ಕಾಂಗ್ರೆಸ್ ಶಾಸಕರು & ಕಾರ್ಯಕರ್ತರ ಭೇಟಿಗೆ ಟೈಮ್ ಫಿಕ್ಸ್ ಮಾಡಿದ ಡಿಕೆಶಿ!

ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂಕೋರ್ಟ್ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.

Written by - Zee Kannada News Desk | Last Updated : Nov 9, 2023, 05:58 PM IST
  • ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರ ಭೇಟಿಗೆ ಟೈಮ್ ಫಿಕ್ಸ್ ಮಾಡಿದ ಡಿ.ಕೆ.ಶಿವಕುಮಾರ್
  • ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ಸಮಸ್ಯೆ ಹೇಳಿಕೊಳ್ಳಲು ಅವಕಾಶ ನೀಡಲಾಗುವುದು
  • ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಡಿಕೆಶಿ ಸಮಯ
ಕಾಂಗ್ರೆಸ್ ಶಾಸಕರು & ಕಾರ್ಯಕರ್ತರ ಭೇಟಿಗೆ ಟೈಮ್ ಫಿಕ್ಸ್ ಮಾಡಿದ ಡಿಕೆಶಿ!   title=
ಕೆಲಸ & ಸಮಸ್ಯೆಗಳಿಗೆ ಡಿಕೆಶಿ ಟೈಮ್!

ಬೆಂಗಳೂರು: ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಈ ರೀತಿ ಉತ್ತರಿಸಿದರು. ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂಕೋರ್ಟ್ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ’ ಎಂದು ತಿಳಿಸಿದರು.

ಇದನ್ನೂ ಓದಿ:  ರಾಜ್ಯ ಕಾಂಗ್ರೆಸ್‌ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿದೆ : ಹೆಚ್‌ಡಿಕೆ ಕಿಡಿ

‘ಪಕ್ಷದಲ್ಲಿ ಯಾರು 3ಕ್ಕಿಂತ ಹೆಚ್ಚು ವರ್ಷಗಳಿಂದ ಪದಾಧಿಕಾರಿಗಳಾಗಿದ್ದಾರೆ ಅವರ ಸ್ಥಾನಕ್ಕೆ ಬೇರೆಯವರಿಗೆ ಅವಕಾಶ ನೀಡಬೇಕು ಎಂಬ ಚರ್ಚೆಯಾಗಿದೆ. ಇನ್ನು ಲೋಕಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಶೇ.75ರಷ್ಟು ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಹೋಗಿ ಸಭೆ ಮಾಡಿದ್ದಾರೆ. ಉಳಿದವರು ಸಭೆ ಮಾಡಿ ಆದಷ್ಟು ಬೇಗ ತಮ್ಮ ವರದಿ ನೀಡಲಿದ್ದಾರೆ ಎಂದು ಡಿಕೆಶಿ ಹೇಳಿದರು.

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳ ಪರಿಶೀಲನೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ… ಅವರು ಅಲ್ಲಿಗೆ ಹೋಗಲಿ. ಅವರಿಗೆ ಬೇಕಾದರೆ ಬಸವರಾಜ ಬೊಮ್ಮಾಯಿ ಹಾಗೂ ಲೋಕಾಯುಕ್ತ ವರದಿಗಳನ್ನು ಕಳುಹಿಸಿಕೊಡುತ್ತೇನೆ’ ಎಂದು ತಿಳಿಸಿದರು.

ಇದನ್ನೂ ಓದಿ:   ‘ಸ್ವಚ್ಚ ದೀಪಾವಳಿ-ಶುಭ ದೀಪಾವಳಿ’ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಕರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News