ಕ್ಷೇತ್ರದ ಜನರಿಂದ ಉತ್ತಮ ಸ್ಪಂದನೆ, ನಾಳೆ ನಾಮಪತ್ರ ಸಲ್ಲಿಕೆ : ಡಿ.ಕೆ. ಸುರೇಶ್

Lok Sabha election 2024 : ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದರು.

Written by - Krishna N K | Last Updated : Mar 27, 2024, 05:46 PM IST
    • ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ.
    • ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ.
    • ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ.
ಕ್ಷೇತ್ರದ ಜನರಿಂದ ಉತ್ತಮ ಸ್ಪಂದನೆ, ನಾಳೆ ನಾಮಪತ್ರ ಸಲ್ಲಿಕೆ : ಡಿ.ಕೆ. ಸುರೇಶ್ title=
DK Suresh

ರಾಮನಗರ : ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ ಎಂದರು.

ಇದನ್ನೂ ಓದಿ:ಸೋನಿಯಾ, ರಾಹುಲ್ ಬೇಲ್ ಮೇಲೆ ಹೊರಗಿದ್ದಾರೆ ನೆನಪಿಡಿ: ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

ನಾಳೆ 11 ಗಂಟೆಗೆ ನಾಮಪತ್ರ ಸಲ್ಲಿಕೆ : ನಾಮಪತ್ರ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಗೃಹ ಸಚಿವರಾದ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ನಿಶಾ ಯೋಗೇಶ್ವರ್ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ : ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:T20 ವಿಶ್ವಕಪ್’ಗೂ ಮುನ್ನ ಹೊಸ ನಾಯಕ: ಅಂದು ನಾಯಕತ್ವ ತ್ಯಜಿಸಿದ್ದ ಪ್ಲೇಯರ್ ಮತ್ತೆ ಕ್ಯಾಪ್ಟನ್!

ಕೋಲಾರದಲ್ಲಿ ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಆಗ್ರಹದೊಂದಿಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ರಾಜೀನಾಮೆ ಬೆದರಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News