ಚಿಕ್ಕಮಗಳೂರು: ಇಡೀ ದೇಶದಲ್ಲಿ ತಲ್ಲಣ ಸೃಷ್ಟಿಸಿರುವ ಕರೋನಾವೈರಸ್ ಎರಡನೇ ಅಲೆಯು ರಾಜ್ಯದಲ್ಲೂ ತನ್ನ ಪ್ರಭಾವ ಬೀರುತ್ತಿದೆ. ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಮಧ್ಯೆ ಚಿಕ್ಕಮಗಳೂರಿನ ಶಾಲೆಯೊಂದರಲ್ಲಿ 26 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಎಲ್ಲರ ಆತಂಕ ಹೆಚ್ಚಿಸಿದೆ.
ಚಿಕ್ಕಮಗಳೂರಿನ ಬಸವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಮೊದಲಿಗೆ 10ನೇ ತರಗತಿಯ ಓರ್ವ ವಿದ್ಯಾರ್ಥಿನಿಗೆ ಕರೋನಾವೈರಸ್ (Coronavirus) ದೃಢ ಪಟ್ಟಿತ್ತು. ಬಳಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಕರೋನಾ ಟೆಸ್ಟ್ ಮಾಡಿಸಲಾಗಿದೆ.
ಇದನ್ನೂ ಓದಿ - Covid-19 New Guidelines: ರಾಜ್ಯ ಸರ್ಕಾರದಿಂದ ಹೊಸ ಕೊರೊನಾ ಮಾರ್ಗಸೂಚಿ: ಯಾವುದುಕೆಲ್ಲ ನಿರ್ಬಂಧ!
ಶಾಲೆಯಲ್ಲಿ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 500ಕ್ಕೂ ಹೆಚ್ಚು ಜನರಿಗೆ ಕರೋನಾ ಟೆಸ್ಟ್ (Corona Test) ಮಾಡಿಸಲಾಗಿತ್ತು. ಇದೀಗ ಹಲವರ ವರದಿ ಬಂದಿದ್ದು ಒಂದೇ ತರಗತಿಯ 26 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ - Mumbai ವಿಮಾನ ನಿಲ್ದಾಣದಲ್ಲಿ RT-PCR Test ಶುಲ್ಕ ಇಳಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.