ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ: ಡಿಸಿಎಂ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರದಲ್ಲಿ ಬಿಜೆಪಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Krishna N K | Last Updated : Jan 3, 2024, 01:36 PM IST
  • ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ
  • ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ
  • ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಾಗ್ದಾಳಿ
ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ: ಡಿಸಿಎಂ title=

ಬೆಂಗಳೂರು : ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

ಇದನ್ನೂ ಓದಿ:ಇಂದು ಆಲ್ ಇಂಡಿಯಾ ಟ್ರಕ್ ಅಸೋಸಿಯೇಷನ್ ಪ್ರತಿಭಟನೆ

ಬಿಜೆಪಿ ಅವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ."

ಇದನ್ನೂ ಓದಿ:ಸುಳ್ಳು ಸುದ್ದಿಗೆ ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿದ ಜನ

ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿರುವ ಬಗ್ಗೆ ಕೇಳಿದಾಗ, ಅವರು ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ ಎಂದು ತಿರುಗೇಟು ನೀಡಿದರು.

ನಿಮ್ಮ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ನೀಡಿದ್ದು, ತನಿಖೆ ಆರಂಭವಾಗಿರುವ ಬಗ್ಗೆ ಕೇಳಿದಾಗ, ನನಗೆ ಯಾವುದೇ ರೀತಿಯ ನೊಟೀಸ್ ಬಂದಿಲ್ಲ. ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News