ನಮ್ಮ ಬಳಿ "136 +.." ಸೀಟುಗಳಿವೆ, ನಮ್ಮ ಸರ್ಕಾರಕ್ಕಿಂತ ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ದೇವೇಗೌಡರು ಎಷ್ಟು ಭವಿಷ್ಯ ಕಾಲವನ್ನು ನೋಡಿದ್ದಾರೋ ನಾನು ಅಷ್ಟೇ ಭವಿಷ್ಯ ಕಾಲವನ್ನು ನೋಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Written by - Prashobh Devanahalli | Last Updated : Apr 13, 2024, 01:54 PM IST
  • ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ
  • ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ
  • ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
ನಮ್ಮ ಬಳಿ "136 +.." ಸೀಟುಗಳಿವೆ, ನಮ್ಮ ಸರ್ಕಾರಕ್ಕಿಂತ ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌  title=

ಬೆಂಗಳೂರು: ನಮ್ಮ ಸರ್ಕಾರದ ಬಳಿ “136 +++..” ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ದೇವೇಗೌಡರು ಎಷ್ಟು ಭವಿಷ್ಯ ಕಾಲವನ್ನು ನೋಡಿದ್ದಾರೋ ನಾನು ಅಷ್ಟೇ ಭವಿಷ್ಯ ಕಾಲವನ್ನು ನೋಡಿದ್ದೇನೆ. ಅವರಿಗೆ 60 ವರ್ಷಗಳ ರಾಜಕೀಯದ ಅನುಭವವಿದ್ದರೆ, ನನಗೆ 40 ವರ್ಷಗಳ ರಾಜಕಾರಣದ ಅನುಭವವಿದೆ. “136 +++” ಸೀಟುಗಳು ನಮ್ಮ ಸರ್ಕಾರದ ಬಳಿ ಇವೆ. ಅವರು ತಮ್ಮ ಪಕ್ಷ ಜೀವಂತವಾಗಿ ಇರುತ್ತದೆಯೋ ಇಲ್ಲವೋ ಎಂಬುದನ್ನು ಮೊದಲು ಹೇಳಲಿ ಎಂದರು.

ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುತ್ತದೆಯೇ ಅಥವಾ ತನ್ನದೇ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳಲಿದೆಯೇ ಎಂಬುದರ ಬಗ್ಗೆ ಜನರಿಗೆ ತಿಳಿಸಿಲಿ. ಅವರೇ ಕಟ್ಟಿದ ಪಕ್ಷ ಹಾಗೂ ಅದರ ಬಗ್ಗೆ ಅವರ ನಿಷ್ಠೆಯನ್ನು ನಾನು ಪ್ರಶ್ನೆ ಮಾಡುವುದಿಲ್ಲ. ನಮ್ಮ ಸರ್ಕಾರದ ಅಸ್ತಿತ್ವ ಪಕ್ಕಕ್ಕಿರಲಿ, ಅವರ ಪಕ್ಷದ ಅಸ್ತಿತ್ವವೇ ಈಗ ಇಲ್ಲವಲ್ಲ ಎಂದು ತಿಳಿಸಿದರು. 

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌ ಆರೋಪಿ ಬಂಧಿಸಿದ NIA ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ 

ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಪ್ರಧಾನಮಂತ್ರಿ ಸ್ಥಾನದ ಬಗ್ಗೆ ನಮಗೆ ಬಹಳ ಗೌರವವಿದೆ. ಪ್ರಧಾನಮಂತ್ರಿಗಳು ಈ ವಿಚಾರವಾಗಿ ಈಗ ಯಾಕೆ ಮಾತನಾಡುತ್ತಿದ್ದಾರೆಯೋ ಗೊತ್ತಿಲ್ಲ. ಸಂವಿಧಾನ ಬದಲಿಸುತ್ತೇವೆ ಎಂದ ಅವರ ಪಕ್ಷದ ನಾಯಕರುಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಲಿಲ್ಲ ಏಕೆ? ಅವರಿಗೆ ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದವರನ್ನು ಮೊದಲು ತಮ್ಮ ಪಕ್ಷದಿಂದ ಉಚ್ಛಾಟಿಸಲಿ ಎಂದರು. 

ಆಗ ಅವರ ಬದ್ಧತೆಯನ್ನು ನಾವು ಒಪ್ಪಬಹುದು. ಈಗ ಚುನಾವಣೆ ಬಂದಿದೆ ಎಂದು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ನಾವು ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇವೆ. ಬಿಜೆಪಿಗೆ 400 ಸೀಟು ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದೆಲ್ಲಾ ಅವರ ಪಕ್ಷದ ನಾಯಕರು, ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇಷ್ಟು ದಿನ ಈ ವಿಚಾರವಾಗಿ ಮೌನವಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡವರು ಸೇರಿದಂತೆ ಎಲ್ಲಾ ವರ್ಗದವರು ಸಂವಿಧಾನಕ್ಕೆ ಅಪಾಯ ಬಂದಿದೆ, ನಮ್ಮ ಹಕ್ಕುಗಳಿಗೆ ಕುತ್ತು ಬಂದಿದೆ ಎಂದು ಧ್ವನಿ ಎತ್ತಿದ ನಂತರ ಈ ಹೇಳಿಕೆ ನೀಡಿದ್ದಾರೆ. ಇದು ಕೇವಲ ರಾಜಕೀಯ ಹೇಳಿಕ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ್‌ ಘೋಷಣೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News