ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ : ಡಿಸಿಎಂ

ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲಾ ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

Written by - Prashobh Devanahalli | Edited by - Krishna N K | Last Updated : Jun 21, 2024, 06:58 PM IST
    • ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ಉದ್ಘಾಟನೆ
    • ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧ
    • ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ
ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ : ಡಿಸಿಎಂ title=

ಬೆಂಗಳೂರು : ಸುಗಮ ಸಂಚಾರ ಹಾಗೂ ಸಂಚಾರಿ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿದರು. ಈ ಮಾತನಾಡಿದ ಅವರು, ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲಾ ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

ಇದನ್ನೂ ಓದಿ:ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು: ರಾಜ್ಯ ಸರ್ಕಾರದ ಮಹತ್ವದ ಸಭೆ

ಅಲ್ಲದೆ, ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಮೂಲಕ ಬೆಂಗಳೂರು ನಗರ ಇಂದು ಹೊಸ ಇತಿಹಾಸ ಪುಟಕ್ಕೆ ಸೇರಿದೆ. ಅಲ್ಲದೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗಿದೆ. ಇಲ್ಲಿ ಪ್ರತಿ ಗಂಟೆಗೆ ವಾಹನ ನಿಲುಗಡೆಗೆ 20-30 ರೂ. ನಿಗದಿ ಮಾಡಿದ್ದು, ಎರಡು ಮೂರು ಕಾರು ಹೊಂದಿರುವವರು ಕೂಡ ಇಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. 

ನಗರದ ಯಾವುದೇ ಭಾಗದಿಂದ ಜನ ತಮ್ಮ ವಾಹನದಲ್ಲಿ ಬಂದರೂ ಇಲ್ಲಿ ಅವರು ವಾಹನ ನಿಲುಗಡೆ ಮಾಡಿ, ಅವರು ವಿಧಾನಸೌಧ, ಹೈಕೋರ್ಟ್, ರೈಲ್ವೇ ನಿಲ್ದಾಣ ಸೇರಿದಂತೆ ಗಾಂಧಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋಗಲು ಗುತ್ತಿಗೆದಾರರು ಉಚಿತ ಸಂಚಾರಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಗಾಂಧಿ ನಗರದಲ್ಲಿ ದಿನೇಶ್ ಗುಂಡೂರಾವ್ ಅವರ ಮುಖಂಡತ್ವದಲ್ಲಿ ವಿಶೇಷ ಯೋಜನೆ ಜಾರಿ ಮಾಡಲಾಗಿದೆ. 

ಗಾಂಧಿನಗರ ಎಂದರೆ ಮಧ್ಯಮ ವರ್ಗದ ಜನ ಹೆಚ್ಚಾಗಿ ಬರುತ್ತಿದ್ದಾರೆ. ವಾಹನ ನಿಲುಗಡೆ ಸಮಸ್ಯೆ ಎದುರಾಗುತ್ತಿತ್ತು. ಈಗ ಅದಕ್ಕೆ ಪರಿಹಾರ ನೀಡಲಾಗುತ್ತಿದೆ. ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ಮಾಡುವ ಹೊಸ ಪ್ರಯೋಗಕ್ಕೆ ಗುತ್ತಿಗೆದಾರರು ಕೈ ಹಾಕಿದ್ದಾರೆ. ಅವರು ಸರ್ಕಾರಕ್ಕೂ 1.50 ಕೋಟಿ ಹಣ ಪಾವತಿಸಿ, ಹೇಗೆ ಆದಾಯ ಮಾಡುತ್ತಾರೋ ಗೊತ್ತಿಲ್ಲ. ಇದು ಸುಲಭವಾದ ಕೆಲಸವಲ್ಲ. ಈ ವ್ಯವಸ್ಥೆ ಗಾಂಧಿನಗರಕ್ಕೆ ಬಹಳ ಅವಶ್ಯಕವಾಗಿದೆ.

