ಬೆಂಗಳೂರು: Dearness Allowance Hike - ರಾಜ್ಯದ (Karnataka) ಸುಮಾರು 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಹಾಗೂ ವಿವಿಧ ನಿಗಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 3 ಲಕ್ಷ ನೌಕರರಿಗೆ ರಾಜ್ಯ ಸರ್ಕಾರ (Karnataka Government) ಸಂತಸದ ಸುದ್ದಿಯೊಂದನ್ನು ಪ್ರಕಟಿಸಿದೆ. ಹೌದು, ನಿರೀಕ್ಷೆಯಂತೆ ರಾಜ್ಯ ಸರ್ಕಾರ, ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (Dearness Allowance) ಮೂಲ ವೇತನದ ಶೇ.11.25 ರಿಂದ ಶೇ.21.50 ಯಷ್ಟು ಹೆಚ್ಚಳ ಮಾಡಿದೆ. ಹೆಚ್ಚಿಸಲಾಗಿರುವ ಈ ತುಟ್ಟಿ ಭತ್ಯೆ ಜುಲೈ 1 ರಿಂದ ಅನ್ವಯಿಸಲಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.
ಇದನ್ನೂ ಓದಿ-Breaking News: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್.ಯಡಿಯೂರಪ್ಪ
ಇದಕ್ಕೂ ಮೊದಲು ಜುಲೈ 21ರಂದು ಈ ಕುರಿತು ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (DA) ಶೇ.11 ರಷ್ಟು ಹೆಚ್ಚಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಹೇಳಿತ್ತು.
ಇದನ್ನೂ ಓದಿ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಜೆ.ಪಿ.ನಡ್ಡಾ ಶಹಬ್ಬಾಸ್ ಗಿರಿ..!
ಈ ಕುರಿತು ಹೇಳಿಕೆ ನೀಡಿದ್ದ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ, ಕೊರೊನಾ ಮಹಾಮಾರಿಯ (Corona Pandemic)ಕಾರಣ ಕಳೆದ ವರ್ಷವೂ ಕೂಡ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗಿರಲಿಲ್ಲ, ಹೀಗಾಗಿ ಒಟ್ಟು ಮೂರು ಹಂತಗಳಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಿಸಲು ಸಂಘ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿದ್ದ ಮುಖ್ಯಮಂತ್ರಿಗಳು (CM Karnataka) ಈ ಸಂಬಂಧ ಹಣಕಾಸು ಇಲಾಖೆಗೆ (Finance Department) ಆದೇಶ ಜಾರಿಗೊಳಿಸಿದ್ದಾರೆ ಎಂದು ಹೇಳಿದ್ದರು. ಪ್ರಸ್ತುತ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.10.25ರಷ್ಟು ಏರಿಕೆಯಾಗಿದೆ.
ಇದನ್ನೂ ಓದಿ-BS Yadiyurappa Resignation: BSY ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವೇನು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