ಆನೆ ಹಾವಳಿ ತಡೆಗೆ 200 ಕೋಟಿ ರೂ ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ : ಅರಣ್ಯ ಸಚಿವ ಈಶ್ವರ ಖಂಡ್ರೆ

ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಪ್ಪಿಸಲು 200 ಕೋಟಿ ರೂ ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

Written by - Prashobh Devanahalli | Edited by - Manjunath Naragund | Last Updated : Dec 11, 2023, 04:52 PM IST
  • ಕಾಡಾನೆ ಹಾವಳಿ ತುರ್ತು ನಿರ್ವಹಣೆಗಾಗಿ ಕ್ಷಿಪ ಕಾರ್ಯಪಡ ತಂಡಗಳನ್ನು ರಚಿಸಿ ನಿರ್ವಹಿಸಲಾಗುತ್ತಿದೆ
  • ಕಾಡಾನೆ ಹಿಮ್ಮೆಟ್ಟಿಸುವ ತಂಡಗಳನ್ನು ರಚಿಸಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ
  • ನಿಸ್ತಂತು ಜಾಲದ ಮೂಲಕ ಮಾಹಿತಿ ಸಂವಹನ ಮಾಡಲಾಗುತ್ತಿದೆ
 ಆನೆ ಹಾವಳಿ ತಡೆಗೆ 200 ಕೋಟಿ ರೂ ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ : ಅರಣ್ಯ ಸಚಿವ ಈಶ್ವರ ಖಂಡ್ರೆ title=
file photo

ಬೆಳಗಾವಿ: ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಪ್ಪಿಸಲು 200 ಕೋಟಿ ರೂ ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯ ಕೆ.ಹರೀಶ್ ಕುಮಾರ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ 312 ಕಿಮೀ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಒಟ್ಟು 200 ಕೋಟಿ ರೂ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ನಡೆಯುತ್ತಿದೆ , ಆನೆ ಹಾವಳಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಶೆ.90 ರಷ್ಟು ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು , ಮಾನವ ಜೀವಹಾನಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು ಎಂದರು.

ಇದನ್ನೂ ಓದಿ: ಸಿಲಿಕಾನ್‌ ಸಿಟಿ ಶಾಲೆಗಳಿಗೆ ಪದೇ ಪದೇ ಬಾಂಬ್‌ ಬೆದರಿಕೆ

ರಾಜ್ಯದಲ್ಲಿ ದಟ್ಟ ಅರಣ್ಯ ವ್ಯಾಪ್ತಿಯಲ್ಲಿ ಹೊಂದಿಕೊಂಡಿರುವ ರಾಷ್ಟ್ರೀಯಯ ಹೆದಾರಿಗಳ ಇಕ್ಕೆಲಗಳಲ್ಲಿ ಕಾಡಾನೆ ಹಾಳಿಯನ್ನು ತಡೆಯುವ ನಿಟ್ಟಿನಲ್ಲಿ ಹದ್ದಾರಿ ಪಕ್ಕದಲ್ಲಿ ಆನೆಗಳ ಇರುವಿಕೆಯ ಬಗ್ಗೆ ಎಚ್ಚರಿಕಾ ಫಲಕಗಳನ್ನು ಅಳವಡಿಸಲಾಗಿದೆ. ಕಾಡಾನೆ ಹಾವಳಿ ಹೆಚ್ಚಳವಾಗಿರುವ ಹಾಸನ ,ಕೊಡಗು, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು, ಚಾಮರಾಜನಗರ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ / ಸಿಬ್ಬಂದಿಗಳನ್ನು ಒಳಗೊಂಡ ಆನೆ ಕಾರ್ಯಪಡೆಯನ್ನು ರಚಿಸಲಾಗಿದೆ.

