/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಪಾವಗಡ: ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಅನ್ನು ಅಭಿವೃದ್ಧಿ ಪಡಿಸಿ ಅದನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಾಗಿದ್ದು, ಈ ಭಾಗದ ಜನರು ತಮ್ಮ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಟ್ಟರೆ ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಲ್ಲಿನ ಸೋಲಾರ್ ಡೆವಲಪ್ಮೆಂಟ್ ಕಾರ್ಪೊರೇಷನ್ ಗೆ ಭೇಟಿ ನೀಡಿ ಇಂಧನ ಸಚಿವ ಕೆ.ಜೆ. ಜಾರ್ಜ್, ಸ್ಥಳೀಯ ಶಾಸಕ ವೆಂಕಟೇಶ್ ಹಾಗೂ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಡಿಸಿಎಂ, ‘ರಾಜ್ಯದಲ್ಲಿ ಜಮೀನು ನೀಡಿದರೆ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಇಂಗಿತ ವ್ಯಕ್ತಪಡಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ ಇದ್ದು ಆದಷ್ಟು ಬೇಗ ಈ ಭಾಗದ ಜನರು ಚರ್ಚೆ ಮಾಡಿ ತೀರ್ಮಾನ ಮಾಡಬೇಕು’ ಎಂದು ತಿಳಿಸಿದರು. 

ಇದನ್ನೂ ಓದಿ: CT Ravi: ರಾಜಕೀಯ ಕಾರಣ, ಅಸಹಿಷ್ಣು ಭಾವನೆಯಿಂದ ಪಠ್ಯ ಪರಿಷ್ಕರಣೆ- ಸಿ.ಟಿ.ರವಿ

‘ಕಳೆದ ಬಾರಿ ಸೋಲಾರ್ ಪಾರ್ಕ್ ಮಾಡುವಾಗ ಜಮೀನು ನೀಡದವರು ನಂತರ ನಮ್ಮ ಜಮೀನು ಬಳಸಿಕೊಳ್ಳಿ ಎಂದು ನನ್ನ ಬಳಿ ಬಂದಿದ್ದರು. ಮನೆ ಬಾಗಿಲಿಗೆ ಬಂದ ಲಕ್ಷ್ಮಿ ಕಳುಹಿಸಿ ಈಗ ಬಂದಿದ್ದೀರಾ ಎಂದು ಬೈದು ಕಳಿಸಿದ್ದೆ. 

ಈ ತಾಲೂಕಿನಲ್ಲಿ ರೈತರು ಮುಂದೆ ಬಂದರೆ ಇಲ್ಲಿ ಈ ಪಾರ್ಕ್ ವಿಸ್ತರಣೆ ಮಾಡಬಹುದು. ನಿಮ್ಮ ಜಮೀನು ನಿಮ್ಮ ಹೆಸರಿನಲ್ಲೇ ಇರುತ್ತದೆ. ಈ ಯೋಜನೆಯಲ್ಲಿ ನೀವು ಪಾಲುದಾರರಾಗುತ್ತೀರಿ. ಈಗ ಪ್ರತಿ ಜಮೀನಿಗೆ ನೀಡುತ್ತಿರುವಷ್ಟೇ ಬಾಡಿಗೆ ನೀಡಲಾಗುವುದು. ನೀವು ನಿಮ್ಮ ಬಾಡಿಗೆ ಆಧಾರದ ಮೇಲೆ ಸಾಲ ಸೌಲಭ್ಯವನ್ನು ಪಡೆಯಬಹುದು. ಈ ವಿಚಾರವಾಗಿ ನಾನು ಮಾತನಾಡುತ್ತೇನೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಹವಾ! ಇನ್ಮುಂದೆ ಇಲ್ಲಿ ನಾನ್‌ವೆಜ್‌ ಕೂಡಾ ಸಿಗುತ್ತಾ?

ಇಂದು ಪಾವಗಡದ ಸೋಲಾರ್ ಪಾರ್ಕ್ ನಲ್ಲಿ 2400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇದು ಏಷ್ಯಾದಲ್ಲಿ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿದೆ. ನಿಮ್ಮ ದಾಖಲೆ, ಆಸ್ತಿಗಳು ನಿಮ್ಮ ಬಳಿ ಇದೆ. ಬಾಡಿಗೆ ಸಮಯಕ್ಕೆ ಸರಿಯಾಗಿ ನಿಮಗೆ ತಲುಪುತ್ತಿದೆ.

