ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸಿಮೆಂಟ್ ಕಾರ್ಖಾನೆಯಲ್ಲಿ ಕ್ರೇನ್ ಕುಸಿದಿದ್ದು, ಆರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸೇಡಂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡರು. ಜಿಲ್ಲಾಡಳಿತ ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ.
#UPDATE: Three more labourers succumbed to their injuries in the incident where a crane at an under-construction cement factory collapsed in Kalaburagi earlier today, taking the death toll to 6. One person is injured. #Karnataka pic.twitter.com/0lMZZsqqeq
— ANI (@ANI) August 2, 2018
ಎಂದಿನಂತೆ ಕಾರ್ಮಿಕರು ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಬಿರುಗಾಳಿಯಿಂದಾಗಿ ಕ್ರೇನ್ ಕುಸಿದು ಬಿದ್ದಿದೆ. ಕ್ರೇನ್ ಅಡಿ ಸಿಲುಕಿದ್ದ ತಬಾರಕ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆರು ಮಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಐವರು ಮೃತಪಟ್ಟಿದ್ದಾರೆ. ಶಹಜಾದ್ ಎಂಬ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸೇಡಂ ಆಸ್ಪತ್ರೆಗೆ ದಾಖಲಿಸಲಾಗಿದೆ.