ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿ.ಕೆ. ಸುರೇಶ್ ವಾಗ್ದಾಳಿ

ರಾಮನಗರದಲ್ಲಿ ಸಹಸ್ರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜತೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸುರೇಶ್ ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಬಾವುಟದ ಪೇಟ ಧರಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.  

Written by - Ranjitha R K | Last Updated : Mar 28, 2024, 06:43 PM IST
  • ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
  • ನಾಮಪತ್ರ ಸಲ್ಲಿಕೆಗೂ ಮುನ್ನ ಪೂಜೆ
  • ಎದುರಾಳಿ ವಿರುದ್ದ ಡಿಕೆಸು ವಾಗ್ದಾಳಿ
ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿ.ಕೆ. ಸುರೇಶ್ ವಾಗ್ದಾಳಿ title=

ರಾಮನಗರ : “ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ,ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಎಲ್ಲರೂ ಒಂದಾಗಿದ್ದಾರಂತೆ ಅದಕ್ಕೆ ನನ್ನನ್ನು ಸೋಲಿಸುತ್ತಾರಂತೆ? ಏತಕ್ಕೆ ನನ್ನ ಸೋಲಿಸುತ್ತೀರ? ಬಡವರ ಪರವಾಗಿ, ರೈತರ ಪರವಾಗಿ, ಕನ್ನಡಿಗರ ಪರವಾಗಿ ದನಿ ಎತ್ತಿದಕ್ಕಾ? ನಿಮ್ಮ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದಕ್ಕೆ ನನ್ನನ್ನು ಸೋಲಿಸಲು ಹೊರಟ್ಟಿದ್ದೀರಾ? ಅವರಿಗೆ ನಿಜ ಜೀವನಕ್ಕೂ ಸಿನಿಮಾಗೂ ವ್ಯತ್ಯಾಸ ಗೊತ್ತಿಲ್ಲ. ನಿಜ ಜೀವನದಲ್ಲಿ ಸೋಲಿಸಬೇಕೇ ಹೊರತು, ಸಿನಿಮಾದಲ್ಲಿ ಅಲ್ಲ ಎಂದು ಹೇಳಿದ್ದಾರೆ.  

ಇದನ್ನೂ ಓದಿ : Lok Sabha Election 2024: ಈ ಆಪ್ ಗಳಿಂದ ಅಂಗೈಯಲ್ಲಿ ಸಿಗಲಿದೆ ಚುನಾವಣಾ ಮಾಹಿತಿ...!

ಮುಂದಿನ ಮೂವತ್ತು ದಿನಗಳ ಕಾಲ ಯಾರು, ಯಾರು ಏನು ಮಾತನಾಡುತ್ತಾರೆ ಎಂಬುದನ್ನು ನಾವು, ನೀವು ಕೇಳಬೇಕಾಗಿದೆ. ಅದಕ್ಕೆ ಉತ್ತರ ಕೊಡುವ ಕಾಲ ಮುಂದಿದೆ. ಕಣ್ಣೀರು ಹಾಕುವವರಿಗೆ ಈ ಚುನಾವಣೆಗೆ ಒಂದು ಕರ್ಮಭೂಮಿ, ಇನ್ನೊಂದು ಚುನಾವಣೆಗೆ ಮತ್ತೊಂದು ಕರ್ಮಭೂಮಿ.ಯಾವ, ಯಾವ ಕರ್ಮಭೂಮಿಯಲ್ಲಿ ಏನೇನು ಸುಳ್ಳು ಹೇಳಿದ್ದಾರೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ನಾವು ಮುಂದಿನ 4 ವರ್ಷಗಳ ಕಾಲ ರಾಜ್ಯದ ಜನರ ಕಷ್ಟಗಳನ್ನು ಪರಿಹರಿಸಲು ಬದ್ಧರಾಗಿದ್ದೇವೆ.ಸುಳ್ಳಿನ ಗ್ಯಾರಂಟಿಗಳನ್ನು ಹೊತ್ತುಕೊಂಡು ಬಿಜೆಪಿಯವರು ಮತ ಕೇಳಲು ಬರುತ್ತಿದ್ದಾರೆ. ಸುಳ್ಳು ಹೇಳುವವರ ಜೊತೆ ಕಣ್ಣೀರು ಹಾಕುವವರು ಸೇರಿಕೊಂಡಿದ್ದಾರೆ.ಆದರೆ ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಹೇಳಿದ್ದಾರೆ.  

ಇದನ್ನೂ ಓದಿ : ಅಕ್ರಮ ಮದ್ಯ ಸಾಗಾಣಿಕೆ: 03 ಪ್ರಕರಣ ದಾಖಲು

ಐದು ಗ್ಯಾರಂಟಿಗಳನ್ನು ರಾಜ್ಯದ ಎಲ್ಲಾ ಜನರಿಗೆ ನೀಡಿದ್ದೇವೆ.ಜೆಡಿಎಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಿಗೆ ಮತಹಾಕಿದ ಜನರಿಗೂ ನಮ್ಮ ಗ್ಯಾರಂಟಿಗಳು ತಲುಪುತ್ತಿವೆ. ಎಲ್ಲರ ಮನೆಯಲ್ಲಿ ವಿದ್ಯುತ್ ದೀಪ ಉರಿಯುತ್ತಿದೆ. ಗೃಹಲಕ್ಷ್ಮಿ ತಲುಪುತ್ತಿದೆ, ಅಕ್ಕಿ,ಹಣ,ಯುವನಿಧಿ ತಲುಪುತ್ತಿದೆ. ಇವು ಮೋದಿ ಗ್ಯಾರಂಟಿಯಿಂದಾಗಿಲ್ಲ, ಕಾಂಗ್ರೆಸ್ ಗ್ಯಾರಂಟಿಯಿಂದ ಆಗಿದೆ ಎಂದು ಹೇಳಿದ್ದಾರೆ. 

ದೇವರಿಗೆ ಪೂಜೆ ಸಲ್ಲಿಸಿ, ಕನ್ನಡ ಪೇಟ ಧರಿಸಿ ನಾಮಪತ್ರ ಸಲ್ಲಿಕೆ:
ಗುರುವಾರ ಬೆಳಗ್ಗೆ ತಮ್ಮ ತಾಯಿ ಗೌರಮ್ಮ, ಸಹೋದರ ಡಿ.ಕೆ ಶಿವಕುಮಾರ್, ಅತ್ತಿಗೆ ಉಷಾ, ಅಣ್ಣನ ಮಗಳು ಐಶ್ವರ್ಯ ಡಿಕೆಎಸ್ ಹೆಗ್ಡೆ ಜೊತೆಗೂಡಿ ಸಾತನೂರಿನ ಕಬ್ಬಾಳಮ್ಮ, ಮನೆದೇವರಾದ ಕನಕಪುರದ ಕೆಂಕೇರಮ್ಮ, ರಾಮನಗರದ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು. 

ನಂತರ ರಾಮನಗರದಲ್ಲಿ ಸಹಸ್ರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜತೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸುರೇಶ್ ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಬಾವುಟದ ಪೇಟ ಧರಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಮಾಗಡಿ ಶಾಸಕರಾದ ಬಾಲಕೃಷ್ಣ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News