Dharwad Lok Sabha Election Result 2024: ಸತತ 5ನೇ ಬಾರಿ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ ಪ್ರಹ್ಲಾದ್‌ ಜೋಶಿ!

Dharwad Lok Sabha Election 2024: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜೋಶಿಯವರನ್ನು ಸೋಲಿಸುವ ಗುರಿಯೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ​

Written by - Puttaraj K Alur | Last Updated : Jun 4, 2024, 04:11 PM IST
  • ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಹ್ಲಾದ್‌ ಜೋಶಿಗೆ ಭರ್ಜರಿ ಗೆಲುವು
  • ಕಾಂಗ್ರೆಸ್‌ನ ವಿನೋದ್‌ ಅಸೂಟಿ ವಿರುದ್ಧ ಭಾರೀ ಅಂತಗಳಿಂದ ಜೋಶಿಗೆ ಗೆಲುವು
  • ಸತತ 5ನೇ ಬಾರಿ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ ಜೋಶಿ!
Dharwad Lok Sabha Election Result 2024: ಸತತ 5ನೇ ಬಾರಿ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ ಪ್ರಹ್ಲಾದ್‌ ಜೋಶಿ!  title=
ಹ್ಲಾದ್‌ ಜೋಶಿಗೆ ಭರ್ಜರಿ ಗೆಲುವು!

Dharwad Lok Sabha Election 2024: ಪೇಡಾನಗರಿ ಖ್ಯಾತಿಯ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವು ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿಯವರು ಸತತ 5ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ವಿನೋದ್ ಅಸೂಟಿಯವರಿಗೆ ಸೋಲಾಗಿದೆ. ಪ್ರಹ್ಲಾದ್‌ ಜೋಶಿಯವರು ಬರೋಬ್ಬರಿ 7,13,649 ಮತಗಳನ್ನು ಪಡೆದುಕೊಂಡಿದ್ದು, 96,033 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿಯವರು 6,17,616 ಮತಗಳನ್ನು ಪಡೆದುಕೊಂಡಿದ್ದಾರೆ.  ಈ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆದಿದ್ದು, ಶೇ.74.37ರಷ್ಟು ಮತದಾನವಾಗಿತ್ತು.  

ಧಾರವಾಡ ಲೋಕಸಭಾ ಕ್ಷೇತ್ರದ ಇತಿಹಾಸ

ವಿದ್ಯಾಕಾಶಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಸತತವಾಗಿ ೪ ಬಾರಿ ಗೆದ್ದು ಐದನೇ ಬಾರಿಯೂ ಸರ್ಧಿಸಿದ್ದ ಬಿಜೆಪಿಯ ಅಭ್ಯರ್ಥಿ ಪ್ರಹ್ಲಾದ್‌ ಜೋಶಿಗೆ ಕಾಂಗ್ರೆಸ್‌ನ ಹೊಸಮುಖ ವಿನೋದ್‌ ಅಸೂಟಿ ಎದುರಾಳಿಯಾಗಿದ್ದರು. ಜೋಶಿಯವರಿಗೆ ದೀರ್ಘಕಾಲದ ರಾಜಕೀಯ ಅನುಭವವಿದ್ದರೆ, ಅಸೂಟಿಯವರು ಕೆಲ ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಮ್ಮ ಅದೃಷ್ಟ ಪರೀಕ್ಷಿಸಲು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.  

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜೋಶಿಯವರನ್ನು ಸೋಲಿಸುವ ಗುರಿಯೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಜೋಶಿ ಬ್ರಾಹ್ಮಣ ಸಮುದಾಯದವರಾಗಿದ್ದರೆ, ಅಸೂಟಿ ಕುರುಬ ಸಮುದಾಯಕ್ಕೆ ಸೇರಿದವರು. 1951ರಿಂದ 1991ರವರೆಗೆ ನಡೆದ ಚುನಾವಣೆಗಳಲ್ಲಿ ಸತತ ಗೆಲುವು ದಾಖಲಿಸಿದ ಕಾಂಗ್ರೆಸ್, 1996ರಿಂದ ಸತತ ಸೋಲು ಕಂಡಿದೆ.  

