ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಿಲ್ಲ: ಡಿಸಿಎಂ  

35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಕಳೆದ 2-3 ತಿಂಗಳಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರು. ಆದರೆ ನಿನ್ನೆ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Jan 26, 2024, 03:17 PM IST
  • ಸೋತರೂ ಜಗದೀಶ್‌ ಶೆಟ್ಟರ್‌ ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು.
  • ಕಳೆದ 2-3 ತಿಂಗಳಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು.
  • ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರು. ಆದರೆ ನಿನ್ನೆ ಏಕಾಏಕಿ ಪಕ್ಷ ತೊರೆದಿದ್ದಾರೆ.
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಿಲ್ಲ: ಡಿಸಿಎಂ   title=

ಬೆಂಗಳೂರು : ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿಂದು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷ ವಿಧಾನಸಭೆ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಕಳೆದ 2-3 ತಿಂಗಳಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರು. ಆದರೆ ನಿನ್ನೆ ಏಕಾಏಕಿ ಪಕ್ಷ ತೊರೆದಿದ್ದಾರೆ. 

ಇದನ್ನೂ ಓದಿ:ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

ನಮ್ಮ ಪಕ್ಷ 136 ಸೀಟು ಗೆದ್ದಿದೆ. ನಮ್ಮ ತಪ್ಪಿನಿಂದ 6-7 ಸೀಟು ಸೋತಿದ್ದೇವೆ. ಈಗಲೂ ಬಹಳ ಮಂದಿ ನಮ್ಮ ಪಕ್ಷ ಸೇರಲು ಎದುರು ನೋಡುತ್ತಿದ್ದಾರೆ. ನಾವು ಸಿದ್ಧಾಂತ, ನೀತಿ ಮೇಲೆ ರಾಜಕಾರಣ ಮಾಡುವವರು. ಬೆಳಗಾವಿ ಹಾಗೂ ಇತರೆ ಭಾಗದ ನಾಯಕರು, ಕಾರ್ಯಕರ್ತರು ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಹೋಗಿದ್ದು ಒಳ್ಳೆಯದಾಯಿತು ಎಂದು ಹೇಳಿದ್ದಾರೆ. 

ದೂರದೃಷ್ಟಿ ಇಟ್ಟುಕೊಂಡು ಅವರಿಗೆ ನಾವು ಅವಕಾಶ ಮಾಡಿಕೊಟ್ಟಿದ್ದೆವು. ಅವರು ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು. ಅದರ ಬಗ್ಗೆ ನಾವು ಮಾತನಾಡುವ ಅಗತ್ಯವಿಲ್ಲ. ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಿಗೆ ನೀಡುತ್ತೇವೆ ಎಂದು ಡಿಸಿಎಂ ಹೇಳಿದರು.

ಇದನ್ನೂ ಓದಿ:ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಜಗದೀಶ್ ಶೆಟ್ಟರ್

ಮುಂದೆ ತತ್ವ ಸಿದ್ಧಾಂತ ನಂಬಿ ಬರುವವರನ್ನು ಮಾತ್ರ ಸೇರಿಸಿಕೊಳ್ಳುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ನಾವು ಬಿಜೆಪಿಯವರನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರಿಗೆ ಬೇಷರತ್ ಬೆಂಬಲ ನೀಡಿ ಮುಖ್ಯಮಂತ್ರಿ ಮಾಡಿದ್ದೆವು. ಆ ಸರ್ಕಾರವನ್ನು ಅವರು ಉಳಿಸಿಕೊಳ್ಳಲಿಲ್ಲ. ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಿದವರ ಜತೆಗೆ ಅವರು ಇಂದು ನೆಂಟಸ್ತನ ಬೆಳೆಸಿದ್ದಾರೆ. ಜೆಡಿಎಸ್ ಹಾಗೂ ಕುಮಾರಸ್ವಾಮಿ ಈಗ ಬಿಜೆಪಿಯ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಬಿದ್ದಾಗ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಆಡಿದ ಮಾತುಗಳಿಗೆ ಈಗ ಅವರೇ ಉತ್ತರ ನೀಡಬೇಕು. ರಾಜಕಾರಣ ಹೀಗಿರುವಾಗ ಬಗ್ಗೆ ನಮಗೆ ನಾಚಿಕೆಯಾಗುತ್ತದೆ. ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೂ ನಾವು ನೀತಿ, ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕು ಎಂದು ತಿಳಿಸಿದರು.

