ಬಿಜೆಪಿ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ,ದಬ್ಬಾಳಿಕೆ:ಡಿ.ಕೆ.ಸುರೇಶ್ ಆಕ್ರೋಶ

ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳು ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ.ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು ಎಂದು ಡಿ ಕೆ ಸುರೇಶ್ ಹೇಳಿದ್ದಾರೆ. 

Written by - Ranjitha R K | Last Updated : Apr 18, 2024, 05:21 PM IST
  • ಬಿಜೆಪಿ ಜೆಡಿಎಸ್ ವಿರುದ್ದ ವಾಗ್ದಾಳಿ
  • ಬಿಜೆಪಿ ವಿರುದ್ದ ಡಿ.ಕೆ ಸುರೇಶ್ ಆರೋಪ
  • "ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ"
ಬಿಜೆಪಿ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ,ದಬ್ಬಾಳಿಕೆ:ಡಿ.ಕೆ.ಸುರೇಶ್ ಆಕ್ರೋಶ title=

ಆನೇಕಲ್ :ಬಿಜೆಪಿ ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ” ಎಂದು ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದ್ದಾರೆ. 

ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ.ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣುಮಕ್ಕಳನ್ನು ಬೆದರಿಸಿದ್ದಾರೆ.ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಬರೆಯುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ.ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಇದನ್ನೂ ಓದಿ : ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶ

ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳು ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ.ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು.ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಹೊರತು,ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ. 

“ಜನತಾದಳ ಹಾಗೂ ಜೆಡಿಎಸ್ ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ.ದೇವೇಗೌಡರು ಹಿರಿಯರು, ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದಿದ್ದಾರೆ. ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿರುವುದಾಗಿ ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲಾ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ.ಅವರು ಯಾರ ಜಮಿನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು.ಆದರೆ ಅದರ ಅಗತ್ಯ ನಮಗಿಲ್ಲ” ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತಿ ಡಿ.ಕೆ. ಸುರೇಶ್ ಗೆಲುವಿಗೆ ಪ್ರಾರ್ಥಿಸಿದ ಅಭಿಮಾನಿಗಳು'

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News