ಬಲ ಪ್ರದರ್ಶನ ಅಗತ್ಯವಿಲ್ಲ! ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ” ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Written by - Ranjitha R K | Last Updated : Dec 5, 2024, 12:41 PM IST
  • ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ
  • ಮುಖ್ಯಮಂತ್ರಿ ಮಾತಿಗೆ ನನ್ನ ಸಹಮತ
  • ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಹೇಳಿಕೆ
ಬಲ ಪ್ರದರ್ಶನ ಅಗತ್ಯವಿಲ್ಲ! ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ title=

ಬೆಂಗಳೂರು : ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.  

ನಮ್ಮ ಪಕ್ಷ ಹಾಗೂ ಅನೇಕ ಸ್ವಾಭಿಮಾನಿ ಸಂಘಟನೆಗಳು ಸೇರಿ ಮಾಡುತ್ತಿರುವ ಕಾರ್ಯಕ್ರಮ ಇದು. ಮುಂದೆ ಬೇರೆ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಅನೇಕ ಸಂಘಟನೆಗಳು ಮುಂದೆ ಬಂದಿವೆ. ಹಾಸನದಲ್ಲಿ ನಮ್ಮ ತಾಯಂದಿರು ಕಣ್ಣೀರು ಹಾಕಿದಾಗ ಅವರ ಕಣ್ಣೀರನ್ನು ಯಾರೂ ಒರೆಸುವ ಪ್ರಯತ್ನ ಮಾಡಲಿಲ್ಲ. ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕಿದರು. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ” ಎಂದು ತಿಳಿಸಿದರು.

ಇದನ್ನೂ ಓದಿ : ನಿಗದಿತ ಅವಧಿಯೊಳಗೆ ಮನೆ ಕಟ್ಟದವರಿಗೆ ದಂಡ ಫಿಕ್ಸ್: ಬಿಡಿಎ ಎಚ್ಚರಿಕೆ

ಮುಖ್ಯಮಂತ್ರಿ ಮಾತಿಗೆ ನನ್ನ ಸಹಮತ : 
ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪರಮೇಶ್ವರ್ ಅಸಮಾಧಾನದ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ನಿಮ್ಮ ಮುಂದೆ ಏನೂ ಮಾತನಾಡಿಲ್ಲ. ಪರಮೇಶ್ವರ್  ಹಾಗೂ ಇತರರ ಜತೆ ಮಾತನಾಡಿಲ್ಲ. ನಾನು ವಾಹಿನಿಯೊಂದರಲ್ಲಿ ನನ್ನದೇ ಆದ ವಿಚಾರ ಪ್ರಸ್ತಾಪ ಮಾಡಿದ್ದೆ. ನಾವು ಏನು ಮಾತನಾಡಿಕೊಂಡಿದ್ದೇವೆ ಎಂದು ನಿಮ್ಮ ಮುಂದೆ ಹೇಳಲು ಸಾಧ್ಯವೇ? ಈ ವಿಚಾರವಾಗಿ ಮುಖ್ಯಮಂತ್ರಿಗಳು ನಿನ್ನೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದ್ದು, ನಾನು ಚರ್ಚೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದೇನೆ. ಮುಖ್ಯಮಂತ್ರಿಗಳ ಮಾತನ್ನು ನಾನು ಒಪ್ಪುತ್ತೇನೆ. ಸದ್ಯಕ್ಕೆ ಅಧಿಕಾರ ಹಸ್ತಾಂತರದ ಪ್ರಸ್ತಾಪವಿಲ್ಲ. ಯಾವುದೇ ಸಮಸ್ಯೆ ಇಲ್ಲದೆ ನಮ್ಮ ಸರಕಾರದ ಅಧಿಕಾರ ಅವಧಿ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.  

ತಮ್ಮ ಮತ್ತು ಪರಮೇಶ್ವರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ರಾಜಕೀಯದಲ್ಲಿ ನನಗೆ ಯಾರೂ ವೈರಿಗಳಲ್ಲ. ಎಲ್ಲರೂ ನನ್ನ ಸ್ನೇಹಿತರೇ. ಪಕ್ಷದಲ್ಲಿ ನಾವು ಜತೆಗೂಡಿ ಕೆಲಸ ಮಾಡಿದ್ದು, ಮುಂದೆಯೂ ಜತೆಯಲ್ಲೇ ಸಾಗುತ್ತೇವೆ. ಜತೆಗೂಡಿ ಯಶಸ್ಸು ಕಾಣುತ್ತೇವೆ” ಎಂದು ಹೇಳಿದರು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News