ಎನ್‌ಜಿಇಎಫ್‌ ಜಾಗದಲ್ಲಿ ವಿಶ್ವದರ್ಜೆಯ ಟ್ರೀ ಪಾರ್ಕ್ (Tree Park) ಅಭಿವೃದ್ಧಿ: ಎಂ ಬಿ ಪಾಟೀಲ

ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಹತ್ತಿರವಿರುವ ಎನ್‌ಜಿಇಎಫ್‌ಗೆ ಸೇರಿದ 105 ಎಕರೆ ಜಾಗವನ್ನು ಹಾಗೆಯೇ ಉಳಿಸಿಕೊಂಡು, 30 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ಆಕರ್ಷಕ ವೃಕ್ಷೋದ್ಯಾನ (ಟ್ರೀ ಪಾರ್ಕ್) ಅಭಿವೃದ್ಧಿಪಡಿಸಲಾಗುವುದು. ಈ ಮೂಲಕ ನಗರದಲ್ಲಿ ಹಸಿರನ್ನು ಉಳಿಸಿಕೊಂಡು, ಇದನ್ನು ಮನೋಹರವಾದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.

Written by - Prashobh Devanahalli | Edited by - Manjunath N | Last Updated : Jun 20, 2023, 06:08 PM IST
  • ಎನ್‌ಜಿಇಎಫ್‌ಗೆ ಸೇರಿದ ಜಾಗದ ಪೈಕಿ 70 ಎಕರೆಯಲ್ಲಿ ದಟ್ಟ ಹಸಿರಿದ್ದು, ನಾನಾ ಪ್ರಭೇದಗಳ ಸಾವಿರಾರು ವೃಕ್ಷಗಳಿವೆ. ಜತೆಗೆ 5 ಕೈಗಾರಿಕಾ ಶೆಡ್‌ಗಳಿವೆ.
  • ಇವುಗಳ ಪೈಕಿ ಒಂದು ಮಾತ್ರ ಶಿಥಿಲವಾಗಿದೆ. ಮಿಕ್ಕವನ್ನು ಹಾಗೆಯೇ ಉಳಿಸಿಕೊಳ್ಳಲಾಗುವುದು.
  • 'ಹಂತ-1ಎ'ಯಲ್ಲಿ 11 ಕೋಟಿ ರೂ ಮತ್ತು 'ಹಂತ-1ಬಿ'ನಲ್ಲಿ 15 ಕೋಟಿ ರೂ. ವೆಚ್ಚ ಮಾಡಿ ವೃಕ್ಷೋದ್ಯಾನ ಅಭಿವೃದ್ಧಿ ಪಡಿಸಲಾಗುವುದು
ಎನ್‌ಜಿಇಎಫ್‌ ಜಾಗದಲ್ಲಿ ವಿಶ್ವದರ್ಜೆಯ ಟ್ರೀ ಪಾರ್ಕ್ (Tree Park) ಅಭಿವೃದ್ಧಿ: ಎಂ ಬಿ ಪಾಟೀಲ title=

ಬೆಂಗಳೂರು: ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಹತ್ತಿರವಿರುವ ಎನ್‌ಜಿಇಎಫ್‌ಗೆ ಸೇರಿದ 105 ಎಕರೆ ಜಾಗವನ್ನು ಹಾಗೆಯೇ ಉಳಿಸಿಕೊಂಡು, 30 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ಆಕರ್ಷಕ ವೃಕ್ಷೋದ್ಯಾನ (ಟ್ರೀ ಪಾರ್ಕ್) ಅಭಿವೃದ್ಧಿಪಡಿಸಲಾಗುವುದು. ಈ ಮೂಲಕ ನಗರದಲ್ಲಿ ಹಸಿರನ್ನು ಉಳಿಸಿಕೊಂಡು, ಇದನ್ನು ಮನೋಹರವಾದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.

ಈ ಸಂಬಂಧ ಮಂಗಳವಾರ ಇಲ್ಲಿ ಏರ್ಪಡಿಸಲಾಗಿದ್ದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಪ್ರಾಥಮಿಕ ಸುತ್ತಿನ ಸಭೆ ನಡೆಸಿದ ಅವರು ಈ ವಿಷಯ ತಿಳಿಸಿದರು. ಜತೆಗೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಎನ್‌ಜಿಇಎಫ್‌ಗೆ ಸೇರಿದ ಜಾಗದ ಪೈಕಿ 70 ಎಕರೆಯಲ್ಲಿ ದಟ್ಟ ಹಸಿರಿದ್ದು, ನಾನಾ ಪ್ರಭೇದಗಳ ಸಾವಿರಾರು ವೃಕ್ಷಗಳಿವೆ. ಜತೆಗೆ 5 ಕೈಗಾರಿಕಾ ಶೆಡ್‌ಗಳಿವೆ. ಇವುಗಳ ಪೈಕಿ ಒಂದು ಮಾತ್ರ ಶಿಥಿಲವಾಗಿದೆ. ಮಿಕ್ಕವನ್ನು ಹಾಗೆಯೇ ಉಳಿಸಿಕೊಳ್ಳಲಾಗುವುದು. 'ಹಂತ-1ಎ'ಯಲ್ಲಿ 11 ಕೋಟಿ ರೂ ಮತ್ತು 'ಹಂತ-1ಬಿ'ನಲ್ಲಿ 15 ಕೋಟಿ ರೂ. ವೆಚ್ಚ ಮಾಡಿ ವೃಕ್ಷೋದ್ಯಾನ ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ ವೈ-ಫೈ ಸೌಲಭ್ಯದೊಂದಿಗೆ 'ರೆಡಿಮೇಡ್ ವರ್ಕ್‌ಸ್ಪೇಸ್‌' ಕೂಡ ಇರಲಿದೆ. ಬಳಿಕ ಹಂತ-2ರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಮಾಹಿತಿ ಒದಗಿಸಿದರು.

