ಪ್ರಜ್ವಲ್ ರೇವಣ್ಣ ಟಿಕೆಟ್'ಗೆ ಆಗ್ರಹಿಸಿ ದೇವೇಗೌಡರ ನಿವಾಸದ ಎದುರು ಪ್ರತಿಭಟನೆ

ರಾಜರಾಜೇಶ್ವರಿ ಕ್ಷೇತ್ರದಿಂದ ಪ್ರಜ್ವಲ್ ಕಣಕ್ಕಿಳಿಸಲು ಅಭಿಮಾನಿಗಳ ಒತ್ತಾಯ.

Last Updated : Apr 7, 2018, 02:54 PM IST
ಪ್ರಜ್ವಲ್ ರೇವಣ್ಣ ಟಿಕೆಟ್'ಗೆ ಆಗ್ರಹಿಸಿ ದೇವೇಗೌಡರ ನಿವಾಸದ ಎದುರು ಪ್ರತಿಭಟನೆ title=

ಬೆಂಗಳೂರು: ಹಲವು ದಿನಗಳಿಂದ ಹಗ್ಗಜಗ್ಗಾಟದಲ್ಲೇ ಇರುವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣರಿಗೆ ರಾಜರಾಜೇಶ್ವರಿ ಕ್ಷೇತ್ರದಿಂದ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪದ್ಮನಾಭನಗರದ ನಿವಾಸದ ಎದುರು  ಪ್ರಜ್ವಲ್‌ ಅಭಿಮಾನಿ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. 

ಎಚ್.ಡಿ. ದೇವೇಗೌಡರ ಮನೆ ಎದುರು ಜಮಾಯಿಸಿದ್ದ ನೂರಾರು ಪ್ರಜ್ವಲ್ ಅಭಿಮಾನಿಗಳು ಪ್ರಜ್ವಲ್ ಗೆ ರಾಜರಾಜೇಶ್ವರಿ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಗೌಡರ ಕಾರಿಗೆ ಮುತ್ತಿಗೆ ಹಾಕಿದರು. ಆದರೆ ಎಚ್ಡಿಡಿ ಯಾವುದಕ್ಕೂ ಪ್ರತಿಕ್ರಿಯೆ ನೀಡದೆ ಮುಂದೆ ಸಾಗಿದರು.

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಪ್ರಜ್ವಲ್‌ಗೆ ಟಿಕೆಟ್‌ ನೀಡಿದರೆ ಗೆಲುವು ಖಚಿತ ಎಂದು ಜೆಡಿಎಸ್ ಕಾರ್ಯಕರ್ತರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನಾವು ಕುಟುಂಬ ರಾಜಕಾರಣ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಒತ್ತಡ ಇತ್ತು. ಆದರೆ, ಪ್ರಜ್ವಲ್​ ವಿಷಯದ ಬಗ್ಗೆ ಶೀಘ್ರದಲ್ಲೇ ಒಂದು ಸ್ಪಷ್ಟನೆ ನೀಡುತ್ತೇವೆ ಎಂದು ತಿಳಿಸಿದರು.

Trending News