ಇದನ್ನೂ ಓದಿ: ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲು ಬರುವವರಿಗೂ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲೋ ಗಾಡಿ ನಿಲ್ಲಿಸಿ ಬರುವುದಕ್ಕಿಂತ ಇಂತಹ ವ್ಯವಸ್ಥೆ ಬಳಸಿಕೊಳ್ಳುವುದು ಹೆಚ್ಚಿನ ಅನುಕೂಲವಾಗುತ್ತದೆ. ಖಾಸಗಿಯವರು, ವರ್ತಕರು, ಗ್ರಾಹಕರು ಸೇರಿದಂತೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು. ಇದು ಮಾದರಿ ಯೋಜನೆಯಾಗಿದ್ದು, ಬೆಂಗಳೂರಿನ ಇತರ ಕಡೆಗಳಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿ ಮಾಡಬಹುದು ಎಂದು ಚರ್ಚೆ ಮಾಡಿ ಜಾರಿ ಮಾಡುತ್ತೇವೆ.

ಇಂತಹ ಗುತ್ತಿಗೆದಾರರು ಶಕ್ತಿಶಾಲಿಯಾದರೆ ಮಾತ್ರ ಸರ್ಕಾರ ಶಕ್ತಿಶಾಲಿಯಾಗುತ್ತದೆ. ಅವರು ದುರ್ಬಲರಾದರೆ ಸರ್ಕಾರವೂ ದುರ್ಬಲವಾಗುತ್ತದೆ. ಈ ವಿಚಾರವಾಗಿ ಏಳು ಬಾರಿ ಟೆಂಡರ್ ಕರೆದು ವಿಫಲವಾಗಿದ್ದೆವು. ಇವರು ದೊಡ್ಡ ಧೈರ್ಯ ಮಾಡಿ ಮುಂದೆ ಬಂದಿದ್ದಾರೆ. ಅವರ ಧೈರ್ಯವನ್ನು ನಾನು ಮೆಚ್ಚುತ್ತೇನೆ. ನಮ್ಮ ಮಾಲ್ ಗಳಲ್ಲೂ ಇಂತಹ ವ್ಯವಸ್ಥೆ ಇದೆ. ಅಲ್ಲಿನ ಗ್ರಾಹಕ ವರ್ಗವೇ ಬೇರೆ. ಇಲ್ಲಿ ಅಂತಹ ಗ್ರಾಹಕ ವರ್ಗ ಹೆಚ್ಚಾಗಿ ಬರುವುದಿಲ್ಲ. 

ನನಗೂ ಗಾಂಧಿನಗರಕ್ಕೂ ಸುಮಾರು 25 ವರ್ಷಗಳ ಸಂಬಂಧ. ಇಲ್ಲೇ ಕಾಲೇಜಿನಲ್ಲಿ ಓದಿದೆ, ಜನರಲ್ ಹಾಸ್ಟೆಲ್ ನಲ್ಲಿ ಇದ್ದೆ. ಇಲ್ಲಿ ನನ್ನ ಕಚೇರಿ ಹೊಂದಿ ವ್ಯವಹಾರಗಳನ್ನು ಮಾಡಿದ್ದೇನೆ. ಹೀಗಾಗಿ ಗಾಂಧಿನಗರದ ವ್ಯವಹಾರಗಳ ಬಗ್ಗೆ ನನಗೆ ಅರಿವಿದೆ. ಗಾಂಧಿನಗರದ ಸುತ್ತಮುತ್ತ ಪಾರ್ಕಿಂಗ್ ಬ್ಯಾನ್ ಮಾಡಿದ್ದೇವೆ. 

ಇದನ್ನೂ ಓದಿ:"ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ"

ಎರಡು ಮೂರು ದಿನಗಳಲ್ಲಿ ಜಾಹೀರಾತು ನೀತಿ: ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ. ಈ ಕಾರ್ಯಕ್ರಮದ ನಂತರ ಜಾಹಿರಾತು ನೀತಿ ಬಗ್ಗೆ ಪಾಲಿಕೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಜಾಹೀರಾತು ನೀತಿಯನ್ನು ತರುತ್ತೇವೆ. ನಂತರ ಟಿಡಿಆರ್ ಸಮಸ್ಯೆ ಬಗೆಹರಿಸಲಾಗುವುದು. ನಂತರ ಪ್ರೀಮಿಯಂ ಎಫ್ಎಆರ್ ಸೇರಿದಂತೆ ಎಲ್ಲಾ ವಿಚಾರವಾಗಿ ಪರಿಹಾರ ಕಂಡುಕೊಳ್ಳಲಾಗುವುದು. 

