ಬೆಂಗಳೂರು: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಭಾರತದ ಸಂವಿಧಾನದ 17ನೇ ವಿಧಿಯು ʼಅಸ್ಪೃಶ್ಯತೆʼ ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ / ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ / ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.
ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಎಲ್ಲಾ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ತಾವು ವಾಸಿಸುವ ಸ್ಥಳವನ್ನು / ಪರಿಸರವನ್ನು ದಿನನಿತ್ಯ ಸ್ವಚ್ಛಗೊಳಿಸುವ ಮೂಲಕ ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಬಹು ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