ಇದನ್ನೂ ಓದಿ: Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!

ಹಾವೇರಿ ಜಿಲ್ಲೆಯ ಶಿಗ್ಗಾವಿ ಸಹಿತ 8 ವಿಧಾನಸಭಾ ಕ್ಷೇತ್ರಗಳು ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ತಲಾ 4 ಕ್ಷೇತ್ರಗಳಲ್ಲಿದ್ದಾರೆ. ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಪುನಃ ಬಿಜೆಪಿಗೆ ಮರಳಿದ ಜಗದೀಶ್ ಶಟ್ಟರ್ ಧಾರವಾಡ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. ಆದರೆ, ಲಿಂಗಾಯತ ಸಮುದಾಯದ ಶೆಟ್ಟರ್‌ ಅವರನ್ನು ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. 

ಒಟ್ಟು ಮತದಾರರ ಸಂಖ್ಯೆ 18,31,975
ಪುರುಷರು 9,17,926
ಮಹಿಳೆಯರು 9,13,949

ಧಾರವಾಡ ವಿಧಾನಸಭಾ ಶಾಸಕರ ಬಲಾಬಲ

ನವಲಗುಂದ ಕಾಂಗ್ರೆಸ್
ಕುಂದಗೋಳ ಬಿಜೆಪಿ
ಧಾರವಾಡ ಕಾಂಗ್ರೆಸ್
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಬಿಜೆಪಿ
ಹುಬ್ಬಳ್ಳಿ-ಧಾರವಾಡ ಕೇಂದ್ರ ಬಿಜೆಪಿ
ಹುಬ್ಬಳ್ಳಿ-ಧಾರವಾಡ ಪೂರ್ವ ಕಾಂಗ್ರೆಸ್
ಕಲಘಟಗಿ ಕಾಂಗ್ರೆಸ್
ಶಿಗ್ಗಾವಿ (ಹಾವೇರಿ ಜಿಲ್ಲೆ) ಬಿಜೆಪಿ

2013ರಿಂದ ಕಾಂಗ್ರೆಸ್‌ನಲ್ಲಿರುವ ವಿನೋದ್‌ ಅಸೂಟಿಯವರು 2018ರಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದರು. ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಯೋಜನೆಗಳಿಂದ ಮೊದಲ ಪ್ರಯತ್ನದಲ್ಲಿಯೇ ವಿಜಯಮಾಲೆ ಹಾಕಿಕೊಳ್ಳಲು ಅವರು ಅದೃಷ್ಟ ಪರೀಕ್ಷೆ ನಡೆಸುತ್ತಿದ್ದಾರೆ. ಇನ್ನು ೪ ಅವಧಿಯ ಅಭಿವೃದ್ಧಿ ಕಾರ್ಯ, ಪ್ರಧಾನಿ ಮೋದಿಯವರ ಜೋಶ್‌ ಅನ್ನು ಜೋಶಿ ನಂಬಿಕೊಂಡಿದ್ದಾರೆ. ಹೀಗಾಗಿ ಫೇಮಸ್‌ ಧಾರವಾಡ ಪೇಡಾದ ಸಿಹಿ ಯಾರಿಗೆ ದೊರೆಯಲಿದೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.  

ಇದನ್ನೂ ಓದಿ: ವಿಧಾನ ಪರಿಷತ್ತಿನ 11 ಸ್ಥಾನಕ್ಕೆ ದೈವಾರ್ಷಿಕ ಚುನಾವಣೆ: 12 ಅಭ್ಯರ್ಥಿಗಳಿಂದ ಒಟ್ಟು 27 ನಾಮಪತ್ರ ಸಲ್ಲಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News