ಯಡಿಯೂರಪ್ಪ ಜೊತೆ ಭಿನ್ನಾಭಿಪ್ರಾಯ ಸುಳ್ಳು-ನಿರೀಕ್ಷಿಸಿದವರಿಗೆ ನಿರಾಸೆ: ಸಿಎಂ ಬೊಮ್ಮಾಯಿ ತಿರುಗೇಟು

ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ “ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ” ಎಂದರು. 

Written by - Prashobh Devanahalli | Edited by - Bhavishya Shetty | Last Updated : Dec 15, 2022, 01:05 PM IST
    • ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು
    • ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ
    • ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ
ಯಡಿಯೂರಪ್ಪ ಜೊತೆ ಭಿನ್ನಾಭಿಪ್ರಾಯ ಸುಳ್ಳು-ನಿರೀಕ್ಷಿಸಿದವರಿಗೆ ನಿರಾಸೆ: ಸಿಎಂ ಬೊಮ್ಮಾಯಿ ತಿರುಗೇಟು title=
BS Yeddyurappa

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ “ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ” ಎಂದರು. 

ಇದನ್ನೂ ಓದಿ: ಪ್ರೀತಿಸಿದ ಹುಡ್ಗೀಯ ಬೈಕನ್ನೇ ಸುಟ್ಟು ಹಾಕಿದ ಪಾಗಲ್ ಪ್ರೇಮಿ

ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ  ಏನಿಲ್ಲ. ಬಟಾಬಯಲು ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು  ಪ್ರತಿಕ್ರಿಯೆ ನೀಡಿದರು. ಅವರು ಇಂದು ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ:

“ಕೊಪ್ಪಳಕ್ಕೆ ತೆರಳುವ ಮುನ್ನ ಮಾಜಿ ಸಿಎಂ ಯಡಿಯೂರಪ್ಪ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಕೊಪ್ಪಳಕ್ಕೆ ಬರ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗ್ತಿದ್ದೇನೆ. ಬೇರೆ ಕಾರಣಕ್ಕೆ ನಾನು ಇವತ್ತು ಕಾರ್ಯಕ್ರಮಕ್ಕೆ ಹೋಗದೇ ಇರೋ ಸ್ಥಿತಿ ಇತ್ತು‌. ಹೋಗಲೇ ಬೇಕು ಅನ್ನೋ ಸ್ಥಿತಿ ಬಂತು. ಹೀಗಾಗಿ ಹೋಗ್ತಿದ್ದೇನೆ. ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳು ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡೋಕೆ ಹೋಗಬೇಡಿ” ಎಂದರು.

“ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ. ನಮ್ಮದು ಒಂದೇ ಅಜೆಂಡಾ. ಮುಂದೆ ಚುನಾವಣೆ ಇದೆ. ಪಕ್ಷವನ್ನ ಅಧಿಕಾರಕ್ಕೆ ತರೋದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕ್ತೀನಿ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ. ಮೋದಿ, ಅಮಿತ್ ಶಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ” ಎಂದರು.

ಇದನ್ನೂ ಓದಿ: ಕಾಮುಕ ಶಿಕ್ಷಕನಿಗೆ ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಧರ್ಮದೇಟು

“ಇವೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ನನ್ನನ್ನ‌ ಪಕ್ಷ ನೆಗಲೆಟ್ ಮಾಡ್ತಿಲ್ಲ. ಇದ್ರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ‌ಕಾರ್ಯಕ್ರಮಗಳಿಗೆ ನಾನು ಹೋಗ್ತಾ ಇದ್ದೀನಿ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲ ‌ಅಂತ ಹೋಗಿಲ್ಲ ಅಷ್ಟೆ. ಆದರೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನನ್ನನ್ನ ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡ್ತೀನಿ. ಈ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗೋ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ನಡ್ಡಾ ಬರ್ತಿದ್ದಾರೆ ಅದಕ್ಕೆ ಹೋಗ್ತಿದ್ದೇನೆ. ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತರ ನಡೆಯುತ್ತಿದೆ ಎಂಬ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ” ಎಂದು ತಿರುಗೇಟು ನೀಡಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News