ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚುವುದು ಹೇಗೆ ಗೊತ್ತೇ?

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಯಾವುದೇ ಪಕ್ಷಗಳು ಕಣಕ್ಕೆ ಇಳಿಯಲು ಅವಕಾಶ ಇರದಿಲ್ಲದಿರುವುದರಿಂದಾಗಿ ಇಲ್ಲಿ ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವೇ ತಾನು ನಿಗದಿಪಡಿಸಿದ ಚಿಹ್ನೆಗಳನ್ನು ವಿತರಿಸುತ್ತದೆ.

Last Updated : Dec 15, 2020, 08:15 PM IST
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚುವುದು ಹೇಗೆ ಗೊತ್ತೇ?  title=
Photo Courtesy: Facebook

ಬೆಂಗಳೂರು: ಗ್ರಾಮ ಪಂಚಾಯತ ಚುನಾವಣೆಯಲ್ಲಿ ಯಾವುದೇ ಪಕ್ಷಗಳು ಕಣಕ್ಕೆ ಇಳಿಯಲು ಅವಕಾಶ ಇರದಿಲ್ಲದಿರುವುದರಿಂದಾಗಿ ಇಲ್ಲಿ ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವೇ ತಾನು ನಿಗದಿಪಡಿಸಿದ ಚಿಹ್ನೆಗಳನ್ನು ವಿತರಿಸುತ್ತದೆ.

ಕರ್ನಾಟಕ ಪಂಚಾಯತ್ ರಾಜ್ ನಿಯಮಗಳು, 1993ರ ನಿಯಮ 21 ರಂತೆ ರಾಜ್ಯ ಚುನಾವಣಾ ಆಯೋಗವು ಆಧಿಸೂಚನೆಯ ಮೂಲಕ ಅದು ಮುಕ್ತ ಚಿಹ್ನೆಗಳ ಪಟ್ಟಿಯನ್ನು ಪ್ರಕಟಿಸುತ್ತದೆ. ರಾಷ್ಟ್ರೀಯ ಪ್ರಾದೇಶಿಕ ಹಾಗೂ ಇತರ ನೋಂದಾಯಿತ ಮಾನ್ಯತೆ ಪಡೆದ ಪಕ್ಷಗಳಿಗೆ ಈಗಾಗಲೇ ಹಂಚಿಯಾಗಿರುವ ಚಿನ್ಹೆಗಳನ್ನು ಹೊರತುಪಡಿಸಿ ಹಂಚಿಕೆಗೆ ಮುಕ್ತವಾಗಿರುವ ಚಿನ್ಹೆಗಳ ಪೈಕಿ ಯಾವುದಾದರೂ ಒಂದು ಚಿನ್ಹೆಯನ್ನು ಅಭ್ಯರ್ಥಿಗಳು ನಾಮಪತ್ರದಲ್ಲಿ ನಮೂದಿಸಬೇಕು. ಆ ಚಿಹ್ನೆಗಳ ವಿನಹಃ ಬೇರೆ ಯಾವುದೇ ಚಿಹ್ನೆಯನ್ನು ಯಾವುದೇ ಅಭ್ಯರ್ಥಿಗಳಿಗೆ ನೀಡುವುದಿಲ್ಲ.

ಗ್ರಾ. ಪಂ. ಚುನಾವಣೆ: ಅಭ್ಯರ್ಥಿಗಳಿಂದ ಚುನಾವಣೆ ಪ್ರಚಾರಕ್ಕೆ 'ಹೈಟೆಕ್ ಟಚ್'..!