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಡಬಲ್ ಡೆಕ್ಕರ್ ಕಾರಿಡಾರ್ ಮೂಲಕ ಮೇಲ್ಸೇತುವೆ ಹಾಗೂ ಅದರ ಮೇಲೆ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ಮೆಟ್ರೋ ಮಾರ್ಗ ಮಾಡಿದರೂ ಮೇಲ್ಸೇತುವೆ ಜತೆಯಲ್ಲೇ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲಾಗುವುದು. ಇದರಿಂದ ಖಾಸಗಿ ಭೂಮಿ ವಶಕ್ಕೆ ಪಡೆಯುವ ಪ್ರಕ್ರಿಯೆಯಿಂದ ಮುಕ್ತರಾಗುತ್ತೇವೆ. ಬಿಬಿಎಂಪಿ ಹಾಗೂ ಬಿಎಂಆರ್ ಸಿಎಲ್ ಸಹಯೋಗದಲ್ಲಿ ಈ ಕಾಮಗಾರಿಗಳನ್ನು ಮಾಡಲಾಗುವುದು. 

ಎರಡನೇ ವಿಮಾನ ನಿಲ್ದಾಣ ಪ್ರಸ್ತಾವನೆ ನಿಜ: ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆ ಬಗ್ಗೆ ಕೇಳಿದಾಗ, ಸಚಿವ ಎಂ.ಬಿ ಪಾಟೀಲ್ ಅವರ ಹೇಳಿಕೆ ನಿಜ. 2032ರ ವೇಳೆಗೆ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಆಗಬೇಕು ಎಂಬ ಪ್ರಸ್ತಾಪ ಸಲ್ಲಿಸಲಾಗಿದೆ. 

ಇದನ್ನೂ ಓದಿ:ಆಸ್ತಿ ತೆರಿಗೆ ಪಾವತಿ; ಜುಲೈ 31ರವರೆಗೆ ಮಾತ್ರ ಓಟಿಎಸ್ ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಕದ ರಾಜ್ಯಗಳು ಈ ರೀತಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನಾವು ಕೂಡ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ರಾಜ್ಯದ ಟ್ರಾಫಿಕ್ ಬೇರೆ ರಾಜ್ಯದ ಪಾಲಾಗಬಾರದು ಎಂಬ ಉದ್ದೇಶದಿಂದ ಈ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಇನ್ನು ಸ್ಕೈಡೆಕ್ ನಿರ್ಮಾಣ ವಿಚಾರವಾಗಿ ನಾವು ಕೆಲವು ಜಾಗ ಶಿಫಾರಸ್ಸು ಮಾಡಿದ್ದೆವು. ಆದರೆ ಇಂತಿಷ್ಟು ವ್ಯಾಪ್ತಿಯಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಬೇರೆ ಮೂರ್ನಾಲ್ಕು ಕಡೆಗಳಲ್ಲಿ ಜಾಗ ನೋಡುತ್ತಿದ್ದೇವೆ” ಎಂದರು.

ಆದಾಯ ಮೂಲ ಗುರುತಿಸಲು ವಿದೇಶ ಕಂಪನಿಗೆ ಟೆಂಡರ್ ನೀಡಿರುವ ಬಗ್ಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ವಿದೇಶಿ ಕಂಪನಿಗಳು ಬೇಡ, ವಿಧಾನಸಭೆ ಅಧಿವೇಶನದಲ್ಲಿ ಅವರಿಗೆ ಸಮಯ ಸಿಗುತ್ತದೆ. ಅವರೇ ನಮಗೆ ಆದಾಯ ಮೂಲ ಗುರುತಿಸಿ ಸರ್ಕಾರಕ್ಕೆ ಮಾಹಿತಿ ನೀಡಿದರೆ ಬಹಳ ಒಳ್ಳೆಯದ ಎಂದರು. ಇದೇ ವೇಳೆ ಚನ್ನಪಟ್ಟಣ ಭೇಟಿ ಬಗ್ಗೆ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, ಅವರ ಟೀಕೆಯನ್ನು ಬಹಳ ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News