2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ: ಎಚ್​ಡಿಕೆ

ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ ಅಂತಾ ಹೇಳಿದ್ದಾರೆ.

Written by - Zee Kannada News Desk | Last Updated : Mar 3, 2022, 02:02 PM IST
  • ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೇ?
  • ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ?
  • ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲವೆಂದರೆ ಸಚಿವರು ಮತ್ತು ಸರ್ಕಾರಕ್ಕೆ ಕಣ್ಣು-ಕಿವಿ ಇಲ್ಲವೆಂದು ಭಾವಿಸಬೇಕಾಗುತ್ತದೆ
2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ: ಎಚ್​ಡಿಕೆ title=
ನೀಟ್ ಪರೀಕ್ಷೆಗೆ ಚರಮಗೀತೆ ಹಾಡುತ್ತೇವೆಂದ ಕುಮಾರಸ್ವಾಮಿ

ಬೆಂಗಳೂರು: 2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ.

‘2023ರಲ್ಲಿ ಜೆಡಿಎಸ್ ಸರ್ಕಾರ(JDS Government) ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ’ ಅಂತಾ ಹೇಳಿದ್ದಾರೆ.

‘ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್(NEET Exam) ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು’ ಅಂತಾ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Mekedatu project: ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

‘ನಾನು ಮೆಡಿಕಲ್ ಕಾಲೇಜು(Medical Colleges) ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ. ಆದರೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು ನಾಲಿಗೆ ಜಾರಿ, ತಮ್ಮ ಉನ್ನತ ಗುಣವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಅಂತಾ ಎಚ್ ಡಿಕೆ ಕುಟುಕಿದ್ದಾರೆ.

‘ಕೇಂದ್ರದ ಒಬ್ಬ ಸಚಿವರು ನೀಟ್ ಪರೀಕ್ಷೆ(NEET Exam) ಪಾಸ್ ಮಾಡಲಾಗದ ವಿಧ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಾರೆ ಎಂದು ಆ ಮಕ್ಕಳ ಸ್ವಾಭಿಮಾನವನ್ನು ಅಪಮಾನಿಸಿದ್ದರೆ, ಉನ್ನತ ಶಿಕ್ಷಣ ಸಚಿವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದ್ರೋಹದ ಹಣೆಪಟ್ಟಿ ಕಟ್ಟಿ ದೊಡ್ಡತನ ಮೆರೆದಿದ್ದಾರೆ. ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ?’ ಅಂತಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Mekedatu Project: ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು!- ಬಿಜೆಪಿ

‘ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ? ಇದೆಲ್ಲವೂ ಸರ್ಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲವೆಂದು ಭಾವಿಸಬೇಕಾಗುತ್ತದೆ’ ಅಂತಾ ಕುಮಾರಸ್ವಾಮಿ(HD Kumaraswamy)ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News