ಬೆಂಗಳೂರು: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಂಖದಿಂದಲೇ ತೀರ್ಥ ಬರಬೇಕೇ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ರಾಷ್ಟ್ರಧ್ವಜಕ್ಕೆ ಅಗೌರವ(National Flag) ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
‘ಕೇಸರಿ ಧ್ವಜ ಹೇಳಿಕೆ ವಿಚಾರವಾಗಿ ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳ ವಿರುದ್ಧವಾಗಿ ಈಶ್ವರಪ್ಪ ಅವರನ್ನು ಸಮರ್ಥಿಸಿಕೊಳ್ಳುವ ಆತುರದಲ್ಲಿದ್ದರೆ, ಬಿಜೆಪಿ(BJP) ರಾಷ್ಟ್ರೀಯ ಅಧ್ಯಕ್ಷರೇ ಈಶ್ವರಪ್ಪ ಅವರ ಹೇಳಿಕೆಗೆ ಛೀಮಾರಿ ಹಾಕಿದ್ದಾರೆ. ಡಬ್ಬಲ್ ಇಂಜಿನ್ ಸರ್ಕಾರಗಳ ಮಧ್ಯೆ ಪರಸ್ಪರ ಸಮನ್ವಯ ಇಲ್ಲದಿರುವುದು ಇದರಿಂದ ಗೊತ್ತಾಗುತ್ತಿದೆ’ ಅಂತಾ ಡಿಕೆಶಿ(DK Shivakumar) ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ಗಲಭೆ ಸರ್ಕಾರಿ ಪ್ರಾಯೋಜಿತ, ನ್ಯಾಯಾಂಗ ತನಿಖೆಗೆ ಆಗ್ರಹ: ವಿಪಕ್ಷ ನಾಯಕ ಸಿದ್ದರಾಮಯ್ಯ
ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎನ್ನುವಂತೆ ಈಶ್ವರಪ್ಪ ಅವರ ಹೇಳಿಕೆ ದೇಶದ್ರೋಹ ಎಂದು ಮೇಲ್ನೋಟಕ್ಕೇ ಕಾಣುವಾಗ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಿಂದು ಮುಂದು ನೋಡುತ್ತಿರುವುದೇಕೆ? ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಂಖದಿಂದಲೇ ತೀರ್ಥ ಬರಬೇಕೇ?
2/2
— DK Shivakumar (@DKShivakumar) February 22, 2022
‘ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎನ್ನುವಂತೆ ಈಶ್ವರಪ್ಪ(KS Eshwarappa) ಅವರ ಹೇಳಿಕೆ ದೇಶದ್ರೋಹ ಎಂದು ಮೇಲ್ನೋಟಕ್ಕೇ ಕಾಣುವಾಗ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಿಂದು ಮುಂದು ನೋಡುತ್ತಿರುವುದೇಕೆ? ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಂಖದಿಂದಲೇ ತೀರ್ಥ ಬರಬೇಕೇ?’ ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಬಂಧನಕ್ಕೆ ಡಿಕೆಶಿ ಆಗ್ರಹ
ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆಗೂ(Youth Murder Case) ಹಿಜಾಬ್ ವಿವಾದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಆರೋಪಿಗಳು ಹಾಗೂ ಮೃತನ ಮಧ್ಯೆ ವೈಯಕ್ತಿಕ ಕಾರಣಗಳಿವೆ ಎಂದು ವರದಿಯಾಗಿದೆ. ಹೀಗಾಗಿ ಈ ಪ್ರಕರಣಕ್ಕೆ ಬಣ್ಣ ಹಚ್ಚುವ ಅಗತ್ಯವಿಲ್ಲವೆಂದು ಡಿಕೆಶಿ ಹೇಳಿದ್ದಾರೆ.
ಇದನ್ನೂ ಓದಿ: ಕೋವಿಡ್ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಕರ್ನಾಟಕದ ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಏರಿಕೆ..!
ಮೊದಲು ಪ್ರಚೋದನಕಾರಿಯಾಗಿ ಹೇಳಿಕೆ ನೀಡುತ್ತಿರುವ ಸಚಿವ ಈಶ್ವರಪ್ಪ(KS Eshwarappa) ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಅವರನ್ನು ವಜಾ ಮಾಡಿದರೆ ಪರಿಸ್ಥಿತಿ ಸಹಜಸ್ಥಿತಿಗೆ ಬರುತ್ತದೆ ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.