ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!

Congress Loots Karnataka: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ನಾಳೆ (ಜೂನ್‌ 20) ಸೈಕಲ್‌ ಜಾಥಾ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ನಡೆಯಲಿದೆ. ​

Written by - Puttaraj K Alur | Last Updated : Jun 19, 2024, 05:58 PM IST
  • ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸೈಕಲ್‌ ಜಾಥಾ
  • ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ
ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ! title=
ಬಿಜೆಪಿಯಿಂದ ಸೈಕಲ್‌ ಜಾಥಾ!

Congress Loots Karnataka: ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ನಾಳೆ(ಜೂನ್‌ 20) ಬಿಜೆಪಿಯಿಂದ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಈ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸೋಮವಾರ ಟ್ವೀಟ್‌ ಮಾಡಿರುವ ಬಿಜೆಪಿ, ʼಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ನಾಳೆ (ಜೂನ್‌ 20) ಸೈಕಲ್‌ ಜಾಥಾ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ನಡೆಯಲಿದೆ. ಬನ್ನಿ, ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸೋಣ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿ ಖಂಡಿಸೋಣʼವೆಂದು ಕರೆ ನೀಡಿದೆ. 

ಇದನ್ನೂ ಓದಿ: ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶ

ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ!

ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ, ʼಅನ್ನದಾತರಿಗೆ ದ್ರೋಹ ಬಗೆಯುವ ಕಾಯಕವನ್ನು ಸಿಎಂ ಸಿದ್ದರಾಮಯ್ಯನವರು ತಮ್ಮ 2.0 ಅವಧಿಯಲ್ಲೂ ಮುಂದುವರಿಸಿದ್ದಾರೆʼ ಎಂದು ಕುಟುಕಿದೆ. 

ಕೈಲಾಗದ ಕಾಂಗ್ರೆಸ್‌ ಸರ್ಕಾರದ ನೇತೃತ್ವ ವಹಿಸಿರುವ ಅಸಮರ್ಥ ಸಿಎಂ ಸಿದ್ದರಾಮಯ್ಯನವರು ಕಳೆದ ಒಂಭತ್ತು ತಿಂಗಳದ ₹1,087 ಕೋಟಿ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದರಿಂದ ರೈತರು
ಸಂಕಷ್ಟಕ್ಕೆ ಒಳಗಿದ್ದಾರೆʼ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಇಂಧನ ಏರಿಕೆ ವಿಷಯದಲ್ಲಿ ತಪ್ಪು ಮಾಹಿತಿಯನ್ನು ಬಿತ್ತರಿಸುವುದು ಕಾಂಗ್ರೆಸ್ ಪಕ್ಷದ ಕಪಟ ನಾಟಕ- ಯತ್ನಾಳ್ ವಾಗ್ದಾಳಿ 

ʼಸಿಎಂ ಸಿದ್ದರಾಮಯ್ಯನವರೇ, ವಿಧಾನಸಭೆ ಚುನಾವಣೆ ವೇಳೆ ನಂದಿನಿ ಹೆಸರಲ್ಲಿ ನೀಚ ರಾಜಕಾರಣ ಮಾಡಿ, ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿರುವ ತಮಗೆ, ನಾಡಿನ ಅನ್ನದಾತರ ಶಾಪ ತಟ್ಟದೇ ಇರದು. ಸ್ಪಷ್ಟಪಡಿಸಿ... ಬಾಕಿ ₹1,087 ಕೋಟಿ ಹಾಲಿನ ಪ್ರೋತ್ಸಾಹಧನ ಯಾವಾಗ ಬಿಡುಗಡೆ ಮಾಡುತ್ತೀರಿ..?ʼ ಎಂದು ಬಿಜೆಪಿ ಪ್ರಶ್ನಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News