ಧಾರವಾಡವು ಕರ್ನಾಟಕ ಏಕೀಕರಣ ಚಳುವಳಿಯ ಜನ್ಮಭೂಮಿ-ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 66 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕರ್ನಾಟಕ ಏಕೀಕರಣದ ಚಳವಳಿಯು ಧಾರವಾಡದ ನೆಲದಲ್ಲಿ ಜನ್ಮ ತಾಳಿದ್ದು ನಮಗೆಲ್ಲ ಅಭಿಮಾನದ ವಿಷಯವಾಗಿದೆ ಎಂದು ಹೇಳಿದರು.

Written by - Zee Kannada News Desk | Last Updated : Nov 2, 2021, 01:47 AM IST
  • ಕರ್ನಾಟಕ ಏಕೀಕರಣದ ಚಳವಳಿಯು ಇದೇ ನಮ್ಮ ಧಾರವಾಡದ ನೆಲದಲ್ಲಿ ಜನ್ಮ ತಾಳಿದ್ದು ನಮಗೆಲ್ಲ ಅಭಿಮಾನದ ವಿಷಯವಾಗಿದೆ.
  • ಕರ್ನಾಟಕ ಏಕೀಕರಣಕ್ಕೆ ಒತ್ತಾಯಿಸಿ ಹುಬ್ಬಳ್ಳಿ ಸಮೀಪದ ಅದರಗುಂಚಿ ಗ್ರಾಮದಲ್ಲಿ ಅಂದಿನ ನೇತಾರರಾಗಿದ್ದ ಅದರಗುಂಚಿ ಶಂಕರಗೌಡ ಪಾಟೀಲರು 23 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದರು.
 ಧಾರವಾಡವು ಕರ್ನಾಟಕ ಏಕೀಕರಣ ಚಳುವಳಿಯ ಜನ್ಮಭೂಮಿ-ಸಚಿವ ಶಂಕರ ಪಾಟೀಲ ಮುನೇನಕೊಪ್ಪ title=
Photo Courtesy: Facebook

ಧಾರವಾಡ: ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 66 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕರ್ನಾಟಕ ಏಕೀಕರಣದ ಚಳವಳಿಯು ಧಾರವಾಡದ ನೆಲದಲ್ಲಿ ಜನ್ಮ ತಾಳಿದ್ದು ನಮಗೆಲ್ಲ ಅಭಿಮಾನದ ವಿಷಯವಾಗಿದೆ ಎಂದು ಹೇಳಿದರು.

ಏಕೀಕರಣ ಇತಿಹಾಸ ಸ್ಮರಣೆ: ಭಾರತದ ಇತಿಹಾಸದಲ್ಲಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ದೊರೆತಿರುವ ಪ್ರಾಮುಖ್ಯತೆಯಂತೆಯೇ, ಕರ್ನಾಟಕ ಇತಿಹಾಸದಲ್ಲಿ ಸ್ವಾತಂತ್ರ್ಯ ಹೋರಾಟ ಮತ್ತು ಕರ್ನಾಟಕ ಏಕೀಕರಣಕ್ಕಾಗಿ ನಡೆದ ಚಳವಳಿಯೂ ಮಹತ್ವ ಪಡೆದಿದೆ. ವಿವಿಧ ಸುಮಾರು 19 ಆಡಳಿತ ಭಾಗಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳು, ಬ್ರಿಟಿಷರ ಆಡಳಿತದ ನಂತರ ಮತ್ತೆ ಒಂದಾಗಿದ್ದು, ನಮ್ಮೆಲ್ಲರ ಸೌಭಾಗ್ಯದ ಮತ್ತು ಐಕ್ಯತೆಯ ಸಂಗತಿಯಾಗಿದೆ.ಕರ್ನಾಟಕ ಏಕೀಕರಣದ ಚಳವಳಿಯು ಇದೇ ನಮ್ಮ ಧಾರವಾಡದ ನೆಲದಲ್ಲಿ ಜನ್ಮ ತಾಳಿದ್ದು ನಮಗೆಲ್ಲ ಅಭಿಮಾನದ ವಿಷಯವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ಟೀಕೆ