ಲಕ್ಷ್ಮಣ ಸವದಿ ಪಕ್ಷ ಬಿಡುವುದಿಲ್ಲ: ಲಕ್ಷ್ಮಣ್ ಸವದಿ ಅವರನ್ನು ಭೇಟಿ ಮಾಡಿದ್ದ ಬಗ್ಗೆ ಪ್ರತಿಕ್ರಿಯಿಸಿ, ನಾನು ಶೆಟ್ಟರ್ ಅವರ ಜತೆಗೆ ಬಂದವನಲ್ಲ. ನಾನು ನನ್ನ ವೈಯಕ್ತಿಕ ನಿರ್ಧಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಸವದಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ ಅವರೇ ಮಾಧ್ಯಮಗಳಿಗೆ ಉತ್ತರ ನೀಡಿದ್ದಾರೆ. ಅವರು ಈಗ ನಮ್ಮ ಪಕ್ಷದ ನಾಯಕರು ಹಾಗೂ ಪ್ರಮುಖ ಆಸ್ತಿ ಎಂದು ತಿಳಿಸಿದರು.

ಇದನ್ನೂ ಓದಿ:ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ

ಬಿಜೆಪಿಯವರು ಸವದಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ಯಾರನ್ನೂ ಬಿಡುತ್ತಿಲ್ಲ. ಎಲ್ಲರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಮಗೂ ಆ ಕೆಲಸ ಗೊತ್ತಿದೆ. ನಾವು ಮನಸ್ಸು ಮಾಡಿದ್ದರೆ ಎಷ್ಟೋ ಮನೆಗಳು ಖಾಲಿಯಾಗಿರುತ್ತಿದ್ದವು ಎಂದು ತಿಳಿಸಿದರು.

ನಮ್ಮ ಸಿದ್ಧಾಂತದಲ್ಲಿದ್ದವರನ್ನು ಮತ್ತೆ ಕರೆತರುವ ಪ್ರಯತ್ನದಲ್ಲಿದ್ದೇವೆ ಎಂಬ ಸುನೀಲ್ ಕುಮಾರ್ ಅವರ ಹೇಳಿಕೆ ಕುರಿತು ಮಾತನಾಡಿ, ನಮ್ಮ ಪಕ್ಷದಿಂದ ಕರೆದುಕೊಂಡು ಹೋದರಲ್ಲ, ಅವರಿಗೆ ಯಾವ ಸಿದ್ಧಾಂತವಿತ್ತು? ಈಗ ಅವರಿಗೆ ಯಾವ ಸಿದ್ಧಾಂತದ ಪಾಠ ಮಾಡುತ್ತಿದ್ದಾರೆ? ಆಗ ಅವರೆಲ್ಲರೂ ಆ ಸಿದ್ಧಾಂತ ಒಪ್ಪಿದ್ದಾರಾ? ಈ ಬಗ್ಗೆ ಅವರ ಕ್ಷೇತ್ರದ ಕಾರ್ಯಕರ್ತರನ್ನು ಕೇಳಿ ನೋಡಿ, ಹೇಳುತ್ತಾರೆ ಎಂದು ತಿಳಿಸಿದರು.

ಮುಂದೆ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ತತ್ವ ಸಿದ್ಧಾಂತಕ್ಕೆ ಬದ್ಧರಾಗಿರುವವರನ್ನು ಸೇರಿಸಿಕೊಳ್ಳಿ ಎಂಬ ಖರ್ಗೆ ಅವರ ಸಲಹೆ ಬಗ್ಗೆ ಕೇಳಿದಾಗ, ಖಂಡಿತವಾಗಿ ದೊಡ್ಡವರು ಹೇಳಿದ ಸಲಹೆಗಳನ್ನು ಸ್ವೀಕರಿಸುತ್ತೇವೆ. ಕೆಲವು ವಿಚಾರದಲ್ಲಿ ಹಿರಿಯರ ಸಲಹೆ ಬಹಳ ಮುಖ್ಯ” ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News