ನನ್ನ ಮಗ ಸಾವನ್ನಪ್ಪಿದಾಗ ಮೋದಿ, ಸುಷ್ಮಾ ಸ್ವರಾಜ್‌ ಬಳಿ ಸಹಾಯ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ

ನನ್ನ ಮಗ ರಾಕೇಶ್‌ ವಿದೇಶದಲ್ಲಿ ಮೃತಪಟ್ಟಿದ್ದ. ಆತನ ಮೃತದೇಹವನ್ನು ಇಲ್ಲಿಗೆ ತರಿಸಿಕೊಂಡು ಅಂತ್ಯಕ್ರಿಯೆ ಮಾಡಿದ್ದೇವೆ ಅಷ್ಟೇ. ಆ ಸಂದರ್ಭದಲ್ಲಿ ಸಹಾಯಕ್ಕಾಗಿ ಪ್ರಧಾನಿ ಮೋದಿ ಸೇರಿದಂತೆ ನಾನು ಯಾರನ್ನೂ ಸಂಪರ್ಕಿಸಿಯೇ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.   

Written by - Puttaraj K Alur | Last Updated : Apr 30, 2024, 10:45 PM IST
  • ನನ್ನ ಮಗ ಮೃತಪಟಾಗ ಮೋದಿ ಮತ್ತು ಸುಷ್ಮಾ ಸ್ವರಾಜ್‌ ಬಳಿ ಸಹಾಯ ಕೇಳಿಲ್ಲ
  • ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ
  • ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ SIT ವರದಿಯೇ ಅಂತಿಮ, ವರದಿ ಬಂದ ಮೇಲೆ ಕ್ರಮ
ನನ್ನ ಮಗ ಸಾವನ್ನಪ್ಪಿದಾಗ ಮೋದಿ, ಸುಷ್ಮಾ ಸ್ವರಾಜ್‌ ಬಳಿ ಸಹಾಯ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ title=
ಎಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು!

Prajwal Revanna case: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಚರ್ಚೆಯಾಗುತ್ತಿದ್ದು, ರಾಷ್ಟ್ರ ರಾಜಕಾರಣದಲ್ಲಿ ಸಖತ್‌ ಸೌಂಡ್‌ ಮಾಡುತ್ತಿದೆ. ಈ ಪ್ರಕರಣ ರಾಜಕೀಯ ಪಕ್ಷಗಳ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಕೇಶ್‌ ಸಿದ್ದರಾಮಯ್ಯ ವಿದೇಶದಲ್ಲಿ ಮೃತಪಟ್ಟಾಗ ಪ್ರಧಾನಿ ಮೋದಿ ಮತ್ತು ಸುಷ್ಮಾ ಸ್ವರಾಜ್‌ ಮಾಡಿದ ಸಹಾಯವನ್ನು ಸಿಎಂ ಸಿದ್ದರಾಮಯ್ಯ ಮರೆಯಬಾರದು ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಅವರ ಈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರ ಜೊತೆಗೆ ಬೆಳಗಾವಿಯ ಜಿಲ್ಲೆಯ ಗೋಕಾಕ್‌ನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ʼನನ್ನ ಮಗ ರಾಕೇಶ್‌ ಮೃತಪಟಾಗ ಪ್ರಧಾನಿ ಮೋದಿ ಮತ್ತು ಸುಷ್ಮಾ ಸ್ವರಾಜ್‌ ಅವರ ಬಳಿ ನಾನು ಸಹಾಯ ಪಡೆದಿದ್ದೇನೆ ಅನ್ನೋದು ಶುದ್ಧ ಸುಳ್ಳು, ನಾನು ಅವರನ್ನು ಸಂಪರ್ಕಿಸಿಯೇ ಇಲ್ಲʼವೆಂದು ಹೇಳಿದ್ದಾರೆ. 

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್ ಡ್ರೈಬ್ ರಿಲೀಸ್ ಗುದ್ದಾಟ!

ನನ್ನ ಮಗ ರಾಕೇಶ್‌ ವಿದೇಶದಲ್ಲಿ ಮೃತಪಟ್ಟಿದ್ದ. ಆತನ ಮೃತದೇಹವನ್ನು ಇಲ್ಲಿಗೆ ತರಿಸಿಕೊಂಡು ಅಂತ್ಯಕ್ರಿಯೆ ಮಾಡಿದ್ದೇವೆ ಅಷ್ಟೇ. ಆ ಸಂದರ್ಭದಲ್ಲಿ ಸಹಾಯಕ್ಕಾಗಿ ಪ್ರಧಾನಿ ಮೋದಿ ಸೇರಿದಂತೆ ನಾನು ಯಾರನ್ನೂ ಸಂಪರ್ಕಿಸಿಯೇ ಇಲ್ಲ. ಇವರೆಲ್ಲಾ ಸುಳ್ಳು ಹೇಳುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು SIT ವರದಿಯೇ ಅಂತಿಮ. ವರದಿ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ʼಸಿಎಂ ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ದುರ್ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿಯವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆʼ ಅಂತಾ ಹೇಳಿದ್ದರು.

ಇದನ್ನೂ ಓದಿ: "ಮತಗಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ಸುಳ್ಳು ಹೇಳುತ್ತಾರೆ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

Trending News