ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ರಾಜ್ಯದಲ್ಲಿ  ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ. ಏಪ್ರಿಲ್ 9 ರ ನಂತರ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Written by - Prashobh Devanahalli | Edited by - Chetana Devarmani | Last Updated : Apr 28, 2022, 04:00 PM IST
  • ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ
  • ಕೋವಿಡ್ ಸೂಕ್ತ ನಡವಳಿಕೆ ಪಾಲಿಸಲು ಸೂಚನೆ ನೀಡಲಾಗಿದೆ
  • ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ title=
ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ  ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ. ಏಪ್ರಿಲ್ 9 ರ ನಂತರ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಬೊಮ್ಮಾಯಿ, ಯೂರೋಪ್ ಮತ್ತು ಇತರೆ ರಾಷ್ಟ್ರಗಳಲ್ಲಿ ಲಸಿಕೆ ಪಡೆಯದವರಿಂದ ಪುನಃ ಪ್ರಕರಣಗಳು ಉಲ್ಬಣವಾಗಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಎರಡೂ ಡೋಸ್‌ಗಳನ್ನು 98% ರಷ್ಟು ಜನ ಲಸಿಕೆ ಪಡೆದಿದ್ದಾರೆ. ಮುನ್ನೆಚ್ಚರಿಕಾ ಡೋಸ್‌ಗಳನ್ನು ಇನ್ನಷ್ಟು ಜನಕ್ಕೆ ನೀಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು. 

ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪ್ : ಮೂವರು ಆರೋಪಿಗಳ ಬಂಧನ

ಲಸಿಕೆಗೆ ಮಹತ್ವ:

ಮೊನ್ನೆ ಕೇಂದ್ರ ಸರ್ಕಾರ 6 ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಹಾಕಲು ಅನುಮೋದನೆ ನೀಡಿದೆ. ಅದನ್ನು ಪ್ರಾಥಮಿಕ ಶಾಲೆಗಳಲ್ಲಿ ಪ್ರಾರಂಭಿಸುವ ತೀರ್ಮಾನ ಮಾಡಲಾಗಿದೆ. ಲಸಿಕೆ ಹಾಕಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಕೋವಿಡ್ ಸೂಕ್ತ ನಡವಳಿಕೆ ಪಾಲಿಸಲು ಸೂಚನೆ ನೀಡಲಾಗಿದೆ. ಪರೀಕ್ಷೆಗಳನ್ನು ಹೆಚ್ಚಿಸಲಾಗುತ್ತಿದೆ ಎಂದು ತಿಳಿಸಿದರು. 

ವಿಶೇಷವಾಗಿ ಐಎಲ್‌ಐ ಮತ್ತು SARI ಪ್ರಕರಣಗಳು ಆಸ್ಪತ್ರೆಗಳಿಗೆ ದಾಖಲಾಗಿರುವವರ ಪರೀಕ್ಷೆ ಮಾಡಿ, ಅವರಲ್ಲಿ ಪಾಸಿಟಿವ್ ಬಂದರೆ, ಅದನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು. ಇದನ್ನು ಮಾಡಿದರೆ ಬೇರೆ ಬೇರೆ ರೂಪಾಂತರ ತಳಿಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಈಗಾಗಲೇ 8500 ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಳನ್ನು ರಾಜ್ಯದಲ್ಲಿ ಮಾಡಲಾಗಿದೆ. 4 ಸಾವಿರ ಬೆಂಗಳೂರಿನಲ್ಲಿ ಹಾಗೂ ಇನ್ನಿತರೆ ಕಡೆಗಳಲ್ಲಿ 4 ಸಾವಿರ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚನೆ: 

ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು. ದ್ವೇಷ ಭಾಷಣವನ್ನು ನಿಯಂತ್ರಿಸುವ ಬಗ್ಗೆ ಸಮಿತಿ ರಚಿಸಲು  ಸರ್ವೋಚ್ಚ ನ್ಯಾಯಾಲಯವು  ಸೂಚಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ದೇಶದಲ್ಲಿ ದ್ವೇಷ ಭಾಷಣ ನಡೆಯುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ನಿಯಂತ್ರಣ ಹಾಕಲು ನ್ಯಾಯಾಲಯದ ಆದೇಶಗಳನ್ನು ಮಾರ್ಗಸೂಚಿಗಳಂತೆ ಪಾಲಿಸಲಾಗುವುದು ಎಂದರು.

ಇದನ್ನೂ ಓದಿ:ಗೀತಂ ಯುನಿವರ್ಸಿಟಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಸಾವು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News