ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಳ : ನಿಯೋಗದೊಂದಿಗೆ ಮುಖ್ಯಮಂತ್ರಿಗೆ ಮನವಿ

ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.   

Written by - Ranjitha R K | Last Updated : Mar 11, 2024, 07:01 PM IST
  • ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
  • ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಮನವಿ
  • ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಆಗ್ರಹ
ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಳ : ನಿಯೋಗದೊಂದಿಗೆ ಮುಖ್ಯಮಂತ್ರಿಗೆ ಮನವಿ  title=

ಬೆಂಗಳೂರು :  ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿಯಾಗಿದ್ದಾರೆ. ಈ ವೇಳೆ  ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ. 

ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಈ ವೇಳೆ ಸಚಿವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಇದನ್ನೂ ಓದಿ : ಬಿಜೆಪಿ ಜೆಡಿಎಸ್ ಮೈತ್ರಿ ಸೂತ್ರ ಸಫಲವಾಗುತ್ತದೆ - ಜೋಶಿ

 ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಇವತ್ತು ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಆಗಬಹುದು - ಯಡಿಯೂರಪ್ಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News