ನಿಯಮ 22 ರಂತೆ ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನಾಮಪತ್ರದ ಕ್ರಮಾಂಕವನ್ನು ಅನುಸರಿಸಿ ಹಂಚಿಕೆ ಮಾಡಲಾಗುತ್ತೆದೆ ಆದರೆ ಆ ಮೊದಲು ಯಾವುದೇ ಇಬ್ಬರು ಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿದ್ದಾರೆಯೇ ಎಂಬುದನ್ನು ಪರಿಶೀಲಿಸಿ, ಒಂದು ವೇಳೆ ಯಾವುದೇ ಇಬ್ಬರು ಅಥವಾ ಹೆಚ್ಚು ಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿದ್ದಲ್ಲಿ ನಿಯಮ 22 (5)(ಎ) ಪ್ರಕಾರ ಯಾರಿಗೆ ಆ ಚಿಹ್ನೆಯನ್ನು ನೀಡಬೇಕೆಂಬುದನ್ನು ಚೀಟಿ ಎತ್ತುವ ಮೂಲಕ ತೀರ್ಮಾನಿಸಲಾಗುತ್ತದೆ. ಉಳಿದ ಅಭ್ಯರ್ಥಿಗಳಿಗೆ ಅವರು ಕೋರಿದ 2ನೆಯ ಅಥವಾ 3ನೆಯ ಚಿಹ್ನೆಯನ್ನು ನಿಯಮ 22ನ್ನು ಅನುಸರಿಸಿ ನೀಡಲಾಗುವುದು.

ಗ್ರಾಮ ಪಂಚಾಯತಿ ಚುನಾವಣೆ: ಸದಾಚಾರ ನೀತಿ ಸಂಹಿತೆಯಲ್ಲಿ ಯಾವುದಕ್ಕೆಲ್ಲಾ ನಿರ್ಬಂಧ..!

ಉಮೇದುವಾರರಿಗೆ ಮಂಜೂರು ಮಾಡಿದ ಚುನಾವಣಾ ಚಿಹ್ನೆಯ ಮಾದರಿ ಪ್ರತಿಯನ್ನು ಸ್ಪರ್ದಿಸುವ ಅಭ್ಯರ್ಥಿಗೆ ಅಥವಾ ಚುನಾವಣಾ ಏಜಂಟನಿಗೆ ನೀಡಿ ಸ್ವೀಕೃತಿ ಪಡೆದುಕೊಳ್ಳಲಾಗುತ್ತದೆ.ಯಾವುದೇ ಅಭ್ಯರ್ಥಿಯು ಹಾಜರಿಲ್ಲದಿದ್ದಲ್ಲಿ ಚುನಾವಣಾಧಿಕಾರಿಯು ಆ ಅಭ್ಯರ್ಥಿಗೆ ಮಂಜೂರು ಮಾಡಿರುವ ಚಿಹ್ನೆಯ ಬಗ್ಗೆ ನಡವಳಿ ಮಾಡಿ, ಇತರೆ ಅಭ್ಯರ್ಥಿಗಳಿಂದ ಸಹಿ ಪಡೆದುಕೊಳ್ಳುವರು.

ಕ್ಷೇತ್ರವಾರು ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ, ಅವರಿಗೆ ಚುನಾವಣಾ ಚಿಹ್ನೆಯನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಆಯಾ ಕ್ಷೇತ್ರದ ಅಭ್ಯರ್ಥಿಗಳು ಮಾತ್ರ ಹಾಜರಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ, ಕ್ರಮವಾಗಿ ಒಬ್ಬೊಬ್ಬರನ್ನೇ ಕರೆದು ಅವರಿಗೆ ನಿಯಮವನ್ನನುಸರಿಸಿ ಚುನಾವಣಾ ಚಿಹ್ನೆಯನ್ನು ಹಂಚಿಕೆ ಮಾಡಲಾಗುತ್ತದೆ. ಹೆಚ್ಚಿನ ಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿರುವ ಸಂದರ್ಭದಲ್ಲಿ ಲಾಟರಿ ಮೂಲಕ ಚಿಹ್ನೆಯನ್ನು ಹಂಚಿಕೆ ಮಾಡಬೇಕಾಗಿರುವುದರಿಂದ, ಇಂತಹ ಎಲ್ಲಾ ಅಭ್ಯರ್ಥಿಯನ್ನು ಕರೆದು ಚಿಹ್ನೆಯನ್ನು ಹಂಚಿಕೆ ಮಾಡಬಹುದಾಗಿದೆ.

Trending News