ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್

ಸಿಎಂ ಕುರ್ಚಿ ಖಾಲಿಯಿಲ್ಲ. ಒಂದು ವೇಳೆ ಆ ಕುರ್ಚಿ ಖಾಲಿ ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. 

Written by - Ranjitha R K | Last Updated : Sep 2, 2024, 03:33 PM IST
  • ದೇಶಪಾಂಡೆ ಬಗ್ಗೆ ಡಿಕೆ ಶಿವಕುಮಾರ್ ಮಾತು
  • "ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ"
  • "ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ"
 ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ title=

ಬೆಂಗಳೂರು : “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು.ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎನ್ನುವ ಆರ್.ವಿ.ದೇಶಪಾಂಡೆಯವರ ಹೇಳಿಕೆ ಬಗ್ಗೆ  ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. “ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ.ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ” ಎಂದರು.

ಇದನ್ನೂ ಓದಿ : ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣ, ಸೆ.06 ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ನ್ಯಾಯಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ “ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ” ಎಂದರು.

ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಬಗ್ಗೆ ಕೇಳದಾಗ “ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ.ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ದಾಗಿತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ” ಎಂದರು.

“ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ.ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ : ಬಿಬಿಎಂಪಿ ವಲಯದಲ್ಲಿ ʼನಂಬಿಕೆ ನಕ್ಷೆʼ ಯೋಜನೆಗೆ ಚಾಲನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಇನ್ನು ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ  ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News