Dr Ashwath Narayan: ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಡಿಸಿಎಂ ಅಶ್ವತ್ಥ್ ನಾರಾಯಣ!

ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಅನ್ನೋ ಕಲ್ಪನೆಯನ್ನು ರದ್ದುಗೊಳಿಸಿ, ಎಲ್ಲರನ್ನು ಖಾಯಂಗೊಳಸುವ ಕುರಿತು ರಾಜ್ಯ ಸರ್ಕಾರ ಚಿಂತನೆ

Last Updated : Feb 18, 2021, 12:56 PM IST
  • ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಅನ್ನೋ ಕಲ್ಪನೆಯನ್ನು ರದ್ದುಗೊಳಿಸಿ, ಎಲ್ಲರನ್ನು ಖಾಯಂಗೊಳಸುವ ಕುರಿತು ರಾಜ್ಯ ಸರ್ಕಾರ ಚಿಂತನೆ
  • ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ
  • ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವಂತ ಬೇಡಿಕೆ ಹಲವು ವರ್ಷಗಳ ಬೇಡಿಕೆ
Dr Ashwath Narayan: ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಡಿಸಿಎಂ ಅಶ್ವತ್ಥ್ ನಾರಾಯಣ! title=

ಬೆಂಗಳೂರು: ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಅನ್ನೋ ಕಲ್ಪನೆಯನ್ನು ರದ್ದುಗೊಳಿಸಿ, ಎಲ್ಲರನ್ನು ಖಾಯಂಗೊಳಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

ರಾಜ್ಯದಲ್ಲಿನ ಅತಿಥಿ ಉಪನ್ಯಾಸಕ(Guest Professor)ರನ್ನು ಖಾಯಂ ಗೊಳಿಸುವಂತ ಬೇಡಿಕೆ ಹಲವು ವರ್ಷಗಳ ಬೇಡಿಕೆಯಾಗಿತ್ತು. ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಈಗಾಗಲೇ ಅನೇಕ ಪ್ರತಿಭಟನೆಗಳು ಕೂಡ ನಡೆಸಲಾಗಿತ್ತು. ಆದ್ರೇ ಸರ್ಕಾರ ಸೂಕ್ತ ರೀತಿಯಲ್ಲಿ ಇದುವರೆಗೆ ಪ್ರತಿಸ್ಪಂದಿಸಿರಲಿಲ್ಲ.

ಉಡುಪಿ ಕೃಷ್ಣಮಠದಲ್ಲಿ ಶೃದ್ದಾ ಭಕ್ತಿಯಿಂದ ನೆರವೇರಿದ ಪರ್ಯಾಯ ಪೂರ್ವಭಾವಿ ಅಕ್ಕಿ ಮುಹೂರ್ತ

ಇದೀಗ ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ(Dr Ashwath Narayan), ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. 8 ಸಾವಿರ ಉಪನ್ಯಾಸಕರ ನೇಮಕಕ್ಕೂ ನಿರ್ಧಾರ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಬೇಡಿಕೆ ಕೂಡ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಅತಿಥಿ ಉಪನ್ಯಾಸಕರು ಅನ್ನೋ ಕಲ್ಪನೆ ರದ್ದು ಪಡಿಸಿ, ಎಲ್ಲರನ್ನೂ ಖಾಯಂಗೊಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದರು.

ಬಿಜೆಪಿಯವರು ಮಾಡುತ್ತಿರುವ ರಾಮಜಪ ಅಧಿಕ್ಕಾರಕ್ಕಾಗಿ ಮಾತ್ರ: HD Kumaraswamy

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News