ಸಾಲ ಮನ್ನಾ ಬಗ್ಗೆ ಗೊಂದಲ ಬೇಡ: ಸಿಎಂ ಕುಮಾರಸ್ವಾಮಿ

ಸಾಲ ಮನ್ನಾ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

Last Updated : Jun 15, 2018, 11:49 AM IST
ಸಾಲ ಮನ್ನಾ ಬಗ್ಗೆ ಗೊಂದಲ ಬೇಡ: ಸಿಎಂ ಕುಮಾರಸ್ವಾಮಿ title=

ಬೆಂಗಳೂರು: ಸಾಲ ಮನ್ನಾ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ದೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ" ಎಂದು ಹೇಳಿದ್ದಾರೆ.

ನೂತನ ಸರ್ಕಾರ ಕೃಷಿ ಸಾಲ ಮನ್ನಾ ಮಾಡುವುದೇ, ಇಲ್ಲವೇ ಎಂದು ಗೊಂದಲಕ್ಕೀಡಾಗಿರುವ ರೈತರಿಗೆ ಈಗಾಗಲೇ ಕೃಷಿ ಸಾಲದ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸಲಾಗಿದ್ದು, ಜುಲೈ ಮೊದಲ ವಾರದಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್'ನಲ್ಲಿ ರೈತರ ಕೃಷಿ ಸಾಲಮನ್ನಾ ಬಗ್ಗೆ ಪ್ರಕಟಿಸುವುದಾಗಿ ಗುರುವಾರ ತಿಳಿಸಿದ್ದ ಕುಮಾರಸ್ವಾಮಿ ಅವರು, ಸಾಲ ಮನ್ನಾದ ಬಗ್ಗೆ ರೈತರು ಆತಂಕಪಡುವ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ. ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೆ ತಾಳ್ಮೆಯಿಂದ ಕಾಯಬೇಕು ಎಂದಿದ್ದರು.

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಭರವಸೆ ನೀಡಿತ್ತು. ಇದರ ಪ್ರಕಾರ ರಾಜ್ಯದ ರಯ್ತ್ರ ಕೃಷಿ ಸಾಲ ಮನ್ನಾ ಮಾಡಿದರೆ ಸರ್ಕಾರ 53 ಸಾವಿರ ಕೋಟಿಗಳಷ್ಟು ಹಣದ ಹೊರೆಯನ್ನು ಹೊರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಿಎಂ ಕುಮಾರಸ್ವಾಮಿ ಅವರು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ಬಗ್ಗೆ ಸಂಪೂರ್ಣ ವಿವರ ಪಡೆಡಿದ್ದು, ಸಾಲಮನ್ನಾ ಮಾಡಲು ಬೇಕಾದ ಸಂಪನ್ಮೂಲ ಕ್ರೋಡೀಕರಣಕ್ಕಾಗಿಯೇ ವಿಶೇಷ ಅಧಿಕಾರಿಗಳ ತಂಡವನ್ನೂ ರಚಿಸಿದ್ದಾರೆ.

Trending News