ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ : ಡಿಸಿಎಂ

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಇಂದು ಸರ್ವಪಕ್ಷ ನಾಯಕರ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Jul 14, 2024, 10:15 PM IST
    • ಕಾವೇರಿ ನೀರು ಹಂಚಿಕೆ ವಿಚಾರವಾಗಿ ಇಂದು ಸರ್ವಪಕ್ಷ ನಾಯಕರ ಸಭೆ ಕರೆದು ಚರ್ಚೆ.
    • ನಮ್ಮ ಅಣೆಕಟ್ಟುಗಳಲ್ಲಿ 30% ನಷ್ಟು ನೀರು ಕೊರತೆ ಇದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚೆ.
    • ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ.
ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ : ಡಿಸಿಎಂ title=
Cauvery row

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಬಳಿಕ ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಇಂದು ಸರ್ವಪಕ್ಷ ನಾಯಕರ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಪ್ರಾಧಿಕಾರದವರು ಸಾಮಾನ್ಯವಾಗಿ ಜುಲೈ ತಿಂಗಳ ಅಂತ್ಯದಲ್ಲಿ ಅಥವಾ ಆಗಸ್ಟ್ ನಲ್ಲಿ ಸಭೆ ಮಾಡುತ್ತಿದ್ದರು. ಈ ಬಾರಿ ಬೇಗ ಸಭೆ ಮಾಡಿ ನಿತ್ಯ ಒಂದು ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕಾವೇರಿ ನೀರು ಬಿಡುಗಡೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ: 1 ಟಿಎಂಸಿ ಬದಲಿಗೆ 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರ

ನಮ್ಮ ಅಣೆಕಟ್ಟುಗಳಲ್ಲಿ 30% ನಷ್ಟು ನೀರು ಕೊರತೆ ಇದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಸಮಿತಿಯ ತೀರ್ಮಾನದ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಇದೇ ವೇಳೆ ಈಗ ಹೊರಡಿಸಿರುವ ತೀರ್ಮಾನವನ್ನು ನಾವು ಗೌರವಿಸಬೇಕು.

ಮೇಲ್ಮನವಿ ಆಲಿಸುವವರೆಗೂ ಎಷ್ಟು ನೀರು ಬಿಡಲಾಗುವುದು ಎಂದು ಕೇಳಿದಾಗ, ಕಳೆದ ಎರಡು ಮೂರು ದಿನಗಳಿಂದ 1 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ. ಬಿಳಿಗುಂಡ್ಲು ವರೆಗೂ ತಲುಪಲು ಈ ನೀರು 250 ಕಿ.ಮೀ ಹರಿಯಬೇಕು. ಹೀಗಾಗಿ ನೀರಿನ ಪ್ರಮಾಣ ನೋಡಿಕೊಂಡು ನೀರು ಹರಿಸುತ್ತಿದ್ದೇವೆ. ಎರಡು ದಿನಗಳ ಕಾಲ 20 ಸಾವಿರ ಕ್ಯೂಸೆಕ್ ನೀರು ಹರಿಸಿದರೆ ಇಂದು 13 ಸಾವಿರ ಕ್ಯೂಸೆಕ್ ನೀರು ಹರಿಸಿದ್ದೇವೆ. ಸಮಿತಿಯ ತೀರ್ಮಾನ ಗೌರವಿಸಿ ಹಾಗೂ ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News