Covid-19 : ಮಂಡ್ಯಕ್ಕೆ ಮತ್ತೆ ಕೊರೋನಾ ಕಾಟ : ವಿದೇಶದಿಂದ 9 ಜನರಿಗೆ ಕೋವಿಡ್ ಪಾಸಿಟಿವ್

ಕೊಲ್ಕತ್ತಾ ಮೂಲದ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

Written by - Channabasava A Kashinakunti | Last Updated : Jan 1, 2022, 03:14 PM IST
  • ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ 4 ವಿದ್ಯಾರ್ಥಿಗಳಿಗೆ ಪಾಸಿಟಿವ್
  • ಬಂದಿದೆ. ಕೊಲ್ಕತ್ತಾ ಮೂಲದ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು
  • ವಿದೇಶದಿಂದ ಬಂದ 9 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
Covid-19 : ಮಂಡ್ಯಕ್ಕೆ ಮತ್ತೆ ಕೊರೋನಾ ಕಾಟ : ವಿದೇಶದಿಂದ 9 ಜನರಿಗೆ ಕೋವಿಡ್ ಪಾಸಿಟಿವ್ title=

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ 4 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಕೊಲ್ಕತ್ತಾ ಮೂಲದ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಡಿ.20ರಂದು ಕೊಲ್ಕತ್ತಾದಿಂದ 67 ವಿದ್ಯಾರ್ಥಿಗಳು ಆಗಮಿಸಿದ್ದರು. 1 ವಾರ ಕ್ವಾರಂಟೈನ್‌(Quarantine) ಬಳಿಕ ವಿದ್ಯಾರ್ಥಿಗಳಿಗೆ ಸಾಮೂಹಿಕ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ 67 ವಿದ್ಯಾರ್ಥಿಗಳ ಪೈಕಿ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತ ವಿದ್ಯಾರ್ಥಿಗಳ(Students) ಸಂಪರ್ಕದಲ್ಲಿದ್ದ 137 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.ಇಂದು ಸಂಜೆ ಸಂಪರ್ಕಿತರ ರಿಪೋರ್ಟ್ ಬರುವ ಸಾಧ್ಯತೆ ಇದೆ. 4 ಸೋಂಕಿತ ವಿದ್ಯಾರ್ಥಿಗಳಲ್ಲಿ ಒಮಿಕ್ರಾನ್ ಪತ್ತೆಗೆ ಜಿನೋ ಸಿಕ್ವೆನ್ಸಿ ಟೆಸ್ಟ್‌ ಮಾಡಲಾಗಿದೆ.  

ಸದ್ಯ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಆಸ್ಪತ್ರೆ(Adichunchanagiri Nursing College)ಯ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಆದಿಚುಂಚನಗಿರಿ ಆಸ್ಪತ್ರೆ ಸರ್ಜನ್ ಹಾಗೂ ಬೆಳ್ಳೂರು ಆರೋಗ್ಯ ಕೇಂದ್ರದ ವೈದ್ಯರಲ್ಲಿ ಸೋಂಕು ಕಾಣಿಸಿಕೊಂಡಿದೆ.

ವಿದೇಶದಿಂದ 9 ಜನರಲ್ಲಿ ಕೊರೊನಾ ಸೋಂಕು

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport Bengaluru)ಕ್ಕೆ ವಿದೇಶದಿಂದ ಬಂದ 9 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಫ್ರಾನ್ಸ್ ಮೂಲದ 2, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮೂಲದ 3, ಜರ್ಮನಿಯಿಂದ 1, ಟರ್ಕಿ 1, ಸ್ವೀಡನ್ ಮೂಲದ 1 ಹಾಗೂ ನೆದರ್ಲೆಂಡ್ಸ್‌ ಮೂಲದ 1 ವ್ಯಕ್ತಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಹೆಚ್ಚಿನ ಟಸ್ಟ್ ಗೆ ಅಧಿಕಾರಿಗಳು ಎಲ್ಲರ ಸ್ಯಾಂಪಲ್ ತೆಗೆದು ಜಿನೋಟಿಕ್ ಸೀಕ್ ವೆನ್ಸ್ ಗೆ ಕಳಿಸಿದ್ದಾರೆ. ಸೋಂಕು ದೃಢಪಟ್ಟಿರುವ ಎಲ್ಲರನ್ನೂ ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News