ಇದನ್ನೂ ಓದಿ: ಬಗೆ ಬಗೆಯ ಕಡಲೆಕಾಯಿ..ಕೆಜಿಗೆ ೮೦ ರೂಪಾಯಿ

ವನ್ಯಪ್ರಾಣಿಗಳಿಗಾಗಿ ಅರಣ್ಯ ಪ್ರದೇಶಗಳ ಒಳಗೆ ನೀರಿನ ಲಭ್ಯತೆ ಹೆಚ್ಚಿಸಲು ರಕ್ಷಿತಾರಣ್ಯಗಳಲ್ಲಿ ಕರೆಗಳ ನಿರ್ಮಾಣ ಹಾಗೂ ಪುನಶ್ವೇತನಗೊಳಿಸಿ ವನ್ಯಪ್ರಾಣಿಗಳ ಆವಾಸ ಸ್ಥಾನವನ್ನು ಅಭಿವೃದ್ಧಿ ಗೊಳಿಸಲಾಗುತ್ತಿದೆ. ಇದರಿಂದ ಕಾಡಾನೆ ಹಾಗೂ ಇತರ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬಾರದಂತೆ ತಡೆಯಲಾಗುತ್ತಿದೆ.ಅರಣ್ಯ ಪ್ರದೇಶಗಳಲ್ಲಿ ಹುಲ್ಲುಗಾವಲು ಸಂರಕ್ಷಣೆ ಹಾಗೂ ಅಭಿವೃದ್ಧಿಗೊಳಿಸಲು ಹೆಚ್ಚಿನ ಅರಣ್ಯ ಪ್ರದೇಶಗಳಲ್ಲಿ ದಟ್ಟವಾಗಿ ಬೆಳೆದ ಲಂಟಾನ ಮತ್ತು ಯುಪಟೋರಿಯಂ ಕಳೆಗಳಿಂದಾಗಿ ಹುಲ್ಲಿನ ಬೆಳವಣಿಗೆಗೆ ತೀವ್ರ ಅಡಚಣೆಯಾಗಿ ಅರಣ್ಯದಲ್ಲಿ ಹುಲ್ಲಿನ ಲಭ್ಯತೆ ಗಣನೀಯವಾಗಿ ಕಡಿಮೆಯಗಿರುವುದರಿಂದ ಹುಲ್ಲು ಬೆಳೆಯುವ ಪ್ರದೇಶಗಳಲ್ಲಿ ಬೆಳೆದಿರುವ ಲಂಟಾನ ಮತ್ತು ಯುಪಟೋರಿಯಂ ಕಳೆಗಳನ್ನು ಕಿತ್ತು ಸ್ವಚ್ಛಗೊಳಿಸಿ ಅರಣ್ಯಕ್ಕೆ ಪೂರಕವಾದ ಹುಲ್ಲು ಬೆಳೆಯಲು ಅನುವು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಶಾಸಕರನ್ನ ಖರೀದಿ ವಸ್ತುಗಳನ್ನಾಗಿ ಮಾಡುವ ವಾತಾವರಣ ಸೃಷ್ಟಿ ಮಾಡ್ತಾ ಇದ್ದಾರೆ- ಕಾನೂನು ಸಚಿವ ಎಚ್‌ಕೆ‌ಪಿ

ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಮನೆ ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆ ತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಕಾಡಾನೆ ಹಾವಳಿ ತುರ್ತು ನಿರ್ವಹಣೆಗಾಗಿ ಕ್ಷಿಪ ಕಾರ್ಯಪಡ ತಂಡಗಳನ್ನು ರಚಿಸಿ ನಿರ್ವಹಿಸಲಾಗುತ್ತಿದೆ. ಕಾಡಾನೆ ಹಿಮ್ಮೆಟ್ಟಿಸುವ ತಂಡಗಳನ್ನು ರಚಿಸಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ನಿಸ್ತಂತು ಜಾಲದ ಮೂಲಕ ಮಾಹಿತಿ ಸಂವಹನ ಮಾಡಲಾಗುತ್ತಿದೆ. ಕಾಡಾನೆಗಳ ಮಾಹಿತಿಯನ್ನು ಸಂಗ್ರಹಿಸಲು 24 ಗಂಟೆ ಕಾರ್ಯನಿರ್ವಹಿಸುವ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ. ಕಾಡಾನೆ ಗುಂಪಿನಲ್ಲಿದ್ದ ವಯಸ್ಕ ಹೆಣ್ಣಾನೆಯನ್ನು ಗುರುತಿಸಿ ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ ಆನೆಗಳ ಚಲನ-ವಲನಗಳ ಬಗ್ಗೆ ಎಸ್.ಎಂ.ಎಸ್ ಹಾಗೂ ವಾಟ್ಸಾಪ್ ಮೂಲಕ ಜನರಿಗೆ ಮಾಹಿತಿಯನ್ನು ನೀಡಿ ಮಾನವ ಪ್ರಾಣಹಾನಿ ಹಾಗೂ ಮಾನವ ಗಾಯ ತಪ್ಪಿಸಲು ಕ್ರಮ ವಹಿಸಲಾಗುತ್ತಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆ ಹಿಡಿದು ಆಗ್ಗಿಂದಾಗ್ಗೆ ಸ್ಥಳಾಂತರಿಸಲಾಗುತ್ತಿದೆ. ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಪ್ರದೇಶದಲ್ಲಿ ಜನ ಸಂಪರ್ಕ ಸಭೆಯನ್ನು ಕರೆದು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News