ದೇವೇಗೌಡರ ಅಳಿಯನನ್ನು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಿಸಿದ್ದು JDSನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಸಿಎಂ

DCM DK Shivakumar: ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

Written by - Prashobh Devanahalli | Edited by - Bhavishya Shetty | Last Updated : Mar 19, 2024, 07:06 PM IST
    • ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ
    • 2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ
    • ಸದಾನಂದಗೌಡರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲು ಆಪರೇಶನ್ ಮಾಡಲಾಗುತ್ತಿದೆ ಎಂಬ ಚರ್ಚೆ
ದೇವೇಗೌಡರ ಅಳಿಯನನ್ನು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಿಸಿದ್ದು JDSನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿಸಿಎಂ  title=
DCM DK Shivakumar

ಬೆಂಗಳೂರು: "ದೇವೇಗೌಡರ ಅಳಿಯನಿಗೆ ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್’ನ ಮೊದಲ ಆತ್ಮಹತ್ಯೆ ಪ್ರಯತ್ನ" ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: White Hair: ಬಿಳಿಕೂದಲನ್ನು ಗಾಢ ಕಪ್ಪಾಗಿಸಲು ಹೇಳಿಮಾಡಿಸಿದ್ದು ಈ ನೀರು: ಕೂದಲಿಗೆ ಸ್ಪ್ರೇ ಮಾಡಿದ್ರೆ ಸಾಕು 25 ನಿಮಿಷದಲ್ಲಿ ರಿಸಲ್ಟ್!

"ಇದನ್ನು ನಾನು ನಿರೀಕ್ಷೆ ಮಾಡಿದ್ದೆ. ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಪಕ್ಷಕ್ಕೆ ಬಹಳ ಮುಜುಗರವಾಗಿದೆ. ಅವರ ಆಂತರಿಕ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಜೆಡಿಎಸ್ ಗೆ ಕೆಲವು ಕ್ಷೇತ್ರಗಳಲ್ಲಿ ಸ್ವಂತ ಶಾಸಕರು, ಸಂಸದರು ಇದ್ದಾರೆ. ಅವರ ಶಕ್ತಿ ಪಕ್ಷಕ್ಕೆ ಬೇಕಾಗಿದೆ. ಆದರೆ ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ಬಿಜೆಪಿ ಇದೇ ರೀತಿ ಮಾಡಿಕೊಂಡು ಬಂದಿದೆ. ಇದು ಅವರ ಪಕ್ಷಗಳ ಆಂತರಿಕ ವಿಚಾರ. ಆ ಬಗ್ಗೆ ಅವರೇ ತೀರ್ಮಾನ ಮಾಡಿಕೊಳ್ಳಲಿ. ನನಗೂ ಅದಕ್ಕೂ ಸಂಬಂಧವಿಲ್ಲ" ಎಂದು ತಿಳಿಸಿದರು.

ಸದಾನಂದಗೌಡರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲು ಆಪರೇಶನ್ ಮಾಡಲಾಗುತ್ತಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, "ಒಂದು ಪಕ್ಷದಲ್ಲಿ ಟಿಕೆಟ್ ವಂಚಿತರಾದವರು ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವುದು ರಾಜಕೀಯದಲ್ಲಿ ಸಹಜ. ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಮೂಡಿಗೆರೆಯಲ್ಲಿ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು. ನಮ್ಮಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ನೀಡದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು. ಶೆಟ್ಟರ್, ಸವದಿಗೆ ಬಿಜೆಪಿಯಲ್ಲಿ ಅವಕಾಶ ಸಿಗದಿದ್ದಾಗ ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಿಸಿದ್ದೇವೆ. ಯಾವುದೇ ಪಕ್ಷ ಇದಕ್ಕೆ ಹೊರತಾಗಿಲ್ಲ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ" ಎಂದು ತಿಳಿಸಿದರು.

ಇದನ್ನೂ ಓದಿ: Bharat Atta-Rice : ರೈಲು ನಿಲ್ದಾಣಗಳಲ್ಲಿಯೂ ಸಿಗುತ್ತದೆ ಅಗ್ಗದ ಅಕ್ಕಿ, ಗೋಧಿ ಹಿಟ್ಟು : 500 ನಿಲ್ದಾಣಗಳಲ್ಲಿದೆ ಈ ಸೌಲಭ್ಯ  

ಸದಾನಂದ ಗೌಡರ ಸೇರ್ಪಡೆಗೆ ಅವಕಾಶ ಇದೆಯೇ ಎಂದು ಕೇಳಿದಾಗ, "ನಮ್ಮ ತಂತ್ರಗಾರಿಕೆಯನ್ನು ನಾವು ಬಿಟ್ಟು ಕೊಡುವುದಿಲ್ಲ" ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News