ಇಲ್ಲಿನ ನರೇಂದ್ರ ಗ್ರಾಮದ ರಾ.ಹ. ದೇಶಪಾಂಡೆಯವರು ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಓದುವಾಗ ಭಾಷೆಯ ಕಾರಣಗಳಿಂದ ಅನೇಕ ಬಾರಿ ನೊಂದಿದ್ದರು. 1887 ರಿಂದಲೇ ಕನ್ನಡ ಭಾಷೆಯ ದೀನ ಸ್ಥಿತಿಯನ್ನು ದೂರ ಮಾಡುವುದಕ್ಕಾಗಿ ಕನ್ನಡ ಜನರ ಸಹಾಯದಿಂದ ಒಂದು ಸಂಘ ಸ್ಥಾಪಿಸಲು ಅವರು  ಪ್ರಯತ್ನಿಸುತ್ತಿದ್ದರು. ಅವರ ಪ್ರಯತ್ನದ ಫಲವಾಗಿ ಜುಲೈ 20, 1890 ರಲ್ಲಿ ಧಾರವಾಡದಲ್ಲಿ ಸಮಾನ ಮನಸ್ಕರ ಸಹಕಾರದೊಂದಿಗೆ ಕರ್ನಾಟಕ ವಿದ್ಯಾವರ್ಧಕ ಸಂಘ ಸ್ಥಾಪಿಸಿದರು. ಕನ್ನಡಿಗರನ್ನು ಸಾಹಿತ್ಯಿಕವಾಗಿ, ಸಾಂಸ್ಕøತಿಕವಾಗಿ ಒಂದುಗೂಡಿಸಲು ಧಾರವಾಡದಲ್ಲಿ ನಡೆದ ಚಳುವಳಿ, ಹೋರಾಟಗಳು ಇಡೀ ರಾಜ್ಯಕ್ಕೆ ದಿಕ್ಸೂಚಿಯಾಗಿದ್ದವು. ಡೆಪ್ಯೂಟಿ ಚನ್ನಬಸಪ್ಪನವರು ಕನ್ನಡ ಮಾಧ್ಯಮ ಶಿಕ್ಷಣಕ್ಕೆ ತಮ್ಮ ಅಮೂಲ್ಯ ಕೊಡುಗೆ ನೀಡಿರುವುದನ್ನು ನಾವೆಲ್ಲ ಸದಾಕಾಲ ನೆನೆಯಬೇಕು.

ಕರ್ನಾಟಕ ಏಕೀಕರಣಕ್ಕೆ ಒತ್ತಾಯಿಸಿ ಹುಬ್ಬಳ್ಳಿ ಸಮೀಪದ ಅದರಗುಂಚಿ ಗ್ರಾಮದಲ್ಲಿ ಅಂದಿನ ನೇತಾರರಾಗಿದ್ದ ಅದರಗುಂಚಿ ಶಂಕರಗೌಡ ಪಾಟೀಲರು 23 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದರು.ಅದರ ಪರಿಣಾಮವಾಗಿ ಲೋಕಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲು ಸಾಧ್ಯವಾಯಿತು. ಸುದೀರ್ಘ ಹೋರಾಟದ ಫಲವಾಗಿ 1956 ರ ನವೆಂಬರ್ 1 ರಂದು ಕನ್ನಡ ಮಾತನಾಡುವ ಪ್ರದೇಶಗಳೆಲ್ಲ ಅಖಂಡವಾಗಿ ಮೈಸೂರು ರಾಜ್ಯದಲ್ಲಿ ಒಂದುಗೂಡಿದವು. ನಂತರದಲ್ಲಿ 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣಗೊಂಡಿತು.

ಕನ್ನಡದ “ಮೊಟ್ಟ ಮೊದಲ ಕವಿ ಪಂಪ” ಇದೇ ಜಿಲ್ಲೆಯ ಅಣ್ಣಿಗೇರಿಯಲ್ಲಿ ಕ್ರಿಸ್ತಶಕ 10ನೇ ಶತಮಾನದಲ್ಲಿ ಜನಿಸಿದವರು. ಕ್ರಿಸ್ತಶಕ 15ನೇ ಶತಮಾನದಲ್ಲಿದ್ದ ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದೇ ಹೆಸರಾದ ಕುಮಾರವ್ಯಾಸ ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದವರು. ಆದಿಕವಿ ಪಂಪನಿಂದ ಹಿಡಿದು, ಜ್ಞಾನಪೀಠ ಪ್ರಶಸ್ತಿ ಪುರಸ್ಕøತರಾದ ವರಕವಿ ಡಾ.ದ.ರಾ. ಬೇಂದ್ರೆ, ಡಾ.ವಿ.ಕೃ.ಗೋಕಾಕ, ಡಾ.ಗಿರೀಶ ಕಾರ್ನಾಡ ನಮ್ಮ ಧಾರವಾಡದವರು ಎಂಬುದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಅಕ್ಕಿ: ಸಿದ್ದರಾಮಯ್ಯ

ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕರ್ನಾಟಕ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟ ಮತ್ತು ತ್ಯಾಗವಿದೆ. ಈ ಹೋರಾಟದಲ್ಲಿ ತೊಡಗಿದ್ದ ರಾ.ಹ.ದೇಶಪಾಂಡೆ, ಸರ್.ಸಿದ್ಧಪ್ಪ ಕಂಬಳಿ, ಬಿ.ಬಸವಲಿಂಗಪ್ಪ, ಹಳ್ಳಿಕೇರಿ ಗುದ್ಲೆಪ್ಪನವರು, ಆಲೂರು ವೆಂಕಟರಾಯರು, ಡಿ.ಪಿ.ಕರಮಕರ್, ರಂಗನಾಥ ದಿವಾಕರ್,  ಮೊಹರೆ ಹಣಮಂತರಾಯರು, ಟಿ.ಆರ್.ನೇಸ್ವಿ, ಶ್ರೀರಂಗರು, ಹೊಸಮನಿ ಸಿದ್ಧಪ್ಪ, ವೀರನಗೌಡ ಪಾಟೀಲ, ಕೆ.ಎಫ್.ಪಾಟೀಲ ಮೊದಲಾದ ಮಹಾನ್ ವ್ಯಕ್ತಿಗಳ ನೇತೃತ್ವದಲ್ಲಿ ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ.

ಅಖಂಡ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ, ನಮ್ಮ ಯುವ ಪೀಳಿಗೆ ಪಾಲುದಾರರಾಗಬೇಕು. ತಮ್ಮ ಅಧ್ಯಯನ, ವ್ಯಾಸಂಗದ ಜೊತೆಗೆ ಕನ್ನಡ ಸಾಹಿತ್ಯ, ಸಂಸ್ಕøತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳಬೇಕು.ನಮ್ಮ ಪರಂಪರೆಯ ವಾರಸುದಾರರಾಗಿ ಕನ್ನಡತನ, ಕನ್ನಡತ್ವವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಆಶಿಸುತ್ತೇನೆ. ಕೋವಿಡ್ ವೈರಾಣುವಿನ ವಿರುದ್ಧ ಹೋರಾಟ ಮುಂದುವರೆಸಲು ಪ್ರತಿಯೊಬ್ಬ ನಾಗರಿಕರು ಈ ಸಂದರ್ಭದಲ್ಲಿ ಪಣ ತೊಡಬೇಕು.ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪದೇ ಪದೇ ಕೈ ತೊಳೆಯುವ, ಸ್ವಚ್ಛತೆ ಕಾಪಾಡುವ ರೂಢಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ರಾಜ್ಯೋತ್ಸವ ಸಂದೇಶದಲ್ಲಿ ಏಕೀಕರಣ ಹೋರಾಟ ಹಾಗೂ ನಾಡುನುಡಿಗಾಗಿ ದುಡಿದ ಮಹನೀಯರನ್ನು ಸ್ಮರಿಸಿದರು.

ಶಾಸಕ ಅಮೃತ ದೇಸಾಯಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಸಮಾರಂಭಕ್ಕೂ ಮುನ್ನ ಸಚಿವರು ಡೆಪ್ಯೂಟಿ ಚನ್ನಬಸಪ್ಪ, ಪ್ರೊ. ಕೆ.ಜಿ.ಕುಂದಣಗಾರ ಅವರ ಪ್ರತಿಮೆಗಳಿಗೆ ಹಾಗೂ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಮತ್ತು ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.

ಇದನ್ನೂ ಓದಿ-Inflation in Pakistan: ಪಾಕಿಸ್ತಾನದಲ್ಲಿ ಒಂದು ಕಪ್ ಚಹಾದ ಬೆಲೆ ಎಷ್ಟೆಂದು ಕೇಳಿದರೆ ಶಾಕ್ ಆಗ್ತೀರಾ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

.

 

 

Trending News