ಹಂತ-1ಎ ಯಲ್ಲಿ ಸ್ಕಲ್ಪ್ಚರ್ ಕೋರ್ಟ್, 1.4 ಕಿ.ಮೀ ಉದ್ದದ ವಾಕ್‌ವೇ, ಫುಡ್‌ಕೋರ್ಟ್‌, ಎಲಿವೇಟೆಡ್‌ ವಾಕ್‌ವೇ ಮುಂತಾದ ಸೌಲಭ್ಯಗಳು ಬರಲಿವೆ. ಹಂತ-1ಬಿ ಯಲ್ಲಿ ಮಕ್ಕಳ ಆಟದ ತಾಣ, ಹೊರಾಂಗಣ ಜಿಮ್‌, ಸಾಕುಪ್ರಾಣಿಗಳ ಓಡಾಟಕ್ಕೆ ಅನುಕೂಲ, ಕಾರಂಜಿ, ವಾಚ್‌ ಟವರ್ ನಿರ್ಮಿಸಲಾಗುವುದು. ಹಂತ-2ರಲ್ಲಿ ಇನ್ನೋವೇಶನ್‌ ಹಬ್‌, ಕಲ್ಚರಲ್‌ ಹಬ್‌, ನರ್ಸರಿ, ಸ್ಪೋರ್ಟ್ಸ್ ಹಬ್‌, ಮಲ್ಟಿಪರ್ಪಸ್‌ ಥಿಯೇಟರ್ ಗಳು ಇರಲಿವೆ ಎಂದು ಸಚಿವರು ವಿವರಿಸಿದರು.

ಉದ್ದೇಶಿತ ವೃಕ್ಷೋದ್ಯಾನದಲ್ಲಿ ಕನ್ನಡ ನಾಡಿನ ಸಂಸ್ಕೃತಿಯ ಪ್ರತಿಬಿಂಬ ಇರುವಂತೆ ನೋಡಿಕೊಳ್ಳಲಾಗುವುದು. ಇದರ ಜತೆಗೆ ಎನ್‌ಜಿಇಎಫ್‌ನ ಬೆಳವಣಿಗೆ, ಅದರ ಯಶಸ್ಸು ಇತ್ಯಾದಿಗಳನ್ನು ಬಿಂಬಿಸಲಾಗುವುದು. ಒಟ್ಟಿನಲ್ಲಿ ಬೆಂಗಳೂರಿನ ಹಸಿರನ್ನು ಉಳಿಸಿಕೊಂಡು, ಅಭಿವೃದ್ಧಿಯನ್ನು ಸಾಧಿಸಬೇಕು ಎನ್ನುವುದು ನಮ್ಮ ಒತ್ತಾಸೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಲೈಂಗಿಕತೆಗೆ ನಕಾರ ಹೇಳುವುದು ಕ್ರೌರ್ಯ, ಆದರೆ ಅಪರಾಧವಲ್ಲ, ಕರ್ನಾಟಕ ಹೈಕೋರ್ಟ್ ಆದೇಶ

ನಗರದ ಪೂರ್ವ ಭಾಗ ಇತ್ತೀಚಿನ ವರ್ಷಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಆ ಭಾಗದ ನಿವಾಸಿಗಳಿಗೆ ಒಳ್ಳೆಯ ಪರಿಸರ ಇರುವಂತೆ ನೋಡಿಕೊಳ್ಳುವುದು ಕೂಡ ಈ ಆಶಯದ ಹಿಂದಿದೆ. ಇದರ ಜತೆಗೆ ಉದ್ದೇಶಿತ ಟ್ರೀಪಾರ್ಕ್‌ ವಿಶ್ವ ದರ್ಜೆಯ ತಾಣವಾಗಬೇಕು ಎನ್ನುವ ಕಳಕಳಿ ತಮ್ಮದಾಗಿದೆ ಎಂದು ಅವರು ನುಡಿದರು.ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ, ಎನ್ ಜಿಇಎಫ್ ಕಾರ್ಯನಿರ್ವಾಹಕ ‌ನಿರ್ದೇಶಕಿ ಅರುಣಿ ಮತ್ತಿತರರು ಉಪಸ್ಥಿತರಿದ್ದರು.

;

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News