದೆ(Anti-conversion Bill)ಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ RSSನ ಉದ್ದೇಶವಾಗಿತ್ತು ಎಂದು ಕೆ.ಎಸ್.ಈಶ್ವರಪ್ಪನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ RSSನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು?’ ಎಂದು ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ.

‘2015ರಲ್ಲಿ ಮತಾಂತರ ನಿಷೇಧ ಕಾಯ್ದೆ(Anti-conversion Bill)ಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್.ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು. ನಮಗೆ ಇಂತಹ ಮನುಷ್ಯ ವಿರೋಧಿ ಕಾನೂನಿನಲ್ಲಿ ಹಿಂದೆಯೂ ಆಸಕ್ತಿ ಇರಲಿಲ್ಲ, ಈಗಲೂ ಇಲ್ಲ’ವೆಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ, ಗೃಹ ಸಚಿವರು ಸೇರಿ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ದೂರು ದಾಖಲು, ಕಾರಣ.?

ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನ(Belagavi Winter Session)ದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021’ ಮಂಡಿಸಿದ್ದರು. ಇದಕ್ಕೆ ವಿಪಕ್ಷಗಳ ಆಕ್ರೋಶ ವ್ಯಕ್ತಪಡಿಸಿದ್ದವು. ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದರು.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News