ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಜೋಡಿ ಸಾವು: ಗ್ಯಾಸ್ ಗೀಸರ್ ಲೀಕ್ ಆಗಿ ದುರಂತ..!

Gas geyser leak news: ಗ್ಯಾಸ್ ಗೀಸರ್ ಲೀಕ್ ಆಗಿ ಕೆಲ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ದಾರುಣ ಅಂತ್ಯ ಕಂಡಿದ್ದಾರೆ. ಸ್ನಾನಕ್ಕೆಂದು‌ ಒಟ್ಟಿಗೆ ಹೋದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. 

Written by - VISHWANATH HARIHARA | Last Updated : Jun 12, 2023, 03:19 PM IST
  • ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಜೋಡಿಗಳು ಗ್ಯಾಸ್ ಗೀಸರ್ ಲೀಕ್ ನಿಂದ ಸಾವು
  • ಕೆಲ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ದಾರುಣ ಅಂತ್ಯ
  • ಸ್ನಾನಕ್ಕೆಂದು‌ ಒಟ್ಟಿಗೆ ಹೋದ ಸಂದರ್ಭದಲ್ಲಿ ದುರಂತ
ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಜೋಡಿ ಸಾವು: ಗ್ಯಾಸ್ ಗೀಸರ್ ಲೀಕ್ ಆಗಿ ದುರಂತ..! title=

ಬೆಂಗಳೂರು: ಗ್ಯಾಸ್ ಗೀಸರ್ ಲೀಕ್ ಆಗಿ ಕೆಲ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ದಾರುಣ ಅಂತ್ಯ ಕಂಡಿದ್ದಾರೆ. ಸ್ನಾನಕ್ಕೆಂದು‌ ಒಟ್ಟಿಗೆ ಹೋದ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್,ಗೋಕಾಕ್  ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳಾಗಿದ್ದಾರೆ.

ಹತ್ತನೇ ತಾರೀಖು ಸಂಜೆ ಚಿಕ್ಕಜಾಲದ ತರಬನಹಳ್ಳಿಯಲ್ಲಿ ಘನನೆ ನಡೆದಿದ್ದು, ರಾತ್ರಿ 09-10 ರ ಸುಮಾರಿಗೆ ಗ್ಯಾಸ್ ಗೀಸರ್  ಆನ್ ಮಾಡಿಕೊಂಡು ಬಾತ್ ರೂಮ್ ಗೆ ಸ್ನಾನಕ್ಕೆಂದು ಹೋಗಿದ್ದರು. ಬಾತ್ ರೂಮ್ ನ ಕಿಟಕಿ ಹಾಗೂ ಬಾಗಿಲು ಸಂಪೂರ್ಣವಾಗಿ ಲಾಕ್ ಮಾಡಿ ಇಬ್ಬರು ಸ್ನಾನ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಬಸ್ ಗೆ ನಮಸ್ಕರಿಸಿ ಪ್ರಯಾಣ ಬೆಳಸಿದ ಅಜ್ಜಿ..! ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವೆಂದ ಸಿಎಂ ಸಿದ್ದರಾಮಯ್ಯ

ಈ ವೇಳೆ ಕಾರ್ಬನ್ ಮೊನಾಕ್ಸೈಡ್ ಬಾತ್ ರೂಂನಲ್ಲಿ ಸೋರಿಕೆಯಾಗಿ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಜೋಡಿ ಮೃತಪಟ್ಟಿದ್ದಾರೆ. ಬೆಳಗ್ಗೆ ಮಾಲೀಕರು ಮನೆಯಲ್ಲಿ ಪರಿಶೀಲಿಸಿದಾಗ ಜೋಡಿ ಬಾತ್ ರೂಮಲ್ಲಿ ಶವವಗಾಗಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದಾಗ ಬಾಗಿಲು ಮುರಿದು ಮೃತದೇಹಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News