ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಮತಗಣನೆ ಆರಂಭ

ಲೋಕಸಭಾ ಚುನಾವಣೆ 2019 (ಲೋಕಸಭಾ ಚುನಾವಣೆಗಳು 2019) ಏಳು ಹಂತಗಳಲ್ಲಿ ಪೂರ್ಣಗೊಂಡ ನಂತರ, ಇಂದು (ಮೇ 23) ಲೋಕಸಭಾ ಚುನಾವಣೆ ಫಲಿತಾಂಶಗಳು ಹೊರಬರಲಿವೆ.

Last Updated : May 23, 2019, 08:24 AM IST
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಮತಗಣನೆ ಆರಂಭ title=
Pic Courtesy: ANI

ಬೆಂಗಳೂರು: ಲೋಕಸಭಾ ಚುನಾವಣೆ 2019 (ಲೋಕಸಭಾ ಚುನಾವಣೆಗಳು 2019) ಏಳು ಹಂತಗಳಲ್ಲಿ ಪೂರ್ಣಗೊಂಡ ನಂತರ, ಇಂದು (ಮೇ 23) ಲೋಕಸಭಾ ಚುನಾವಣೆ ಫಲಿತಾಂಶಗಳು ಹೊರಬರಲಿವೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಮತಗಣನೆ ಆರಂಭವಾಗಿದ್ದು ರಾಜ್ಯದ ಜನತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಕೈ ಹಿಡಿಯಲಿದ್ದಾರೆಯೇ? ಅಥವಾ ಬಿಜೆಪಿಗೆ ಒಲವು ತೋರಿದ್ದಾರೆಯೇ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸಿದ್ದರೆ, ಬಿಜೆಪಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ತನ್ನ ಬೆಂಬಲ ಸೂಚಿಸಿದ್ದು, 27 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. 

ಹೈ ವೋಲ್ಟೇಜ್ ಕ್ಷೇತ್ರ ಎಂದೇ ಪರಿಗಣಿಸಲಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಗಿ ಭದ್ರತೆ: 
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೈ ವೋಲ್ಟೇಜ್ ಕ್ಷೇತ್ರ ಎಂದೇ ಪರಿಗಣಿಸಲಾಗಿದ್ದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತಗಣನೆ ಕಾರ್ಯಕ್ಕೆ ಭಾರೀ ಬಿಗಿ ಭದ್ರತೆ ಮಾಡಲಾಗಿದೆ.
 

Trending News