ಬೆಂಗಳೂರು: ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು:
ಇದನ್ನೂ ಓದಿ: ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?
ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದರು.
ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಹೇಳಿದ್ದಾರೆ ಎಂದಾಗ, “ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.
ಇದನ್ನೂ ಓದಿ: ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು : ಶುಭ ಗಳಿಗೆಯಲ್ಲಿಯೇ ಜೈಲಿನಿಂದ ಬಿಡುಗಡೆ
ರೇವಣ್ಣ ಸ್ಥಿತಿ ನೋಡಿ ಬೇಸರವಾಗುತ್ತದೆ:
ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