ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಮಾರಿ, ತಮಿಳುನಾಡಿಗೆ ಉಪಕಾರಿ : ಸಿ.ಟಿ.ರವಿ

Kaveri Water Dispute : ನಮಗೆ ಕುಡಿಯಲು ಸಹ ನೀರಿಲ್ಲ. ನಮ್ಮ ರೈತರ ಬೆಳೆಗಳಿಗೂ ನೀರಿಲ್ಲ. ಬೇಲಿಯೇ ಹೊಲವ ಮೇಯ್ದೊಡೆ ಎಂಬಂತೆ ಸರಕಾರವೇ ಹಫ್ತಾ ವಸೂಲಿಗೆ ಇಳಿದರೆ ದೂರು ಯಾರಿಗೆ ಕೊಡೋಣ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

Written by - Chetana Devarmani | Last Updated : Sep 25, 2023, 03:03 PM IST
  • ಸರಕಾರವೇ ಹಫ್ತಾ ವಸೂಲಿಗೆ ಇಳಿದರೆ ದೂರು ಯಾರಿಗೆ ಕೊಡೋಣ
  • ನಾಳೆ ನಡೆಯುವ ಹೋರಾಟಕ್ಕೆ ಬಿಜೆಪಿ ಪೂರ್ಣ ಪ್ರಮಾಣದ ಬೆಂಬಲ ಕೊಡಲಿದೆ
  • ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆ
ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಮಾರಿ, ತಮಿಳುನಾಡಿಗೆ ಉಪಕಾರಿ : ಸಿ.ಟಿ.ರವಿ  title=

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಮಾರಿ, ತಮಿಳುನಾಡಿಗೆ ಉಪಕಾರಿಯಾಗಿ ನಡೆದುಕೊಂಡಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು.

ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಡೆದ ತೀವ್ರ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಸೋನಿಯಾ ಗಾಂಧಿಯವರ ಕೈಚಳಕ ಮತ್ತು ಸೂಚನೆಯಿಂದ ಐಎನ್‍ಡಿಐಎ ನಾಯಕರನ್ನು ಖುಷಿಪಡಿಸುವ ಉದ್ದೇಶದಿಂದ ಸಿದ್ದರಾಮಯ್ಯ - ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರಕಾರವು ರಾಜ್ಯದ ಹಿತವನ್ನು ಸಂಪೂರ್ಣ ಕಡೆಗಣಿಸಿದೆ. ತಮಿಳುನಾಡಿನ ಹಿತ ಕಾಪಾಡಲು ಮುಂದಾಗಿದೆ ಎಂದು ಆಕ್ಷೇಪಿಸಿದರು.

ಇದನ್ನೂ ಓದಿ : BNG - HYD : ರಾಜ್ಯದ ಮೂರನೇ ವಂದೇ ಭಾರತ ಎಕ್ಸಪ್ರೆಸ್‌ ರೈಲಿನ ಸಂಪೂರ್ಣ ಮಾಹಿತಿ ಇಲ್ಲಿದೆ 

ನಮಗೆ ಕುಡಿಯಲು ಸಹ ನೀರಿಲ್ಲ. ನಮ್ಮ ರೈತರ ಬೆಳೆಗಳಿಗೂ ನೀರಿಲ್ಲ. ಬೇಲಿಯೇ ಹೊಲವ ಮೇಯ್ದೊಡೆ ಎಂಬಂತೆ ಸರಕಾರವೇ ಹಫ್ತಾ ವಸೂಲಿಗೆ ಇಳಿದರೆ ದೂರು ಯಾರಿಗೆ ಕೊಡೋಣ ಎಂದು ಅವರು ಪ್ರಶ್ನಿಸಿದರು. ನಾಳೆ ನಡೆಯುವ ಹೋರಾಟಕ್ಕೆ ಬಿಜೆಪಿ ಪೂರ್ಣ ಪ್ರಮಾಣದ ಬೆಂಬಲ ಕೊಡಲಿದೆ ಎಂದು ಅವರು ತಿಳಿಸಿದರು.

ನಮ್ಮ ನೀರು, ನಮ್ಮ ನಾಡನ್ನು ಉಳಿಸಿಕೊಳ್ಳಲು ಹೋರಾಟಕ್ಕೆ ಬೆಂಬಲ ನೀಡಿದ್ದೇವೆ ಎಂದು ಅವರು ಹೇಳಿದರು. ಮುಂದಾಲೋಚನೆ ಇಲ್ಲದೆ ನೀರು ಬಿಡುತ್ತಿರುವುದು ರಾಜ್ಯದ ಜನರ ದುರ್ದೈವ ಎಂದು ಸಿ.ಟಿ.ರವಿ ಅವರು ಆಕ್ಷೇಪಿಸಿದರು. ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸಲು ಆಗ್ರಹಿಸಿದರು. ಬಳಿಕ ಬಿಜೆಪಿ ನಿಯೋಗವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೇರ್‌ಮನ್ ರವರಿಗೆ ಮನವಿ ಸಲ್ಲಿಸಿ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ಒತ್ತಾಯಿಸಿತು. 

ಇದನ್ನೂ ಓದಿ : ಸೆ.26ಕ್ಕೆ ಬೆಂಗಳೂರು ಬಂದ್ ಫಿಕ್ಸ್?: 150ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Trending News