Dharwad: ಧಾರವಾಡದ ಮನೆಯೊಂದರಲ್ಲಿ ಕಂತೆ ಕಂತೆ ನೋಟುಗಳು ಪತ್ತೆ..!

Dharwad IT Raid: ಧಾರವಾಡದ ನಾರಾಯಣಪುರ ಮುಖ್ಯರಸ್ತೆಯಲ್ಲಿರುವ ಅರ್ನಾ ರೆಸಿಡೆನ್ಸಿಯ ೩ನೇ ಅಂತಸ್ತಿನ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಮಂಗಳವಾರ ರಾತ್ರಿ ಬ್ಯಾಗುಗಳಲ್ಲಿ ಹಣದ ಕಂತೆಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 

Written by - Puttaraj K Alur | Last Updated : Apr 16, 2024, 11:11 PM IST
  • ಲೋಕಸಭಾ ಚುನಾವಣೆ ಹಿನ್ನೆಲೆ ಆದಾಯ ತೆರಿಗೆ & ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ
  • ಧಾರವಾಡದ ನಾರಾಯಣಪುರ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ
  • ಅಧಿಕಾರಿಗಳಿಂದ ಎಣಿಕೆ ಕಾರ್ಯ, ಬರೋಬ್ಬರಿ 18 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿರುವ ಮಾಹಿತಿ
Dharwad: ಧಾರವಾಡದ ಮನೆಯೊಂದರಲ್ಲಿ ಕಂತೆ ಕಂತೆ ನೋಟುಗಳು ಪತ್ತೆ..! title=
18 ಕೋಟಿ ಹಣ ಪತ್ತೆ!

ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆ ಆದಾಯ ತೆರಿಗೆ ಮತ್ತು ಚುನಾವಣಾ ಅಧಿಕಾರಿಗಳು ಭರ್ಜರಿ ಬೇಟೆಯಾಡುತ್ತಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಚಿನ್ನ, ಬೆಳ್ಳಿ, ಬೆಲೆಬಾಳುವ ವಸ್ತುಗಳು ಸೇರಿದಂತೆ ನೂರಾರು ಕೋಟಿ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಚುನಾವಣಾ ಅಕ್ರಮ ಎಸಗುವವರ ಮೇಲೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರತಿದಿನ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ದಾಖಲೆ ಇಲ್ಲದೆ ಸಾಗಿಸುವ ಕಂತೆ ಕಂತೆ ಹಣ, ಚಿನ್ನ-ಬೆಳ್ಳಿ, ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆಯುಲಾಗುತ್ತಿದೆ. ಅದೇ ರೀತಿ ಧಾರವಾಡದಲ್ಲಿ ಐಟಿ ಅಧಿಕಾರಿಗಳು ಮತ್ತೊಂದು ಭರ್ಜರಿ ಭೇಟೆಯಾಡಿದ್ದಾರೆ.

ಹೌದು, ಧಾರವಾಡದ ನಾರಾಯಣಪುರ ಮುಖ್ಯರಸ್ತೆಯಲ್ಲಿರುವ ಅರ್ನಾ ರೆಸಿಡೆನ್ಸಿಯ 3ನೇ ಅಂತಸ್ತಿನ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಮಂಗಳವಾರ ರಾತ್ರಿ ಬ್ಯಾಗುಗಳಲ್ಲಿ ಹಣದ ಕಂತೆಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 

ಇದನ್ನೂ ಓದಿ: ಧಾರವಾಡ ಡಿಸಿ ಕಚೇರಿಗೆ ಬಂದ ವಿನೋದ್ ಅಸೂಟಿ

ಮನೆಯಲ್ಲಿ ಮದ್ಯ ಸಂಗ್ರಹಿಸಿ ಇಡಲಾಗಿದೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದಾಗ ಪರಿಶೀಲಿಸಿದಾಗ ಬ್ಯಾಗುಗಳಲ್ಲಿ ಹಣದ ಕಂತೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಆದಾಯ ತೆರಿಗೆ ಅಧಿಕಾರಿಗಳು, ವಿಚಕ್ಷಣ ದರಳದ ಅಧಿಕಾರಿಗಳು, ಅಬಕಾರಿ ಅಧಿಕಾರಿಗಳು ಮನೆಯಲ್ಲಿ ಪರಿಶೀಲನಡೆ ನಡೆಸಿದ್ದಾರೆ. 

ಮಾಹಿತಿಯ ಪ್ರಕಾರ ಈ ಮನೆಯಲ್ಲಿ ಬರೋಬ್ಬರಿ 18 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ರಾತ್ರಿ 10ರ ನಂತರವೂ ಪರಿಶೀಲನೆ ಮತ್ತು ಎಣಿಕೆ ಪ್ರಕ್ರಿಯೆ ನಡೆದಿದೆ. ಆದರೆ ಎಷ್ಟು ಹಣ ಸಿಕ್ಕಿದೆ ಅನ್ನೋದರ ಬಗ್ಗೆ ನಿಖರ ಮಾಹಿತಿ ಗೊತ್ತಾಗಿಲ್ಲ. ಎಣಿಕೆ ಪ್ರಕ್ರಿಯೆ ಮುಗಿದ ಬಳಿಕವೇ ಈ ಬಗ್ಗೆ ಮಾಹಿತಿ ದೊರೆಯಲಿದೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್’ಗೆ ಬಹಿರಂಗ ಸವಾಲ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News