ಈ ಭಾಗದಲ್ಲಿ ಒಣಭೂಮಿ ಜಾಗಗಳನ್ನು ಗುರುತಿಸಿ ನೀವು ನಮಗೆ ಮಾಹಿತಿ ನೀಡಿ. ನಾವು ಕೇಂದ್ರಕ್ಕೆ ಪ್ರಸ್ತಾವನೆ ನೀಡುತ್ತೇವೆ. ಅವರು ಭೂಮಿ ಪರಿಶೀಲಿಸಿ ಸಮ್ಮತಿ ನೀಡಿದರೆ ಪಾರ್ಕ್ ವಿಸ್ತರಣೆ ಕೆಲಸ ಮಾಡುತ್ತೇವೆ.

ಇಲ್ಲಿನ ಜನ ಮಾತನಾಡಿಕೊಂಡು 5-10 ಸಾವಿರ ಎಕರೆ ಭೂಪ್ರದೇಶ ನೀಡಿದರೆ, ಮತ್ತೆ ಸೋಲಾರ್ ಪಾರ್ಕ್ ಮಾಡೋಣ. ಕಲಬುರ್ಗಿ, ರಾಯಚೂರು ಹಾಗೂ ಬೇರೆ ಜಿಲ್ಲೆಗಳಿಂದಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದೆ.

ಇದನ್ನೂ ಓದಿ: ಬಹುನಿರೀಕ್ಷಿತ ಬಿಬಿಎಂಪಿ ಚುನಾವಣೆಗೆ ಮತ್ತೆ ವಿಗ್ನ ಎದುರಾಗಿದೆ..!

ನಾನು ಕೂಡ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಈ ಭಾಗದಲ್ಲಿ ನಾವೇ ಮುಂದೆ ನಿಂತು ಪಾಣಿ, ಖಾತೆ ಎಲ್ಲಾ ಮಾಡಿಸಿಕೊಟ್ಟಿದ್ದು, ನೀವು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ.ಈ ಸೋಲಾರ್ ಪಾರ್ಕ್ ನೋಡಲು ತೆರಳುತ್ತಿರುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಿಳಿಸಿದರು. ಆಗ ನಾನು ಕೂಡ ಬರುತ್ತೇನೆ ಎಂದು ಆಗಮಿಸಿದ್ದೇನೆ. ಇಲ್ಲಿ ಸೋಲಾರ್ ಪಾರ್ಕ್ ಉತ್ತಮವಾಗಿ ನಿರ್ವಹಣೆ ಮಾಡಲಾಗಿದೆ. 

ನೀವು ನಮ್ಮ ಶಾಸಕರನ್ನು ಗೆಲ್ಲಿಸಿ ಶಕ್ತಿ ತುಂಬಿದ್ದು, ನಾವೆಲ್ಲರೂ ಸೇರಿ ಈ ತಾಲೂಕು ಅಭಿವೃದ್ಧಿ ಮಾಡುತ್ತೇವೆ. ನಿಮಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶೇ.90ರಷ್ಟು ಕೆಲಸ ಮುಗಿದಿದೆ.’

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Section: 
English Title: 
D.K.Shivakumar Who Gave Feedback On Developing And Expanding The Largest Solar Park
News Source: 
Home Title: 

ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ; ಡಿಸಿಎಂ ಡಿ.ಕೆ.ಶಿ

ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ; ಡಿಸಿಎಂ ಡಿ.ಕೆ.ಶಿ
Yes
Is Blog?: 
No
Tags: 
Facebook Instant Article: 
Yes
Highlights: 

ಸೋಲಾರ್ ಪಾರ್ಕ್ ಅನ್ನು ಅಭಿವೃದ್ಧಿ ಪಡಿಸಿ ಅದನ್ನು ವಿಸ್ತರಣೆ ಮಾಡುವ ಯೋಜನೆ

ರಾಜ್ಯದಲ್ಲಿ ಜಮೀನು ನೀಡಿದರೆ ಸೋಲಾರ್ ಪಾರ್ಕ್ ನಿರ್ಮಾಣ

ರಾಜ್ಯದ ವಿವಿಧ ಭಾಗಗಳಲ್ಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ

Mobile Title: 
ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ; ಡಿಸಿಎಂ ಡಿ.ಕೆ.ಶಿ
Zee Kannada News Desk
Publish Later: 
No
Publish At: 
Wednesday, June 14, 2023 - 17:23
Request Count: 
1
Is Breaking News: 
No
Word Count: 
346