ರಾಜ್ಯದ ಅನರ್ಹ ಶಾಸಕರಿಗಿಲ್ಲ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ...!

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಇಂದು ಪತ್ರಿಕಾಗೋಷ್ಠಿ ನಡೆಸಿ ಅಕ್ಟೋಬರ್ 21 ರಂದು ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ಘೋಷಿಸಿದರು.

Last Updated : Sep 21, 2019, 04:38 PM IST

Trending Photos

ರಾಜ್ಯದ ಅನರ್ಹ ಶಾಸಕರಿಗಿಲ್ಲ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ...! title=
file photo

ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಇಂದು ಪತ್ರಿಕಾಗೋಷ್ಠಿ ನಡೆಸಿ ಅಕ್ಟೋಬರ್ 21 ರಂದು ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ಘೋಷಿಸಿದರು.

ಇದೇ ಬೆನ್ನಲ್ಲೇ ಕರ್ನಾಟಕದ 15 ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಅವರು ಘೋಷಿಸಿದ್ದಾರೆ. ಈಗ ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಅನರ್ಹರಾಗಿದ್ದ ಶಾಸಕರಿಂದಾಗಿ ತೆರವಾಗಿದ್ದ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದೇ ಚುನಾವಣೆ ನಡೆಯಲಿದ್ದು  24 ರಂದು ಫಲಿತಾಂಶ ಹೊರಬಿಳಿದೆ. 

ಕೇಂದ್ರ ಚುನಾವಣಾ ಆಯುಕ್ತರು ಚುನಾವಣಾ ದಿನಾಂಕವನ್ನು ಘೋಷಿಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿರುವ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ ಕುಮಾರ್  'ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸ್ಪೀಕರ್ ತಡೆಯೊಡ್ಡಿದ್ದರಿಂದಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಬರುವುದಿಲ್ಲ. ಅಲ್ಲದೆ ಅವರ ಮರು ಪರಿಶೀಲನಾ ಅರ್ಜಿಯನ್ನು ಸಹಿತ ಸುಪ್ರೀಕೋರ್ಟ್ ಸ್ವೀಕರಿಸಿಲ್ಲ, ಆದ್ದರಿಂದಾಗಿ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಈಗ ರಾಜ್ಯ ಚುನಾವಣಾ ಆಯುಕ್ತರ ಹೇಳಿಕೆಯಿಂದಾಗಿ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಡೋಲಾಯಮಾನದಲ್ಲಿದೆ. 

Trending News