ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ : ಡಿಸಿಎಂ ಡಿ.ಕೆ.ಶಿವಕುಮಾರ್

ಮುಂಬರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ವತಃ ತಾವೇ ಸ್ಪರ್ಧಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ.. ಅಲ್ಲದೆ, ಪಂಚ ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟ ಪಡಿಸಿದರು.

Written by - Prashobh Devanahalli | Edited by - Krishna N K | Last Updated : Aug 15, 2024, 07:38 PM IST
    • ಮುಂಬರುವ ಚನ್ನಪಟ್ಟಣ ಉಪಚುನಾವಣೆ
    • ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪರ್ಧೆ
    • ಸ್ವತಃ ತಾವೇ ಸ್ಪರ್ಧೆಗಿಳಿಯುವುದಾಗಿ ಡಿಸಿಎಂ ಹೇಳಿಕೆ
ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ : ಡಿಸಿಎಂ ಡಿ.ಕೆ.ಶಿವಕುಮಾರ್ title=

ನೆಲಮಂಗಲ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ನೆಲಮಂಗಲದ ವೀರಭದ್ರೇಶ್ವರ ದೇವಾಲಯದ ಬಳಿ ಡಿಸಿಎಂ ಅವರು ಗುರುವಾರ ಹೀಗೆ ಹೇಳಿದರು.

ಈ ಹಿಂದೆ ಚನ್ನಪಟ್ಟಣದಲ್ಲಿ ಸ್ಥಳೀಯ ಶಾಸಕರು ಧ್ವಜಾರೋಹಣ ನೆರವೇರಿಸಿಲ್ಲ ಎನ್ನುವ ಬಗ್ಗೆ ಕೇಳಿದಾಗ "ನಾನು ಕಳೆದ ಐದು ವರ್ಷಗಳಿಂದ ರಾಮನಗರದಲ್ಲಿ ಧ್ವಜಾರೋಹಣ ಮಾಡಿದ್ದೇನೆ. ಚನ್ನಪಟ್ಟಣದ ಬಗ್ಗೆ ಅಧಿಕಾರಿಗಳ ಬಳಿ ಕೇಳಿದಾಗ ಆರು ವರ್ಷಗಳಿಂದ ಯಾರು ಬಂದು ಧ್ವಜಾರೋಹಣ ನಡೆಸಿಲ್ಲ ಎಂದರು. ಅವರಿಗೆ ದೇಶದ ಮೇಲೆ ವಿಶ್ವಾಸವಿಲ್ಲ ಎಂದೆನಿಸುತ್ತದೆ. ಅವರು ಏನಾದರು ಮಾಡಿಕೊಳ್ಳಲಿ, ನಾನು ನನ್ನ ಕರ್ತವ್ಯ ಮಾಡಿದ್ದೇನೆ" ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ:ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ : ಪಂಚೆ, ಶಲ್ಯ,ದೋತಿ, ಸೀರೆಯಲ್ಲಿಯೇ ಬರಬೇಕು ದೇವಾಲಯಕ್ಕೆ

ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಬಗ್ಗೆ ಒಂದಷ್ಟು ಸಚಿವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಳಿದಾಗ "ನಿಲ್ಲಿಸುವ ಬಗ್ಗೆ ಯಾವ ಸಚಿವರು ಮಾತನಾಡುತ್ತಿಲ್ಲ. ಆದರೆ ಅನುಕೂಲ ಇರುವವರು ಬೇಡ ಎಂದು ಹೇಳುತ್ತಿದ್ದಾರೆ. ಅವರಿಗೂ ಸೌಲಭ್ಯ ನೀಡಲಾಗುತ್ತಿದೆ ಎನ್ನುವ ಬಗ್ಗೆ ಅಭಿಪ್ರಾಯ ಬರುತ್ತಿದೆ. ಇದರಬಗ್ಗೆ ಆನಂತರ ಯೋಚನೆ ಮಾಡುತ್ತೇವೆ. ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ" ಎಂದು ಸ್ಪಷ್ಟ ಪಡಿಸಿದರು.

ಪ್ರಯತ್ನಕ್ಕಿಂತ ಪ್ರಾರ್ಥನೆಗೆ ಕಾರ್ಯಗಳು ಬೇಗ ಸಿದ್ದಿಸುತ್ತವೆ. ಈ ವರ್ಷ ದೇಶ, ರಾಜ್ಯಕ್ಕೆ ಉತ್ತಮ, ಮಳೆ ಬೆಳೆಯಾಗಲಿ, ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ" ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News