ಕಲ್ಯಾಣ ಕರ್ನಾಟಕದಲ್ಲಿ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣ, ರಾಜ್ಯದ ಇತಿಹಾಸದಲ್ಲೇ ಮೊದಲು!

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರ ಶ್ರಮಿಸುತ್ತಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲು ಚಿಂತನೆ ನಡೆಸುತ್ತಿದೆ.

Written by - Chetana Devarmani | Last Updated : Sep 20, 2022, 11:07 AM IST
  • ಕಲ್ಯಾಣ ಕರ್ನಾಟಕದಲ್ಲಿ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣ
  • ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲು ಚಿಂತನೆ
  • ವಿದ್ಯಾ ಕಲ್ಯಾಣ ಯೋಜನೆಯಡಿಯಲ್ಲಿ ಶಾಲಾ ಕೊಠಡಿ ನಿರ್ಮಾಣ
ಕಲ್ಯಾಣ ಕರ್ನಾಟಕದಲ್ಲಿ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣ, ರಾಜ್ಯದ ಇತಿಹಾಸದಲ್ಲೇ ಮೊದಲು! title=
ಬೊಮ್ಮಾಯಿ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರ ಶ್ರಮಿಸುತ್ತಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲು ಚಿಂತನೆ ನಡೆಸುತ್ತಿದೆ. ವಿದ್ಯಾ ಕಲ್ಯಾಣ ಯೋಜನೆಯಡಿಯಲ್ಲಿ ರಾಜ್ಯದ ಇತಿಹಾಸದಲ್ಲೇ ಏಕಕಾಲಕ್ಕೆ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ. 

ಇದನ್ನೂ ಓದಿ : ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ PSI ಮರುಪರೀಕ್ಷೆ ದಿನಾಂಕ ಪ್ರಕಟ: ಡಿಜಿ ಪ್ರವೀಣ್ ಸೂದ್

ಕಲ್ಯಾಣ ಕರ್ನಾಟಕದಾದ್ಯಂತ ೨೧೦೦ ಹೊಸ ಶಾಲಾ ಕೊಠಡಿಗಳು, ೨೫೦೦ ಹೊಸ ಅಂಗನವಾಡಿಗಳನ್ನು ನಿರ್ಮಾಣ ಮಾಡುವ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲೆಂಬ ಅಶಯದಿಂದ ಈ ದಿಟ್ಟ ಹೆಜ್ಜೆ ಇಟ್ಟಿದೆ. 

 

 

ಇದನ್ನು ಕೂ ಮಾಡಿರುವ ಬಿಜೆಪಿ ಬೆಳೆದಾಗಲಷ್ಟೇ ಪ್ರದೇಶದ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ಲಭ್ಯವಾಗಿಸುವುದು ನಮ್ಮ ಆದ್ಯತೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದೆ. 

ಇದನ್ನೂ ಓದಿ : ಅ.15 ರಂದು ಹಿಂದಿ ಹೇರಿಕೆ ವಿರುದ್ಧ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ: ವಾಟಾಳ್ ನಾಗರಾಜ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News